
100 ಜನರ ವರದಿ ಬಾಕಿ
Team Udayavani, May 15, 2020, 12:05 PM IST

ಬೆಳಗಾವಿ: ಕಳೆದ ಒಂದೆರಡು ದಿನಗಳಿಂದ ನಿರಾಳವಾಗಿದ್ದ ಬೆಳಗಾವಿಯಲ್ಲಿ ಗುರುವಾರ ಮತ್ತೆ ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ.
ಮುಂಬೈದಿಂದ ಬಂದಿದ್ದ ಗರ್ಭಿಣಿಗೆ ಸೋಂಕು ತಗುಲಿರುವುದು ಸಹಜವಾಗಿಯೇ ಬೆಳಗಾವಿ ನಗರದಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿ ಇದುವರೆಗೆ 116 ಜನರಿಗೆ ಸೋಂಕು ತಗುಲಿದ್ದು ಅದರಲ್ಲಿ 54 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಓರ್ವ ವೃದ್ಧೆ ಮೃತಪಟ್ಟಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಈಗ 61 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಅದರಲ್ಲಿ ಎಂಟು ಜನ ಬಾಗಲಕೊಟೆ ಜಿಲ್ಲೆಗೆ ಸೇರಿದವರಾಗಿದ್ದಾರೆ. ಜಿಲ್ಲೆಯಲ್ಲಿ ಇವತ್ತಿನವರೆಗೆ 8106 ಜನರ ಮೇಲೆ ನಿಗಾ ವಹಿಸಲಾಗಿದೆ.
ಇದುವರೆಗೆ 517 ಜನರು 14 ದಿನಗಳ ಗೃಹ ನಿಗಾದಲ್ಲಿದ್ದಾರೆ. 61 ಜನರು ಆಸ್ಪತ್ರೆಯ ಐಸೋಲೇಷನ್ ಘಟಕದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 5606 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ 1922 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇವತ್ತಿನವರೆಗೆ 6811 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು 6519 ಜನರ ವರದಿ ನಕಾರಾತ್ಮಾಕವಾಗಿವೆ. ಒಟ್ಟು 100 ಜನರ ವರದಿಗಾಗಿ ಕಾಯಲಾಗುತ್ತಿದೆ ಎಂದು ಸರಕಾರ ಬಿಡುಗಡೆ ಮಾಡಿರುವ ವೈದ್ಯಕೀಯ ವರದಿ ತಿಳಿಸಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.