Kannada ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ! ಕಾಸರಗೋಡಿನಂತೆ ಗಡಿಭಾಗದಲ್ಲಿ ಮಹಾ ಉದ್ಧಟತನ
Team Udayavani, Jun 18, 2024, 7:15 AM IST
ಬೆಳಗಾವಿ: ಕೇರಳದ ಕಾಸರಗೋಡಿನ ರೀತಿಯಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಕನ್ನಡ ಶಾಲೆಗಳ ಮಕ್ಕಳಿಗೆ ಶಿಕ್ಷಕರ ನೇಮಕಾತಿ ವಿಷಯದಲ್ಲಿ ಮಹಾರಾಷ್ಟ್ರ ಸರಕಾರ ಅತಂತ್ರ ಸ್ಥಿತಿ ನಿರ್ಮಿಸಿದೆ.
ಕಾಸರಗೋಡಿನಲ್ಲಿ ಕನ್ನಡ ಶಾಲೆಗೆ ಮಲೆಯಾಳಿ ಶಿಕ್ಷಕರನ್ನು ನೇಮಕ ಮಾಡಿದಂತೆ ಇತ್ತ ಮಹಾರಾಷ್ಟ್ರ ಸರಕಾರವೂ ಕನ್ನಡ ಶಾಲೆಗಳಿಗೆ ಮರಾಠಿ ಮಾಧ್ಯಮದ ಶಿಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸುವ ಮೂಲಕ ವಿವಾದಕ್ಕೆ ಕಾರಣವಾಗಿದೆ. ಈ ಆದೇಶ ಸಾಂಗ್ಲಿ ಹಾಗೂ ಸೊಲ್ಲಾಪುರ ಜಿಲ್ಲೆಗಳ 40 ಸಾವಿರಕ್ಕಿಂತ ಹೆಚ್ಚಿನ ಮಕ್ಕಳಿಗೆ ಅತಂತ್ರ ಸ್ಥಿತಿ ತಂದೊಡ್ಡಿದೆ.
ಕೆಲವು ದಿನಗಳ ಹಿಂದೆ ಮಹಾರಾಷ್ಟ್ರ ಸರಕಾರ ಗಡಿ ಭಾಗದ ಜತ್ ತಾಲೂಕಿಗೆ 11 ಮತ್ತು ಸೊಲ್ಲಾಪುರ ಜಿಲ್ಲೆಯ ಸರಕಾರಿ ಕನ್ನಡ ಶಾಲೆಗಳಿಗೆ 13 ಶಿಕ್ಷಕರನ್ನು ನೇಮಕ ಮಾಡಿದೆ. ಆದರೆ ಈ 24 ಶಿಕ್ಷಕರಲ್ಲಿ ಕೇವಲ 7 ಮಂದಿಗೆ ಮಾತ್ರ ಕನ್ನಡ ತಿಳಿದಿದೆ ಎನ್ನಲಾಗಿದೆ.
ಮಹಾರಾಷ್ಟ್ರ ಸರಕಾರದ ಈ ನಿರ್ಧಾರದ ವಿರುದ್ಧ ಕನ್ನಡ ಹೋರಾಟಗಾರರು ತಿರುಗಿ ಬಿದ್ದಿದ್ದಾರೆ.
ಕನ್ನಡದ ಗಂಧಗಾಳಿ ಇಲ್ಲ
ಈ ಶಿಕ್ಷಕರಿಗೆ ಕನ್ನಡದ ಗಂಧ ಗಾಳಿಯೂ ಇಲ್ಲ ಎಂದು ಜತ್ ತಾಲೂಕಿನ ಕನ್ನಡ ಹೋರಾಟಗಾರರಾದ ಸರೋಜಿನಿ ಬಿರಾದಾರ ಕಿಡಿಕಾರಿದ್ದಾರೆ. ಮಹಾರಾಷ್ಟ್ರ ಸರಕಾರದ ಈ ಆದೇಶದ ವಿರುದ್ಧ ಕನ್ನಡಿಗರು ದೊಡ್ಡ ಪ್ರಮಾಣದಲ್ಲಿ ವಿರೋಧ ಮಾಡುತ್ತಿದ್ದಾರೆ. ಆದರೆ ಸರಕಾರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ರಾಜ್ಯ ಸರಕಾರ ತುರ್ತಾಗಿ ಇಲ್ಲಿನ ಕನ್ನಡಿಗರ ಬೆನ್ನೆಲುಬಾಗಿ ನಿಲ್ಲಬೇಕಿದೆ. ಇಲ್ಲವಾದಲ್ಲಿ ಈ ಭಾಗದಲ್ಲಿ ಕನ್ನಡ ಶಾಲೆಗಳು ನಶಿಸಿ ಹೋಗಲಿವೆ ಎಂದು ಗಡಿ ಭಾಗದ ಕನ್ನಡಿಗರು ಆತಂಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.