ಮಹಿಳಾ ಸಂಘಗಳ ಸಾಲಮನ್ನಾ ಮಾಡಲು ಆಗ್ರಹ
Team Udayavani, Oct 4, 2019, 2:30 PM IST
ಗೋಕಾಕ: ನೆರೆ ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ಮತ್ತು ಸಹಾಯಧನ ನೀಡಬೇಕು ಮತ್ತು ಮಹಿಳಾ ಸಂಘಗಳಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿ ಗುರುವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗೋಕಾಕ ತಾಲೂಕು ಘಟಕ ವತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ರಾಜ್ಯ ಸಂಚಾಲಕ ಗಣಪತಿ ಇಳಿಗೇರ ಮಾತನಾಡಿ, ಗೋಕಾಕ ತಾಲೂಕಿನಲ್ಲಿ ಅತಿಯಾದ ಮಳೆಯಿಂದಾಗಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾಳಾಗಿದ್ದು ಜನರು ಪರದಾಡುವಂತಾಗಿದೆ. ಇನ್ನೂವರೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಯಾವುದೇ ಪರಿಹಾರ ಧನ ನೀಡದೇ ಇರುವುದು ಖಂಡನೀಯ. ಶೀಘ್ರಸರ್ಕಾರ ಎಚ್ಚೇತ್ತು ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರಧನದ ಚೆಕ್‌ನೀಡಬೇಕೆಂದು ಒತ್ತಾಯಿಸಿದರು. ಮಹಿಳೆಯರು ಹಲವಾರು ಸಂಘಗಳಲ್ಲಿ ಸಾಲ ಮಾಡಿದ್ದು ಅದನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿದರು. ಒಂದು ವೇಳೆ ಈ ಬೇಡಿಕೆಗಳು ಈಡೇರಿಸದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸತ್ತೇಪ್ಪ ಮಲ್ಲಾಪೂರೆ, ಪ್ರಕಾಶ ಹಾಲನ್ನವರ, ಮುತ್ತೇಪ್ಪ ಬಾಗನ್ನವರ, ಕುಮಾರ ತಿಗಡಿ, ಶಂಕರ ಮದಿಹಳ್ಳಿ, ಮಹಾದೇವ ಗುಡೇರ, ಮಲ್ಲಿಕಾರ್ಜುನ ಇಳಿಗೇರ, ಮುತ್ತೇಪ್ಪ ಗುರಬನ್ನವರ, ಶಿವು ಪಾಟೀಲ, ಮಂಜುನಾಥ ಪೂಜೇರಿ, ಭರಮು ಖೇಮಲಾಪೂರೆ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.