Rani Channamma University: ಬಿ.ಕಾಂ ಪ್ರಶ್ನೆಪತ್ರಿಕೆ ಸೋರಿಕೆ; ಪರೀಕ್ಷೆ ಮುಂದೂಡಿಕೆ
Team Udayavani, Mar 22, 2024, 12:12 PM IST
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಬ್ಬಂದಿಗಳ ಎಡವಟ್ಟಿನಿಂದ ಬಿಕಾಂ ಪದವಿ ಪರೀಕ್ಷೆಯ ಮೊದಲ ದಿನವೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಬಿ.ಕಾಂ ಪದವಿಯ 5 ನೇ ಸೆಮಿಸ್ಟರ್ ನ ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ಪ್ರಶ್ನೆ ಪತ್ರಿಕೆಯು ಸೋರಿಕೆಯಾಗಿರುವುದರಿಂದ ಇದರ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಪರೀಕ್ಷಾ ನಡೆಯುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಇನ್ನುಳಿದ ಪರೀಕ್ಷೆಗಳು ಎಂದಿನಂತೆ ನಡೆಯುತ್ತವೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ರವೀಂದ್ರನಾಥ ಎನ್.ಕದಮ್ ತಿಳಿಸಿದ್ದಾರೆ.
5,8,9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಸಮ್ಮತಿ
ಬೆಂಗಳೂರು: ಶಾಲೆಗಳ 5, 8, 9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿಸಿದೆ. ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ನ್ಯಾಯಪೀಠ ಆದೇಶ ನೀಡಿದೆ.
ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಇತ್ತೀಚೆಗೆ ರದ್ದುಪಡಿಸಿ ಆದೇಶ ನೀಡಿತ್ತು. ಈ ತೀರ್ಪನ್ನು ಇಂದು ರದ್ದು ಮಾಡಿದೆ.
ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿತ್ತು. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು. ಹೀಗಾಗಿ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.