ಕವಟಗಿಮಠ ಸೋಲಿನ ಹೊಣೆ ಹೊರುವ ತಾಕತ್ ಇದೆ: ರಮೇಶ ಜಾರಕಿಹೊಳಿ
ಕೊನೆಯ ಮೂರು ದಿನ ಜಿಲ್ಲೆಯ ರಾಜಕೀಯ ಚಿತ್ರಣ ಬದಲಾಯಿತು
Team Udayavani, Dec 15, 2021, 9:30 PM IST
ಗೋಕಾಕ: ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಸೋಲು ನನ್ನ ತಲೆಗೆ ಕಟ್ಟುತ್ತಿದ್ದಾರೆ. ನನ್ನ ಬೆನ್ನಿಗೆ ಶಕ್ತಿ, ಹೊರುವ ತಾಕತ್ ಇದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಸೋಲಿಸುತ್ತೇನೆ ಅಂತ ಹಠಕ್ಕೆ ಬಿದ್ದಿದ್ದು ನಿಜ. ಚುನಾವಣೆಯ ಕೊನೆಯ ಮೂರು ದಿನಗಳಲ್ಲಿ ಜಿಲ್ಲೆಯ ಚಿತ್ರಣ ಬದಲಾಯಿತು. ಲಖನ್ ಜಾರಕಿಹೊಳಿ ಕೊನೆಯ ಮೂರು ದಿನ ನಮ್ಮ ಕೈಗೆ ಸಿಗಲಿಲ್ಲ. ಚುನಾವಣೆ ಚಿತ್ರಣ ಬದಲಾಗಿದ್ದಕ್ಕೆ ನಾನು ಬಿಜೆಪಿ ಪರ ಪ್ರಚಾರ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಪರ ಅವರು ಮಾಡಿದರು. ಪಕ್ಷೇತರ ಅಭ್ಯರ್ಥಿ ಲಖನ್ ಕೂಡ ಪ್ರಚಾರ ಮಾಡಿದರು. ಬಿಜೆಪಿ ಸೋಲಿನ ಸಂಚು ನಡೆದಿರುವ ಬಗ್ಗೆ ಕನ್‌ಫರ್ಮ್ ಇಲ್ಲ, ವಿಚಾರ ಮಾಡಿ ಮಾತನಾಡುತ್ತೇನೆ. ಸೋಲಿನ ಹೊಣೆ ಲೀಡರ್ ಆದವರಿಗೆ ಕಟ್ಟುತ್ತಾರೆ. ಇವತ್ತು ಅವರ ಪಕ್ಷ ಗೆದ್ದಿದೆ. ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಎಲ್ಲಿ ತಪ್ಪಿದೆ ಎಂಬುದು ಆಂತರಿಕವಾಗಿ ಚರ್ಚೆ ಮಾಡುತ್ತೇವೆ. ಕೆಲವೇ ದಿನಗಳಲ್ಲಿ ಬಹಿರಂಗವಾಗಿ ಡಿಕೆಶಿ ಹೇಳಿಕೆ ಬಗ್ಗೆ ಕಠೊರ ಉತ್ತರ ಕೊಡುತ್ತೇನೆ ಎಂದರು.
ಇದನ್ನೂ ಓದಿ:ಬೆಂಗಳೂರಿಗೆ ಹೊರಟಿದ್ದ ರೈಲಿಗೆ ಹುಸಿ ಬಾಂಬ್ ಕರೆ: ಬಂಧನ
ಹಿಂದುಳಿದ ವರ್ಗಗಳ ನಾಯಕರು ಬೆಳೆಯುತ್ತಿರುವುದರಿಂದ ಸಿದ್ದರಾಮಯ್ಯ ಹತಾಶೆಗೊಳಗಾಗಿದ್ದಾರೆ. ಅವರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಅವರಿಂದ ಏನೂ ಆಗುವುದಿಲ್ಲ. ನಮ್ಮ ಪಕ್ಷದಲ್ಲಿ ಏನಾಗಿದೆ, ಏನಿಲ್ಲ ಎಂಬುದು ನಮ್ಮ ವರಿಷ್ಠರ ಜತೆಗೆ ಮಾತನಾಡಿದ್ದೇನೆ. ಏಕೆ ಸೋತಿದೆ ಎಂದು ಚರ್ಚೆ ಮಾಡಿ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ಡಿ.ಕೆ.ಶಿವಕುಮಾರ್ ಬಗ್ಗೆ ಬಹಳ ಕಠೊರವಾಗಿ ಹೇಳುವನಿದ್ದೆ. ಆದರೆ ಬಿಜೆಪಿ ರಾಜ್ಯ ಪ್ರಮುಖರು ಮಾಧ್ಯಮಗಳ ಮುಂದೆ ಹೇಳಿಕೆ ನೀಡದಂತೆ ತಿಳಿಸಿದ್ದಾರೆ. ಹೀಗಾಗಿ ಸುಮ್ಮನಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.