ಕಾಳಸಂತೆಯಲ್ಲಿ ರೆಮ್‌ಡಿಸಿವಿಯರ್; ಇಬ್ಬರ ಸೆರೆ
25-30 ಸಾವಿರ ರೂ.ಗೆ ಮಾರಾಟ
Team Udayavani, Apr 27, 2021, 6:09 PM IST
ಬೆಳಗಾವಿ: ಅಕ್ರಮವಾಗಿ ಕಾಳಸಂತೆಯಲ್ಲಿ ಬೇಕಾಬೆಟ್ಟಿ ದರದಲ್ಲಿ ರೆಮ್‌ಡಿಸಿವಿಯರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಾಮಪುರ ಗ್ರಾಮದ, ಸದ್ಯ ಬೆಳಗಾವಿ ಶಾಹೂನಗರದ ಸಮರ್ಥ ಗಲ್ಲಿಯಲ್ಲಿದ್ದ ಮಂಜುನಾಥ ದುಂಡಪ್ಪ ದಾನವಾಡಕರ (35) ಹಾಗೂ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದ, ಸದ್ಯ ಶಿವಾಜ ನಗರದಲ್ಲಿದ್ದ ಸಂಜೀವ ಚಂದ್ರಶೇಖರ ಮಾಳಗಿ(33) ಎಂಬಾತರನ್ನು ಬಂಧಿಸಲಾಗಿದೆ.
ಕೋವಿಡ್ -19 ರೋಗಿಗಳಿಗೆ ನೀಡುವ ರೆಮ್ ಡಿಸಿವಿಯರ್ ಔಷಧಿಯನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಪಡೆದ ಸಿಟಿ ಕ್ರೈಂ ಬ್ರಾಂಚ್ ಪೊಲೀಸರು ದಾಳಿ ನಡೆಸಿದ್ದಾರೆ. ಮಾರುಕಟ್ಟೆಯಲ್ಲಿ 3400 ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆದರೆ ಕಾಳಸಂತೆಯಲ್ಲಿ ಈ ಇಬ್ಬರೂ 25-30 ಸಾವಿರ ರೂ. ದರದಲ್ಲಿ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಇನ್ಸಪೆಕ್ಟರ್ ನಿಂಗನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಮೂರು ರೆಮ್‌ಡಿಸಿವಿಯರ್ ಔಷಧ ಬಾಟಲಿ, ಎರಡು ಮೊಬೆ„ಲ್, ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.