ನೆರೆಗೆ ಮತ್ತೆ ತತ್ತರಿಸಿದ ರಾಮದುರ್ಗ
Team Udayavani, Sep 9, 2019, 10:26 AM IST
ರಾಮದುರ್ಗ: ನವಿಲು ತೀರ್ಥ ಅಣೆಕಟ್ಟಿನಿಂದ ಅಧಿಕ ನೀರು ಹರಿಬಿಟ್ಟ ಕಾರಣ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಮಲಪ್ರಭೆ.
ರಾಮದುರ್ಗ: ‘ಹೋದೆಯಾ ಪಿಶಾಚಿ ಎಂದರೆ ಮತ್ತೇ ಬಂದೆಯಾ ರಾಕ್ಷಸಿ’ ಎನ್ನುವಂತಾಗಿದೆ ಪ್ರವಾಹ ಸಂತ್ರಸ್ತರ ಬದುಕು. ಪ್ರವಾಹದ ಕಹಿ ನೆನಪು ಮಾಸುವ ಮೊದಲೇ ಮತ್ತೆ ಪ್ರವಾಹದ ಕಾರ್ಮೋಡ ಕವಿದಿದೆ.
ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಉಂಟಾದ ಪ್ರವಾಹ ಈಗ ಮತ್ತೆ ಸೆಪ್ಟೆಂಬರ್ ಮೊದಲ ವಾರದಲ್ಲಿ ಪ್ರಾರಂಭವಾಗಿದ್ದು, ಕಳೆದೊಂದು ತಿಂಗಳಿಂದ ಸಂಕಷ್ಟ ಅನುಭವಿಸಿದ ನಿರಾಶ್ರಿತರು ಮತ್ತೆ ಆತಂಕಕ್ಕೆ ಪಡುವಂತೆ ಮಾಡಿದೆ. ಮುಂದೆ ನಮ್ಮ ಗತಿ ಏನಪ್ಪಾ ಎಂದು ತಲೆ ಮೇಲೆ ಕೈ ಇಟ್ಟುಕೊಂಡು ಕುಳಿತುಕೊಳ್ಳುವಂತೆ ಮಾಡಿದೆ ‘ಮಹಾ’ ಪ್ರವಾಹ. ಖಾನಾಪುರ ವ್ಯಾಪ್ತಿಯ ಸುತ್ತಮುತ್ತ ಭಾರಿ ಮಳೆ ಬೀಳುತ್ತಿರುವ ಕಾರಣದಿಂದಾಗಿ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ನಮೀಲು ತೀರ್ಥ ಡ್ಯಾಂನಿಂದ ಈಗಾಗಲೇ 20 ಸಾವಿರ ಕ್ಯೂಸೆಕ್‌ಗಿಂತ ಅಧಿಕ ನೀರನ್ನು ಹೊರಬಿಡಲಾಗಿದೆ. ತಾಲೂಕಿನ 29 ಗ್ರಾಮಗಳ ಹಾಗೂ ಪಟ್ಟಣದ ನಾಲ್ಕೈದು ವಾರ್ಡ್‌ಗಳಲ್ಲಿನ ಜನತೆ ಸುರಕ್ಷಿತ ಸ್ಥಳಕ್ಕೆ ತೆರಳಲು ಅಧಿಕಾರಿಗಳು ಸೂಚಿಸುತ್ತಿದ್ದಾರೆ.
ಸೇತುವೆಗಳು ಜಲಾವೃತ: ಪ್ರವಾಹದಿಂದಾಗಿ ಕಳೆದ 4 ದಿನಗಳಿಂದ ಪಟ್ಟಣದ ವೆಂಕಟೇಶ್ವರ ದೇವಸ್ಥಾನ ಹತ್ತಿರದ ಹಳೇ ಸೇತುವೆ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಇನ್ನೂ ರಾಮದುರ್ಗದಿಂದ ಘಟಕನೂರಕ್ಕೆ ಸಂಪರ್ಕ ಕಲ್ಪಿಸುವ ಒಳ ರಸ್ತೆಯ ಸೇತುವೆ ಹಾಗೂ ಹಂಪಿಹೊಳಿ-ಬೆನ್ನೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸೇತುವೆ ಸಂಪರ್ಕ ಕಡಿತಗೊಂಡಿವೆ.
ನೀರು ಹೆಚ್ಚಾದರೆ ರಸ್ತೆ ಸಂಚಾರ ಕಡಿತ: ಈಗ 20 ಸಾವಿರ ಕ್ಯೂಸೆಕ್ ನೀರು ಹರಿಬಿಟ್ಟ ಕಾರಣ ಈಗಾಗಲೇ ಗ್ರಾಮೀಣ ಪ್ರದೇಶದ ಕೆಲ ರಸ್ತೆಗಳ ಸಂಪರ್ಕ ಕಡಿತವಾಗಿದೆ. ಮಲಪ್ರಭೆ ಉಗಮ ಸ್ಥಾನವಾದ ಕಣಕುಂಬಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಒಳ ಹರಿವಿನ ಪ್ರಮಾಣ ಹೆಚ್ಚಾದಂತೆ ಅಧಿಕ ಪ್ರಮಾಣದ ನೀರನ್ನು ಬಿಟ್ಟರೆ ರಾಮದುರ್ಗದಿಂದ ತೆರಳುವ ಹುಬ್ಬಳ್ಳಿ ಹಾಗೂ ಬೆಳಗಾವಿ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಳ್ಳಲಿದೆ. ಕಳೆದ ಮೂರು ದಿನಗಳಿಂದ ನದಿಗೆ ಹರಿಬಿಡುತ್ತಿರುವ ನೀರಿನ ಪ್ರಮಾಣ ದಿನದಿಂದ-ದಿನಕ್ಕೆ ಹೆಚ್ಚುತ್ತಿದ್ದು, ಜನರಲ್ಲಿ ಇನ್ನೂ ಹೆಚ್ಚಿನ ಆತಂಕ ಮೂಡಿಸುತ್ತಿದೆ.
ನದಿ ಪಕ್ಕದ ಮನೆಗಳಿಗೆ ನುಗ್ಗಿದ ನೀರು: ಮಲಪ್ರಭಾ ನದಿಯ ಪಕ್ಕದ ಮನೆಗಳಿಗೆ ಈಗಾಗಲೇ ನೀರು ನುಗ್ಗಿದ್ದು, ಜನರೆಲ್ಲಾ ಮತ್ತೆ ಪರಿಹಾರ ಕೇಂದ್ರದತ್ತ ಮುಖ ಮಾಡಿದ್ದಾರೆ. ಇನ್ನೂ ಹೆಚ್ಚಿನ ನೀರು ಬಂದರೆ ಮನೆಗಳು ಸಂಪೂರ್ಣ ಜಲಾವೃತಗೊಂಡು ಅಳಿದುಳಿದ ಅವಶೇಷಗಳು ನೀರು ಪಾಲಾಗುವ ಸ್ಥಿತಿ ಬರಲಿದೆ.
ಆತಂಕದಲ್ಲಿ ನಿರಾಶ್ರಿತರು: ಕಳೆದ ತಿಂಗಳು ಉಂಟಾದ ಪ್ರವಾಹದಲ್ಲಿ ಮನೆ ಕಳೆದುಕೊಂಡು ಪರಿಹಾರ ಕೇಂದ್ರದಲ್ಲಿರುವ ನಿರಾಶ್ರಿತರು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ಶೆಡ್ ವ್ಯವಸ್ಥೆ ಮಾಡುವದಾಗಿ ಹೇಳಿರುವ ಮಾತು ಭರವಸೆಯಾಗಿದೆ ಹೊರತು ಕಾರ್ಯಗತವಾಗಿಲ್ಲ. ಹೀಗಿರುವಾಗಲೇ ಮತ್ತೆ ಪ್ರವಾಹ ಬಂದಿದ್ದು, ನಮ್ಮ ಗತಿ ಏನು? ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.