ಕಾಂಗ್ರೆಸ್ ನ ಯುವರಾಜ್ ಕದಂರನ್ನು ಎಪಿಎಂಸಿ ಅಧ್ಯಕ್ಷ ಮಾಡಿದ್ದು ನಾನೇ: ರಮೇಶ್ ಜಾರಕಿಹೊಳಿ
Team Udayavani, Jun 29, 2020, 3:09 PM IST
ಬೆಳಗಾವಿ: ಬೆಳಗಾವಿ ಎಪಿಎಂಸಿಯಲ್ಲಿ ಬಿಜೆಪಿ ಕೇವಲ ಒಂದೇ ಸ್ಥಾನ ಹೊಂದಿತ್ತು. ಹೀಗಾಗಿ ಅಲ್ಲಿ ಏನೂ ಮಾಡಲು ಸಾದ್ಯವಿರಲಿಲ್ಲ. ಆದರೆ ಕಾಂಗ್ರೆಸ್ ನ ಯುವರಾಜ್ ಕದಂ ಅವರನ್ನು ಅಧ್ಯಕ್ಷ ಮಾಡಿದ್ದು ನಾನೇ ಎಂದು ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಹೆಚ್ ವಿಶ್ವನಾಥ,ಮತ್ತು ಉಮೇಶ್ ಕತ್ತಿ ಅವರಿಗೆ ಸ್ಥಾನಮಾನ ನೀಡುವ ಕುರಿತು ಬಿಜೆಪಿ ಹೈಕಮಾಂಡ್ ನಿರ್ಧರಿಸುತ್ತದೆ. ನಾನು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದೇನೆ. ಈ ಕುರಿತು ಏನೂ ಹೇಳುವದಿಲ್ಲ ಎಂದರು.
ತೈಲಬೆಲೆ ಹೆಚ್ಚಳ ಕುರಿತು ಕಾಂಗ್ರೆಸ್ ಪಕ್ಷದ ಪ್ರತಿಭಟನೆಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷಗಳು ತಮ್ಮ ಕೆಲಸ ಮಾಡುತ್ತಿದ್ದಾರೆ. ನಾವೂ ಜೀವಂತ ಇದ್ದೇವೆ ಎಂದು ತೋರಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಏನು ಮಾಡಿದೆ ಅನ್ನೋದು ದೇಶದ ಜನರಿಗೆ ಗೊತ್ತಿದೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ, ಶೀಘ್ರದಲ್ಲಿಯೇ ಬಡವರ ಪರವಾಗಿ ಹಲವಾರು ನಿರ್ಣಯಗಳನ್ನು ಕೈಗೊಳ್ಳಲಿದೆ ಎಂದು ತಿರುಗೇಟು ನೀಡಿದರು.
ಲಕ್ಷ್ಮೀ ಹೆಬ್ಬಾಳಕರ ಅವರು ನಿಮ್ಮ ಸವಾಲು ಸ್ವೀಕರಿಸಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಛೇಡಿಸಿದರೆ ಒಂದು ಇರುವೆ ಕೂಡಾ ಪ್ರತಿಕ್ರಿಯಿಸುತ್ತದೆ,ಅದೇನು ದೊಡ್ಡ ಕೆಲಸ ಅಲ್ಲ, ಆದರೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಲಾಭವಾಗುವ ನಿರ್ಣಯ ಕೈಗೊಳ್ಳುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.