Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Team Udayavani, Dec 19, 2024, 12:40 AM IST
ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಐವನ್ ಡಿ’ಸೋಜಾ ನೇತೃತ್ವದ ಸರ್ವಪಕ್ಷಗಳ ಶಾಸಕರು ಮತ್ತು ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಯ ವ್ಯಾಪ್ತಿ ನಿಗದಿಪಡಿಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು. ಏಕೆಂದರೆ, ಈ ಜಿಲ್ಲೆಗಳಿಂದ ಸರಾಸರಿ 10 ಸಾವಿರ ಪ್ರಕರಣಗಳು ಹೈಕೋರ್ಟ್ ಮುಂದಿದೆ. ಸಾರ್ವಜನಿಕರ ಹಾಗೂ ವ್ಯಾಜ್ಯದಾರರ ಹಿತದೃಷ್ಟಿಯಿಂದ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು ಎಂದು ಮುಖ್ಯ ಮಂತ್ರಿ ಹಾಗೂ ಕಾನೂನು ಸಚಿವರಿಗೆ ನಿಯೋಗ ಮನವಿ ಮಾಡಿದೆ.
ಸ್ಪೀಕರ್ ಯು.ಟಿ. ಖಾದರ್, ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.