![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 6, 2019, 9:38 AM IST
ಬೆಳಗಾವಿ: ರಂಜಾನ್ ಹಬ್ಬದ ಅಂಗವಾಗಿ ಬೆಳಗಾವಿಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬೆಳಗಾವಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಬುಧವಾರ ಪವಿತ್ರ ರಂಜಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು. ಹಬ್ಬದ ಹಿನ್ನೆಲೆಯಲ್ಲಿ ಅಸಂಖ್ಯಾತ ಮುಸ್ಲಿಂ ಬಾಂಧವರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಇಸ್ಲಾಂ ಧರ್ಮಗುರುಗಳು ಕುರಾನ್ ಪಠಣ ಮಾಡಿದರು.
ಬೆಳಗಾವಿಯಲ್ಲಿ ರಂಜಾನ್ ಹಬ್ಬಕ್ಕೆ ವಿಶೇಷ ಮೆರಗು ಬಂದಿತ್ತು. ಒಂದು ತಿಂಗಳ ಕಾಲ ಉಪವಾಸ ವೃತ ಆಚರಿಸಿದ ಮುಸ್ಲಿಂ ಬಾಂಧವರು ರಂಜಾನ್ ಹಬ್ವವನ್ನು ಸಡಗರದಿಂದ ಆಚರಿಸಿ ಉಪವಾಸ ಅಂತ್ಯಗೊಳಿಸಿದರು. ಬೆಳಗ್ಗೆ ಕೋಟೆ ಆವರಣದಲ್ಲಿನ ಪುರಾತನ ಮಸೀದಿ ಸೇರಿದಂತೆ ವಿವಿಧ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಬಳಿಕ ಪ್ರತಿಯೊಬ್ಬರೂ ಪರಸ್ಪರ ಶುಭಾಶಯ ಹಂಚಿಕೊಂಡರು.
ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಬಳಿ ಇರುವ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಮಾಜಿ ಶಾಸಕ ಫಿರೋಜ ಸೇs್ ಎಲ್ಲರಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳು ಸಹ ಹಬ್ಬದ ಶುಭಾಶಯ ಹಂಚಿಕೊಂಡರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.