Belagavi session; ವಿಪಕ್ಷದ ಎಲ್ಲಾ ಪ್ರಶ್ನೆಗೂ ಉತ್ತರಿಸಲು ಸಿದ್ದ: ಸಿಎಂ ಸಿದ್ದರಾಮಯ್ಯ
Team Udayavani, Dec 4, 2023, 12:16 PM IST
ಬೆಳಗಾವಿ: ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನ ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ವಿಮಾನ ಸುದ್ದಿಗಾರ ಜೊತೆಗೆ ಮಾತನಾಡಿದ ಅವರು ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯವರೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಎಂದಿಗೂ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿಲ್ಲ. ಬದಲಾಗಿ ಬಡಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ಇವುಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು ಎಂದರು.
ಈ ಬಾರಿ ವಿರೋಧ ಪಕ್ಷದವರು ಜಂಟಿಯಾಗಿ ಹೋರಾಟ ಕೈಗೊಳ್ಳಲಿರುವ ಬಗ್ಗೆ ಪ್ರತಿಕ್ರಯಿಸಿದ ಅವರು ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಿರಲಿಲ್ಲ. ವಿರೋಧ ಪಕ್ಷದವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಅವರು ಜಂಟಿಯಾಗಿ ಹೋರಾಟ ನಡೆಸಿದರೂ, ಅವರ ಎಲ್ಲ ಹೋರಾಟಗಳಿಗೆ ಉತ್ತರ ನೀಡಲು ಸರ್ಕಾರ ಸಿದ್ಧವಿದೆ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.