ಸಹಕಾರಿ ಸಂಘಗಳ ಒಕ್ಕೂಟದಿಂದ ಮನವಿ
Team Udayavani, Dec 14, 2019, 1:04 PM IST
ಕಾಗವಾಡ: ಸಹಕಾರ ಸಂಘಗಳ ಮೇಲೆ ವಿಧಿಸಿರುವ ಆದಾಯ ತೆರಿಗೆ, ಟಿಡಿಎಸ್ ಮತ್ತು ಇಎಸ್‌ಟಿಗಳನ್ನು ಶೀಘ್ರವೇ ರದ್ದು ಪಡಿಸಬೇಕೆಂದು ಒತ್ತಾಯಿಸಿ ಸಹಕಾರಿ ಸಂಘಗಳ ಒಕ್ಕೂಟ ವತಿಯಿಂದ ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬ್ರಹ್ಮನಾಥ ಸೊಸೈಟಿ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಖೋತ ಮಾತನಾಡಿ, ಕೇಂದ್ರ ಸರ್ಕಾರವು ಸಹಕಾರ ಸಂಸ್ಥೆಗಳ ಮೇಲೆ ಆದಾಯ ತೆರಿಗೆ, ಟಿಡಿಎಸ್ ಹಾಗೂ ಜಿಎಸ್‌ಟಿ ವಿ ಧಿಸಿರುವದರಿಂದ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 52 ಸಾವಿರಕ್ಕೂ ಹೆಚ್ಚು ಸಹಕಾರಿ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಹಿನ್ನಡೆ ಉಂಟಾಗುತ್ತಿದೆ. ಆದ್ದರಿಂದ ಸಹಕಾರಿ ಕ್ಷೇತ್ರದ ಮೇಲೆ ವಿಧಿ ಸಿರುವ ಆದಾಯ ತೆರಿಗೆ, ಟಿಡಿಎಸ್ ಮತ್ತು ಇಎಸ್‌ಟಿಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಸಹಕಾರಿ ಕ್ಷೇತ್ರದಲ್ಲಿ ಕೋಟ್ಯಂತರ ಜನರು ಸದಸ್ಯರಿದ್ದು, ಲಕ್ಷಾಂತರ ಉದ್ಯೋಗ ಅವಕಾಶವನ್ನು ಸಹಕಾರಿ ಕ್ಷೇತ್ರ ನೀಡಿದೆ. ಈ ಹಿನ್ನಲೆಯಲ್ಲಿ ಸಹಕಾರಿ ಕ್ಷೇತ್ರವನ್ನು ಉಳಿಸಿ, ಬೆಳೆಸುವ ದೃಷ್ಟಿಯಿಂದ ಕೇಂದ್ರದ ನೂತನ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಲ್ಲ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.