![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 21, 2020, 3:37 PM IST
ಚಿಕ್ಕೋಡಿ: ನಿಪ್ಪಾಣಿ ಕ್ಷೇತ್ರದ ಜನಗಳೆಲ್ಲ ನನ್ನ ಮಕ್ಕಳೆಂದು ಭಾವಿಸಿ, ಅವರ ಆರೋಗ್ಯಕ್ಕೆ ಒತ್ತು ನೀಡುತ್ತ, ಅವರ ಕಾಳಜಿ ವಹಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಲೇ ಇದ್ದೇನೆ. ಅವರಿಗಾಗಿ ಹೊಸ ತಂತ್ರಜ್ಞಾನಗಳನ್ನು ಬಳಸಿ, ಅತ್ಯುತ್ತಮ ಜೀವನಶೆ„ಲಿ ನೀಡುವ ಪಣ ತೊಟ್ಟಿದ್ದೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಿಪ್ಪಾಣಿ ನಗರಸಭೆಯಲ್ಲಿ ತಾಲೂಕು ಆಡಳಿತ, ನಗರಸಭೆ, ಪೊಲೀಸ್, ಶಿಕ್ಷಣ ಇಲಾಖೆ, ವೈದ್ಯಕೀಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಆಕ್ಸಿಮೀಟರ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ನಗರದ 31 ವಾರ್ಡ್‌ಗಳಿಗಾಗಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ 31 ಆಕ್ಸಿ ಮೀಟರ್‌ಗಳನ್ನು ವಿತರಿಸಲಾಗಿದೆ. ಈ ಮೂಲಕ ನಾಗರಿಕರ ತಪಾಸಣೆ ನಡೆಸಿ ಆಕ್ಸಿಜನ್ ಕಡಿಮೆ ಇದ್ದವರನ್ನು ಗುರುತಿಸಿ ಇದೆ ಆ.24ರಿಂದ ಸಮೀಪದ ಶಿವಶಂಕರ ಜೊಲ್ಲೆ ಪಬ್ಲಿಕ್ ಸ್ಕೂಲ್‌ನಲ್ಲಿ ಆರಂಭಿಸಲಾಗುವ 40 ಹಾಸಿಗೆಗಳುಳ್ಳ ಕೋವಿಡ್ ಸೆಂಟರ್‌ನಲ್ಲಿ ಉಪಚಾರ ನೀಡಲಾಗುವುದು ಎಂದರು.
ಕೋವಿಡ್ ಸೋಂಕನ್ನು ಹೋಗಲಾಡಿಸುವುದು ಪ್ರತಿಯೊಬ್ಬರ ಕೈಯಲ್ಲಿದೆ. ಎಲ್ಲರೂ ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಳಸುತ್ತ, ಅಂತರ ಕಾಯ್ದುಕೊಳ್ಳಲು ಮರೆಯಬೇಡಿ ಎಂದು ಕಿವಿಮಾತು ಹೇಳಿದರು. ಸಂಸದ ಅಣ್ಣಾಸಾಹೇಬ ಜೊಲ್ಲೆ, ಪೌರಾಯುಕ್ತ ಮಹಾವೀರ ಬೊರಣ್ಣವರ, ವೈದ್ಯಾಧಿಕಾರಿ ಡಾ. ಸೀಮಾ ಗುಂಜಾಳೆ, ಬಿಜೆಪಿ ನಗರ ಘಟಕ ಅಧ್ಯಕ್ಷ ಪ್ರಣವ ಮಾನವಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.