ವಶಿಷ್ಠ ಸೌಹಾರ್ದ ಸಹಕಾರ ಸಂಘದ ಠೇವಣಿದಾರರಿಗೆ 26.97 ಕೋಟಿ ರೂ. ಠೇವಣಿ ಹಣ ಮರುಪಾವತಿ: ಎಸ್.ಟಿ.ಸೋಮಶೇಖರ್
Team Udayavani, Dec 20, 2022, 5:40 PM IST
ಬೆಳಗಾವಿ: ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರದ ಕುರಿತು ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ. ವಿಶೇಷಾಧಿಕಾರಿಯ ಅವಧಿಯಲ್ಲಿ ಸಾಲ ವಸೂಲಾತಿಗೆ ಕ್ರಮವಹಿಸಿ 729 ಠೇವಣಿ ಖಾತೆಗಳನ್ನು ಮುಕ್ತಾಯಗೊಳಿಸಿ 26.97 ಕೋಟಿ ರೂ. ಠೇವಣಿ ಹಣವನ್ನು ಮರುಪಾವತಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಿಧಾನಪರಿಷತ್ ನಲ್ಲಿ ಉತ್ತರಿಸಿದ ಸಚಿವರು, ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರ ಪ್ರಕರಣದ ಸಿಐಡಿ ವಿಚಾರಣೆ ಪ್ರಗತಿಯಲ್ಲಿದೆ. ಠೇವಣಿದಾರರಿಗೆ ಠೇವಣಿ ಹಣ ಹಿಂದಿರುಗಿಸಲು ಸರ್ಕಾರದಿಂದ “ಸಕ್ಷಮ ಪ್ರಾಧಿಕಾರ” ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದರು.
2013-14ರಿಂದ 2014-15ನೇ ಸಾಲಿನವರೆಗಿನ ಲೆಕ್ಕಪತ್ರಗಳ ಮರು ಲೆಕ್ಕ ಪರಿಶೋಧನೆ ಪೂರ್ಣಗೊಳಿಸಿದ್ದು, ವರದಿ ಬಿಡುಗಡೆ ಬಾಕಿ ಇರುತ್ತದೆ. 2015-16ರಿಂದ 2019-20ರವರೆಗೆ ಮರು ಲೆಕ್ಕ ಪರಿಶೋಧನೆ ನಡೆಯುತ್ತಿರುತ್ತದೆ ಎಂದು ಮಾಹಿತಿ ನೀಡಿದರು.
ಅಂದಾಜು 2000 ಠೇವಣಿದಾರರಿಗೆ ಅಂದಾಜು 260 ಕೋಟಿ ರೂ. ಠೇವಣಿ ಹಣ ಪಾವತಿಸಬೇಕಾಗಿರುತ್ತದೆ. ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿಯು ಕೈಗೊಂಡಿರುವ ಪರಿವೀಕ್ಷಣಾ ವರದಿಯ ಪ್ರಕಾರ ಅಂದಾಜು 280 ಕೋಟಿ ರೂ. ಅವ್ಯವಹಾರವಾಗಿರುವುದು ಕಂಡುಬಂದಿರುತ್ತದೆ. ಅವ್ಯವಹಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.