ಮೂಲ ಸೌಲಭ್ಯಗಳಿಗೆ ಆಗ್ರಹಿಸಿ ಮನವಿ
Team Udayavani, Jul 22, 2020, 8:53 AM IST
ಚನ್ನಮ್ಮ ಕಿತ್ತೂರು: ನೀರು, ದಿನಸಿ, ದಿನನಿತ್ಯದ ಮೂಲಭೂತ ಸೌಕರ್ಯಗಳನ್ನು ಒದಗಿಸದ ಅಧಿಕಾರಿ, ಜನಪ್ರತಿನಿಧಿಗಳ ವಿರುದ್ಧ ಕಿತ್ತೂರಿನ ಸಿಲ್ ಡೌನ್ ಪ್ರದೇಶದ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಕಿತ್ತೂರಿನ ರಾವಳ ಓಣಿಯಲ್ಲಿ ಇತ್ತೀಚೆಗೆ ಎರಡು ಕೋವಿಡ್ ಪ್ರಕರಣಗಳು ಕಂಡು ಬಂದಿದ್ದವು. ಈ ಹಿನ್ನೆಲೆಯಲ್ಲಿ ಪ್ರದೇಶವನ್ನು ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದರೂ ಕಳೆದ ನಾಲ್ಕು ದಿನಗಳಿಂದ ಅಲ್ಲಿನ ನಿವಾಸಿಗಳಿಗೆ ಕುಡಿಯುವ ನೀರು, ದಿನಸಿ, ಹಸುಗಳಿಗೆ ಮೇವು ಸೇರಿದಂತೆ ಅವಶ್ಯ ಇರುವ ಮೂಲಭೂತ ಸೌಕರ್ಯ ಒದಗಿಸದ ಕಾರಣ ನಿವಾಸಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಿಂದ ಬಹಿರ್ದೆಸೆಗೆ ತೆರಳಲು ಸಹ ಪರದಾಡುವ ಸ್ಥಿತಿ ಬಂದೊದಗಿದೆ. ಇದನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಹ ಯಾವುದೇ ಪ್ರಯೋಜನೆಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಹೀಗಾದರೆ ನಾವು ಇಲ್ಲಿ ಜೀವನ ಹೇಗೆ ನಡೆಸಬೇಕು. ಕಡು ಬಡವರು ಕೆಲಸವಿಲ್ಲದೆ, ಊಟವಿಲ್ಲದೆ ಪರದಾಡುತ್ತಿದ್ದಾರೆ. ಪಟ್ಟಣ ಪಂಚಾಯತಿ ಸದಸ್ಯರು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಶಾಸಕರು ನಮ್ಮ ಗೋಳು ಕೇಳಿ ಕನಿಷ್ಠ ಇಲ್ಲಿಯ ಬಡವರಿಗೆ ದಿನಸಿ ಕಿಟ್ ನೀಡಿ ಸ್ಪಂದಿಸಬೇಕು ಎಂದು ಮನವಿ ಮಾಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪ್ರಕಾಶ ಮಠದ, ಪ್ರತಿಭಟನಾ ನಿರತರ ಮನವೊಲಿಸಿ ಸರಕಾರದಿಂದ ಸೌಲಭ್ಯ ಒದಗಿಸುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.