ಮನುಷ್ಯನ ಏಳ್ಗೆಗೆ ಧರ್ಮ ಅವಶ್ಯ: ಶ್ರೀಶೈಲ ಶ್ರೀ
ಈ ಪಾದಯಾತ್ರೆಯಲ್ಲಿ ಪಾಲ್ಗೊಂಡು ಇತಿಹಾಸ ನಿರ್ಮಾಣ ಮಾಡುತ್ತಿದ್ದಾರೆ.
Team Udayavani, Nov 5, 2022, 5:35 PM IST
ಅಥಣಿ: ಧರ್ಮ ರಕ್ಷಣೆ ಮಾಡುವವರನ್ನು ಧರ್ಮ ರಕ್ಷಿಸುತ್ತದೆ. ಧರ್ಮದೊಂದಿಗೆ ಎಲ್ಲರೂ ಕೈ ಜೋಡಿಸುವಂತೆ ಶ್ರೀಶೈಲ ಪೀಠದ ಜಗದ್ಗುರು ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಕರೆ ನೀಡಿದರು.
ಶ್ರೀಗಳು ಶ್ರೀಶೈಲವರೆಗಿನ ಜನಜಾಗೃತಿ ಪಾದಯಾತ್ರೆ ಮಾರ್ಗ ಮಧ್ಯೆ ಸತ್ತಿ ಗ್ರಾಮದಲ್ಲಿ ಜರುಗಿದ ಧರ್ಮಸಭೆಯ ಸಾನ್ನಿಧ್ಯವಹಿಸಿ ಮಾತನಾಡಿ, ಮನುಷ್ಯನ ಏಳ್ಗೆಗೆ ಧರ್ಮವು ಅತ್ಯವಶ್ಯವಾಗಿದೆ.
ಇತ್ತೀಚಿಗೆ ರಸಾಯನಿಕ ಗೊಬ್ಬರ ಅತಿಯಾಗಿ ಬಳಕೆಯಾಗುತ್ತಿದ್ದು, ಫಲವತ್ತಾದ ಭೂಮಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಕೃಷಿಕರು ಸಾವಯವ ಕೃಷಿ ಮಾಡುವ ಮೂಲಕ ಭೂಮಿ ತಾಯಿಯ ಆರೋಗ್ಯ ಕಾಪಾಡಬೇಕು ಎಂದು ಹೇಳಿದರು.ಮಾನವರಾಗಿ ಜನಸಿದ ಮೇಲೆ ಎಲ್ಲರಲ್ಲಿ ಮಾನವೀಯ ಮೌಲ್ಯಗಳು ಇರಬೇಕು. ಕಡು ಕಷ್ಟ ಬಂದರೂ ಅಧರ್ಮದ ಹಾದಿ ಹಿಡಿಯಬಾರದು.
ಧರ್ಮದ ಮಾರ್ಗದಲ್ಲಿ ಸಾಗುವವರ ದಾರಿ ಸುಗಮವಾಗಿರುತ್ತದೆ. ಕಷ್ಟದಲ್ಲಿ ಎಲ್ಲರೂ ಕೈ ಬಿಟ್ಟರೂ ಧರ್ಮ ಎಂದಿಗೂ ಕೈ ಬಿಡುವುದಿಲ್ಲ. ಯುವಕರು ದುಶ್ಚಟಗಳಿಗೆ ಬಲಿಯಾಗಬಾರದು. ಆರೋಗ್ಯವೇ ನಿಜವಾದ ಭಾಗ್ಯವಾಗಿದೆ. ಸರಾಯಿ, ಗುಟಕಾ, ಬೀಡಿ ಇವೆಲ್ಲವುಗಳನ್ನು ಗ್ರಾಮದ ಹಿರಿಯರು ಹೊರಹಾಕಿ ಆರೋಗ್ಯದ ಅರಿವು ಮೂಡಿಸಬೇಕು. ಪರಿಸರ ಕಾಳಜಿ ಮಾಡುವುದು ಸಹ ಎಲ್ಲ ಆದ್ಯ ಕರ್ತವ್ಯವಾಗಿದೆ. ನಮ್ಮ ಪಾದಯಾತ್ರೆಯ ಉದ್ದಕ್ಕೂ ಗಿಡಗಳನ್ನು ನೆಡುವ ಕಾರ್ಯ ಮಾಡುತ್ತಿದ್ದೇವೆ.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡು ಇತಿಹಾಸ ನಿರ್ಮಾಣ ಮಾಡುತ್ತಿದ್ದಾರೆ. ಈ ಪಾದಯಾತ್ರೆಯು ಹಲವಾರು ಸಂದೇಶಗಳನ್ನು ಹೊತ್ತು ಸಾಗುತ್ತಿದೆ ಎಂದು ಹೇಳಿದರು. ಪಾದಯಾತ್ರೆ ಮುಕ್ತಾಯವಾದ ಮೇಲೆ ಶ್ರೀಶೈಲ ಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮಗಗಳು ಜರುಗಲಿವೆ. ಎಲ್ಲ ಭಕ್ತರು ಆ ಕಾರ್ಯಕ್ರಮಕ್ಕೆ ಬರಬೇಕು.
ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರಿಗೆ ಆಹ್ವಾನ ನೀಡಲಾಗಿದೆ. ಕೇಂದ್ರ ಸಚಿವರು ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ದೇಶದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಶ್ರೀಶೈಲ ಜಗದ್ಗುರುಗಳು ತಿಳಿಸಿದರು. ಬೆಳ್ಳಂಕಿಯ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಮಾಂಜರಿಯ ಶ್ರೀ ಗುರುಶಾಂತ ಸ್ವಾಮೀಜಿ, ಜೈನಾಪುರದ ಶ್ರೀ, ಸುಗೂರು ಶ್ರೀ, ಕೃಷಿ ತಜ್ಞ ಈರಣ್ಣ ಪಾಟೀಲ, ಮಲ್ಲಪ್ಪ ಹಂಚಿನಾಳ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಶ್ರೀ ಬಾಳಕೃಷ್ಣ ಮಹಾರಾಜ ಸೇವಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.