ಮಳೆ ಕೊರತೆಗೆ ಕೃಷಿ ಚಟುವಟಿಕೆಗೆ ಗರ

•ಶೇ.78 ಮಳೆ ಕೊರತೆ•ಮುಂಗಾರು ಪೂರ್ವ ಮಳೆಯೂ ಕಮ್ಮಿ ಕಮ್ಮಿ•ಸಿಗುತ್ತಿಲ್ಲ ಕುಡಿವ ನೀರು-ಮೇವು

Team Udayavani, Jun 3, 2019, 10:25 AM IST

bg-tdy-1..

ಬೆಳಗಾವಿ: ಮಳೆಕೊರತೆಯಿಂದ ಕೃಷಿ ಚಟುವಟಿಕೆಯಿಲ್ಲದೆ ಖಾಲಿ ಕಾಣುತ್ತಿರುವ ಕೃಷಿಭೂಮಿ.

ಬೆಳಗಾವಿ: ಸತತ ಭೀಕರ ಬರದಿಂದ ಕಂಗೆಟ್ಟಿರುವ ಗಡಿನಾಡು ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಪೂರ್ವ ಮಳೆ ಸಹ ಆತಂಕ ತಂದಿಟ್ಟಿದೆ. ವಾಡಿಕೆಗಿಂತ ಪ್ರತಿಶತ 78 ರಷ್ಟು ಮಳೆಯ ಕೊರತೆ ಉಂಟಾಗಿರುವದು ಈ ಆತಂಕಕ್ಕೆ ಕಾರಣ. ಮಳೆಯ ತೀವ್ರ ಅಭಾವದಿಂದಾಗಿ ಈ ವೇಳೆಗೆ ಅಲ್ಲಲ್ಲಿ ಕಾಣುತ್ತಿದ್ದ ಕೃಷಿ ಚಟುವಟಕೆಗಳಿಗೆ ಗರ ಬಡಿದಿದೆ.

ಮಾರ್ಚ್‌, ಏಪ್ರಿಲ್ ಹಾಗೂ ಮೇ ತಿಂಗಳು ಮುಂಗಾರು ಪೂರ್ವ ಮಳೆಯ ಅವಧಿ. ಈ ಮೂರು ತಿಂಗಳಲ್ಲಿ ಬರುವ ಮಳೆ ಕೃಷಿ ಚಟುವಟಿಕೆಗಳಿಗೆ ನೀರು ನೀಡುತ್ತದೆ. ರೈತರು ಭೂಮಿ ಹಸನು ಮಾಡಿಕೊಳ್ಳುತ್ತಾರೆ. ಆದರಲ್ಲೂ ಮೇ ಎರಡನೇ ವಾರದಲ್ಲಿ ಬೀಳುವ ಮಳೆ ಕೃಷಿ ಕಾರ್ಯ ಬಹಳ ಜೋರಾಗಿ ನಡೆಯುವಂತೆ ಮಾಡುತ್ತದೆ.

ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯ ಕೆಲ ಭಾಗಗಳಲ್ಲಿ ಬಿದ್ದ ಅಡ್ಡ ಮಳೆ ರೈತ ಸಮುದಾಯದಲ್ಲಿ ಒಂದಿಷ್ಟು ಆಶಾಭಾವನೆ ಹುಟ್ಟಿಸಿತ್ತು. ಮೇ ತಿಂಗಳಲ್ಲಿ ಸಹ ಇದೇ ರೀತಿ ಮಳೆಯಾದರೆ ನಮ್ಮ ಬಿತ್ತನೆಗೆ ಸಮಸ್ಯೆ ಇಲ್ಲ ಎಂದೇ ರೈತರು ಭಾವಿಸಿದ್ದರು. ಆದರೆ ಮೇ ತಿಂಗಳಲ್ಲಿ ಮಳೆಯೇ ಬೀಳಲಿಲ್ಲ. ಇದರಿಂದ ಮತ್ತೆ ಬರದ ಭಯ ರೈತರಲ್ಲಿ ಮೂಡಿದೆ. ಮುಂಗಾರು ಪೂರ್ವ ಮಳೆಗೂ ಬರದ ಛಾಯೆ ಆವರಿಸಿದೆ.

ಕಳೆದ ಮೂರ್‍ನಾಲ್ಕು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಮುಂಗಾರು ಪೂರ್ವ ಮಳೆ ರೈತರ ಕೈಹಿಡಿದಿಲ್ಲ. ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿದ್ದರೆ ಇನ್ನೊಂದು ಕಡೆ ನೀರಿನ ಹಾಹಾಕಾರ ಹೆಚ್ಚಿದೆ. ಜಾನುವಾರುಗಳಿಗೆ ಕುಡಿಯುವ ನೀರಿನ ಜೊತೆಗೆ ಮೇವಿನ ಸಮಸ್ಯೆ ಆರಂಭವಾಗಿದೆ. ವಾಡಿಕೆಗೆ ಹತ್ತಿರವೂ ಇಲ್ಲ

ಸಾಮಾನ್ಯವಾಗಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಅವದಿಯಲ್ಲಿ ಅಂದರೆ ಮಾರ್ಚ್‌ ದಿಂದ ಮೇ ವರೆಗೆ ವಾಡಿಕೆಯಂತೆ ಶೇ.76 ರಷ್ಟು ಮಳೆಯಾಗಬೇಕು. ಆದರೆ ಈ ವರ್ಷ ಆಗಿದ್ದು ಕೇವಲ ಶೇ.17.1 ರಷ್ಟು ಮಾತ್ರ. ಆದರೆ ಕಳೆದ ವರ್ಷ ಅಂದರೆ 2018 ರಲ್ಲಿ ವಾಡಿಕೆಗಿಂತ ಶೇ.18 ರಷ್ಟು ಹೆಚ್ಚು ಮಳೆಯಾಗಿತ್ತು. ಆಗ ಸುಮಾರು 22 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಸಹ ನಡೆದಿತ್ತು. ಈ ವರ್ಷ ಮಳೆಯೇ ಆಗದ್ದರಿಂದ ಇದುವರೆಗೆ ಎಲ್ಲಿಯೂ ಬಿತ್ತನೆ ನಡೆದಿಲ್ಲ. ಅನೇಕ ಕಡೆ ಭೂಮಿ ಹಸನು ಮಾಡಿಕೊಳ್ಳುವ ಕಾರ್ಯಕ್ಕೆ ಚಾಲನೆಯೂ ಸಿಕ್ಕಿಲ್ಲ.

ಈ ವರ್ಷ ವಾಡಿಕೆಗಿಂತ ಬಹಳ ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದಿದೆ. ಪ್ರತಿ ವರ್ಷ ಮೇ ಎರಡನೇ ವಾರದಲ್ಲಿ ಉತ್ತಮ ಮುಂಗಾರು ಪೂರ್ವ ಮಳೆಯಾಗಿ ಕೃಷಿ ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತಿದ್ದವು. ಆದರೆ ಈಗ ಅಂತಹ ಸ್ಥಿತಿ ಇಲ್ಲ. ಈಗಲೂ ಸಮಯ ಮೀರಿಲ್ಲ. ಒಳ್ಳೆಯ ಮಳೆ ಬಿದ್ದರೆ ಸೋಯಾ, ಹೆಸರು, ಉದ್ದು, ಮೊದಲಾದ ಬೆಳೆಗಳಿಗೆ ಬಹಳ ಅನುಕೂಲವಾಗುತ್ತದೆ. ರೈತರಿಗೆ ಕೃಷಿ ಚಟುವಟಿಕೆಗಳಿಗೆ ಬೇಕಾದ ಕೃಷಿ ಪರಿಕರಗಳನ್ನು ಒದಗಿಸಲು ಇಲಾಖೆಯಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಎಚ್ ಮೊಕಾಸಿ ಉದಯವಾಣಿಗೆ ಹೇಳಿದರು.

ಕೃಷಿ ಇಲಾಖೆಯು ಪ್ರತಿ ವರ್ಷದಂತೆ ಬಿತ್ತನೆ ಕಾರ್ಯಕ್ಕೆ ಅಗತ್ಯವಾದ ಬೀಜ ಹಾಗೂ ಗೊಬ್ಬರ ದಾಸ್ತಾನು ಮಾಡಿಟ್ಟುಕೊಂಡಿದೆ. ರೈತರ ಅನುಕೂಲಕ್ಕಾಗಿ ಇಲಾಖೆಯು ಬೀಜ ಮತ್ತು ಗೊಬ್ಬರದ ವಿರರಣೆಗೆ 122 ಕೇಂದ್ರಗಳನ್ನು ಸ್ಥಾಪಿಸಿದೆ. ಆದರೆ ಮಳೆಯೇ ಇಲ್ಲದೆ ರೈತರು ಬೀಜ ಹಾಗೂ ಗೊಬ್ಬರದ ಖರೀದಿಗೆ ಮುಂದೆ ಬರುತ್ತಿಲ್ಲ.

ಟಾಪ್ ನ್ಯೂಸ್

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

1

Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ

police crime

Belgavi; ಕರಾಳ ದಿನಾಚರಣೆ ನಡೆಸಿದ ಎಂಇಎಸ್ ನವರ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.