ರಮೇಶ ಜಾರಕಿಹೊಳಿ ಕೃಪೆಯಿಂದಲೇ ಬಿಜೆಪಿ ಸರ್ಕಾರ
Team Udayavani, Nov 18, 2019, 9:12 PM IST
ಗೋಕಾಕ: ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಪೂರೈಸಲಿದ್ದು, ರಮೇಶ ಜಾರಕಿಹೊಳಿ ಅವರ ಕೃಪೆಯಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿದೆ ಎಂದು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸುವ ಮುಂಚೆ ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದ ಆವರಣದಲ್ಲಿ ನಡೆದ ಬೃಹತ್ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಅವರು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್-ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಬೇಸತ್ತು, ಅದರಲ್ಲಿ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಮತ್ತು ಶಾಸಕರು ಪದತ್ಯಾಗ ಮಾಡಿ, ಕೋರ್ಟು-ಕಚೇರಿ ಅಲೆದು ಸಾಕಷ್ಟು ವನವಾಸ ಅನುಭವಿಸಿದ್ದಾರೆ. ಅವರು ಕೈಗೊಂಡ ದಿಟ್ಟ ನಿರ್ಧಾರದಿಂದಾಗಿಯೇ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾರೆ. ಗೋಕಾಕ ಕ್ಷೇತ್ರದಲ್ಲಿ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪರ ನಿಂತು ದಾಖಲೆಯ ಜಯಕ್ಕೆ ಶ್ರಮಿಸಬೇಕೆಂದು ಕೋರಿದರು.
ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಇಬ್ಬರು ಸಹೋದರರ ಮಧ್ಯ ಮೂರನೇ ವ್ಯಕ್ತಿ ಲಾಭ ತೆಗೆದುಕೊಳ್ಳಬಹುದೆಂಬುದನ್ನು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಈ ಚುನಾವಣೆಯಲ್ಲಿ ಮೂರನೇ ವ್ಯಕ್ತಿಗೆ ಲಾಭವಾಗುವುದಿಲ್ಲ. ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಗೆಲುವು ಶತಸಿದ್ಧ. ನನ್ನ ಭವಿಷ್ಯ ಎಂದಿಗೂ ಸುಳ್ಳಾಗದು. ಈ ಗೆಲುವಿನಿಂದ ಗೋಕಾಕ ಇತಿಹಾಸದ ಪುಟಗಳಲ್ಲಿ ಸ್ವಾತಂತ್ರÂ ನಂತರ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾ ಧಿಸಲಿದೆ ಎಂದು ಆಶಾಭಾವ ವ್ಯಕ್ತಪಡಿಸಿದರು.
ನಮ್ಮ ಎನ್‌ಎಸ್‌ಎಫ್ ಕಚೇರಿಯಿಂದ ಪ್ರಚಾರ ಪ್ರಾರಂಭಿಸಿರುವ ರಮೇಶ ಜಾರಕಿಹೊಳಿ ಅವರ ಗೆಲುವನ್ನು ಯಾರೂ ತಡೆಯಲಾರರು. ಈ ನೆಲದ ಶಕ್ತಿ ಅಪಾರ. ಇದಕ್ಕೆ ನಾನೇ ಸಾಕ್ಷಿ. ಐದು ಬಾರಿ ಗೆಲುವು ಸಾಧಿಸಿರುವುದು ಈ ನೆಲದಿಂದಲೇ. ಜೊತೆಗೆ ಈ ಚುನಾವಣೆಯಲ್ಲಿ ಒಂದು ಮತದಿಂದ ಎರಡು ಅಧಿಕಾರಗಳು ಸಿಗುತ್ತವೆ. ಒಂದು ಶಾಸಕರಾದರೆ ಇನ್ನೊಂದು ಸಚಿವರಾಗುತ್ತಾರೆ. ಆದ್ದರಿಂದ ರಮೇಶ ಜಾರಕಿಹೊಳಿ ಅವರನ್ನು ಆರಿಸಿ ಕಳುಹಿಸಿದರೆ ಸರ್ಕಾರದಲ್ಲಿ ಮಹತ್ವದ ಖಾತೆ ದೊರಕಲಿದೆ. ಇದರಿಂದ ನಮ್ಮ ಭಾಗಕ್ಕೆ ಸಾಕಷ್ಟು ಅಭಿವೃದ್ಧಿ ಯೋಜನೆಗಳು ಬರಲಿವೆ ಎಂದು ಹೇಳಿದರು.
ಗೋಕಾಕ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಮತಯಾಚಿಸಿದರು. ಹಿರಿಯ ಶಾಸಕರಾದ ಉಮೇಶ ಕತ್ತಿ, ಮಹಾದೇವಪ್ಪ ಯಾದವಾಡ, ಅಭಯ ಪಾಟೀಲ, ಎ.ಎಸ್.ಪಾಟೀಲ(ನಡಹಳ್ಳಿ), ಅನೀಲ ಬೆನಕೆ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಎಂ.ವಿ. ನಾಗರಾಜ್, ಯುವ ಮುಖಂಡ ಅರುಣ ಕಾರಜೋಳ, ಬೆಳಗಾವಿ ವಿಭಾಗೀಯ ಪ್ರಭಾರಿ ಈರಪ್ಪ ಕಡಾಡಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್.ವಿ. ದೇಮಶೆಟ್ಟಿ, ಗ್ರಾಮೀಣ ಅಧ್ಯಕ್ಷ ವಿರುಪಾಕ್ಷಿ ಯಲಿಗಾರ, ಮುಖಂಡ ಎಸ್.ಎ. ಕೋತವಾಲ, ಪಕ್ಷದ ಹಲವು ಮುಖಂಡರು, ಬಿಜೆಪಿ ರಾಜ್ಯ, ಜಿಲ್ಲಾ ಹಾಗೂ ತಾಲೂಕಾ ಪದಾಧಿ ಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಎನ್‌ಎಸ್‌ಎಫ್ ಅತಿಥಿ ಗೃಹದಿಂದ ಬೃಹತ್ ಮೆರವಣಿಗೆ ನಡೆಯಿತು. ಸಹಸ್ರಾರು ಬಿಜೆಪಿ ಕಾರ್ಯಕರ್ತರ ಘೋಷಣೆ ಮಧ್ಯೆ ತೆರೆದ ವಾಹನದಲ್ಲಿ ಅಭ್ಯರ್ಥಿ ರಮೇಶ ಜಾರಕಿಹೊಳಿ, ಹಲವು ನಾಯಕರು ಸಾಗಿದರು. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವೇಶ್ವರ ವೃತ್ತದ ಮೂಲಕ ಮಿನಿ ವಿಧಾನಸೌಧ ಕಾರ್ಯಾಲಯಕ್ಕೆ ತೆರಳಿ ಚುನಾವಣಾ ಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.