ರೆಡ್ಡಿ ಸಮಾಜ ಶಿಕ್ಷಣಕ್ಕೆ ಆದ್ಯತೆ ನೀಡಲಿ
ಸಮಾಜ ಶಿಕ್ಷಣ-ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಮುಖ್ಯವಾಹಿನಿಗೆ ಬರಲಿ
Team Udayavani, Mar 16, 2022, 2:48 PM IST
ಬೆಳಗಾವಿ: ಕರ್ನಾಟಕದಲ್ಲಿ ಕನ್ನಡಿಗರಾಗಿ ಸಹೋದರತೆಯಿಂದ ಸಹಬಾಳ್ವೆ ಮಾಡುತ್ತಿರುವ ರೆಡ್ಡಿ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಅಂದಾಗ ಮಾತ್ರ ಮುಂದಿನ ಪೀಳಿಗೆಗೆ ಭವಿಷ್ಯವಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ನಗರದಲ್ಲಿ ಕರ್ನಾಟಕ ರಾಜ್ಯ ರೆಡ್ಡಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕ ಹಾಗೂ ಬೆಳಗಾವಿ ಜಿಲ್ಲಾ ವೇಮನ ಸರಕಾರಿ ಅರೆ ಸರ್ಕಾರಿ ನೌಕರರ ಸಹಕಾರ ಸಂಘದ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮುದಾಯದ ಒಳಿತಿಗಾಗಿ, ಒಗ್ಗಟ್ಟಿಗಾಗಿ ಇಂಥ ಸಂಘಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಸಂಘಟನೆಗಳು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಮಾತನಾಡಿ, ರೆಡ್ಡಿ ಜನಾಂಗಕ್ಕೆ ಸಹಾಯ, ಸಹಕಾರ ನೀಡುವುದರೊಂದಿಗೆ ಜಾಗ ಮತ್ತು ಭವನದ ಸುಧಾರಣೆ ಮಾಡಲಾಗುವುದು ಎಂದರು.
ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಮಾತನಾಡಿ, ನಮ್ಮ ಸಮಾಜ ಎಲ್ಲ ಸಮುದಾಯಗಳೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು ಸಹಬಾಳ್ವೆಗೆ ಹೆಸರಾಗಿದೆ ಎಂದರು.
ಎರೆಹೊಸಳ್ಳಿಯ ರೆಡ್ಡಿ ಗುರುಪೀಠದ ಶ್ರೀ ವೇಮನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಕನ್ನಡದ ಶರಣ ಪರಂಪರೆಯಲ್ಲಿ ಹೇಮರಡ್ಡಿ ಮಲ್ಲಮ್ಮ ಪ್ರಮುಖ ಸ್ಥಾನ ಪಡೆದಿದ್ದಾರೆ. ಹಾಗೆಯೇ ಆಧ್ಯಾತ್ಮದ ಉತ್ತುಂಗಕ್ಕೆ ಏರಿದ ವೇಮನರು ಕಾಯಕ ನಿಷ್ಠ, ಸತ್ಸಂಗದ ಮಹತ್ವ ಜನಸಾಮಾನ್ಯರಿಗೆ ತಿಳಿ ಹೇಳಿದ್ದಾರೆ. ಇಂದು ರೆಡ್ಡಿ ಸಮುದಾಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದೆ. ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನಮಾನ ಸಿಕ್ಕಿಲ್ಲ. ಆ ನಿಟ್ಟಿನಲ್ಲಿ ಸಮುದಾಯದ ಮುಖಂಡರು ಹೆಚ್ಚಿನ ಆಸಕ್ತಿ ತೋರಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದು ಹೇಳಿದರು.
ಮಾಜಿ ಶಾಸಕ ಆರ್.ವಿ. ಪಾಟೀಲ ಅವರು ವೆಬ್‌ಸೈಟ್ ಉದ್ಘಾಟಿಸಿದರು. ರಾಜ್ಯ ರೆಡ್ಡಿ ಕ್ಷೇಮಾಬಿವೃದ್ಧಿ ಸಂಘದ ಅಧ್ಯಕ್ಷ ಎಸ್.ಬಿ. ಮಾಚಾ ಅಧ್ಯಕ್ಷತೆ ವಹಿಸಿದ್ದರು. ಲೇಕ್ ವ್ಯೂ ಆಸ್ಪತ್ರೆಯ ಡಾ. ಗಿರೀಶ ಸೋನವಾಲ್ಕರ, ನಗರಾಭಿವೃದ್ಧಿ ಉಪ ಕಾರ್ಯದರ್ಶಿ ಜಗದೀಶ್ ರೆಡ್ಡಿ ಕೆ.ಎಸ್., ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಬಸವರಾಜ್ ಸೋಮಣ್ಣವರ, ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾದ ಗೀತಾ ಕೌಲಗಿ, ಎಸಿಪಿ ನಾರಾಯಣ ಬರಮನಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ಶ್ರೀಕಾಂತ ರಡ್ಡಿ, ಆರ್.ಪಿ. ಒಂಟಗೋಡಿ, ಸಂಗಣ್ಣ ಸೊಣ್ಣದ, ಎನ್.ಬಿ. ಪಾಟೀಲ, ಜಿಲ್ಲಾ ಖಜಾನೆ ಅಧಿಕಾರಿ ಎಸ್ .ವಿ. ಹಳ್ಯಾಳ, ಡಿಡಿಪಿಐ ಬಸವರಾಜ ನಲವತವಾಡ, ರವಿ ದೇವರಡ್ಡಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ರವೀಂದ್ರ ಹಕಾಟೆ ಇತರರು ಇದ್ದರು. ಶ್ರೀಕಾಂತ ಯರಡ್ಡಿ ಸ್ವಾಗತಿಸಿದರು. ಆರ್.ಎಲ್. ಮಿರ್ಜಿ ನಿರೂಪಿಸಿದರು. ಅಶೋಕ ಅಣ್ಣಿಗೇರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.