ಕುಂದುಕೊರತೆ ಸಭೆ ನಡೆಸಲು ಮನವಿ
Team Udayavani, Jan 25, 2020, 12:23 PM IST
ಬೆಳಗಾವಿ: ಕಳೆದ ನಾಲ್ಕು ವರ್ಷಗಳಿಂದ ಬೆಳಗಾವಿ ತಾಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ, ವರ್ಗದ ಕುಂದುಕೊರತೆಗಳ ಚರ್ಚೆ ಮತ್ತು ನಿವಾರಣೆ ಸಭೆಯನ್ನು ನಡೆಸುತ್ತಿಲ್ಲ. ಇದರಿಂದ ಪರಿಶಿಷ್ಟ ಜಾತಿ ಹಾಗೂ ವರ್ಗದವರ ಸಮಸ್ಯೆಗಳಿಗೆ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ ಎಂದು ಆರೋಪಿಸಿ ಎಸ್‌ಸಿ ಎಸ್‌ಪಿ-ಟಿಎಸ್‌ಪಿ ಜನಜಾಗೃತಿ ವೇದಿಕೆಯ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಎಸ್‌ಸಿ ಎಸ್‌ಪಿ/ಟಿಎಸ್ ಪಿ ಕಾಯ್ದೆ 2013-14ರಲ್ಲಿ ಜಾರಿಗೆ ಬಂದಿದೆ. ಈ ಕಾಯ್ದೆ ಪ್ರಕಾರ ಎಸ್‌ಸಿ/ಎಸ್‌ಟಿ ಕುಂದುಕೊರತೆಗಳಿಗೆ ಪರಿಹಾರ ಕಲ್ಪಿಸಲು ತಾಲೂಕು ಮಟ್ಟದಲ್ಲಿ ವರ್ಷಕ್ಕೆ ಕನಿಷ್ಠ 4 ಸಭೆಗಳನ್ನು ನಡೆಸಲೇಬೇಕು. ಆದರೆ ಕಳೆದ 6 ವರ್ಷಗಳಿಂದ ಇಂತಹ ಸಭೆ ನಡೆದಿಲ್ಲ. ಎಸ್‌ಸಿ ಹಾಗೂ ಎಸ್‌ಟಿ ಸಮಾಜದ ಮುಖಂಡರಿಗೆ ಕಾಯ್ದೆ ಪ್ರಕಾರ ತರಬೇತಿಯನ್ನೂ ನೀಡಲಾಗಿಲ್ಲ. ಮೇಲಾಗಿ ಪರಿಶಿಷ್ಟರ ಅಭಿವೃದ್ಧಿಗೆ ಸಂಬಂಧಿಸಿದ 33 ಇಲಾಖೆಗಳು ಹಾಗೂ ಗ್ರಾಮ ಪಂಚಾಯತ್ ಗಳಿಗೆ ನೀಡಲಾಗುತ್ತಿದ್ದ ಅನುದಾನವೂ ಸಮರ್ಪಕವಾಗಿ ಬರುತ್ತಿಲ್ಲ ಎಂದು ದೂರಿದರು.
ವೇದಿಕೆಯ ಮುಖಂಡರಾದ ಕಲ್ಲಪ್ಪ ರಾಮಚನ್ನವರ, ಸಂತೋಷ ಕಾಂಬಳೆ, ಮಲ್ಲೇಶ ಕೋರಂಗಿ, ಅಂಜಲಿ, ಮಹಾದೇವ ತಳವಾರ, ರವಿ ಬಸ್ತವಾಡಕರ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.