ಸಮರ್ಪಕ ವೇತನ ನೀಡಲು ಆಗ್ರಹ
Team Udayavani, Oct 5, 2019, 2:41 PM IST
ಬೈಲಹೊಂಗಲ: ಸಮರ್ಪಕ ವೇತನ ನೀಡುವಂತೆ ಆಗ್ರಹಿಸಿ ವಾಟರ್‌ಮನ್‌ಗಳು ಉಪವಿಭಾಗಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಪುರಸಭೆಯಲ್ಲಿ ಗುತ್ತಿಗೆ ಆಧಾರ ಮೇಲೆ ವಾಟರ್‌ಮನ್‌ಗಳಾಗಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ ಸರಿಯಾಗಿ ವೇತನ ನೀಡದೆ ಸತಾಯಿಸಲಾಗುತ್ತಿದೆ. ಇದರಿಂದ ಬಡ ಕುಟುಂಬಗಳು ಬೀದಿ ಪಾಲಾಗುತ್ತಿವೆ ಎಂದು ಆರೋಪಿಸಿದರು. ಪುರಸಭೆಯಲ್ಲಿ ಹಲವಾರು ವರ್ಷಗಳಿಂದ ವಾಟರಮನಗಳಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ಪದೇ, ಪದೇ ಮುಖ್ಯಾಧಿಕಾರಿಗಳು, ಅಭಿಯಂತರು ಕುಂಟು ನೆಪ ಹೇಳುತ್ತಾ 3 ತಿಂಗಳಿನಿಂದ ಸಂಬಳ ನೀಡಿಲ್ಲ. ಗುತ್ತಿಗೆದಾರರನ್ನು ವಿಚಾರಿಸಿದರೆ ಅಧಿಕಾರಿಗಳನ್ನು ಕೇಳಿರಿ ಎನ್ನುತ್ತಾರೆ. ಅಧಿಕಾರಿಗಳನ್ನು ಕೇಳಿದರೆ ಸ್ಪಂದಿಸುತ್ತಿಲ್ಲ ಎಂದು ಅಳಲು ತೋಡಿಕೊಂಡರು. ಕಾರ್ಮಿಕ ಮುಖಂಡ ಸುಭಾಸ ಕಾಜಗಾರ ಮಾತನಾಡಿ, ನಿಯಮಾನುಸಾರ ಪುರಸಭೆಯಿಂದ ನೀಡಬೇಕಾದ ವೇತನ ನೀಡದೆ ಸತಾಯಿಸಲಾಗುತ್ತಿದೆ. ಸಂಬಳವಿಲ್ಲದೆ ಒಂದೊತ್ತಿನ ಊಟಕ್ಕೂ ತೊಂದರೆಯಾಗಿದೆ. ಮೇಲಧಿ ಕಾರಿಗಳು ತುರ್ತು ಗಮನ ಹರಿಸಿ ವೇತನ ಕೊಡಿಸಿ ಕೊಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸೋಮಪ್ಪ ಕಡಕೋಳ, ಯಲ್ಲಪ್ಪ ಸನದಿ, ವಿಠಲ ಚಳಕೊಪ್ಪ, ಮುಸ್ತಾಕ ಲಕನವಿ, ಶಮಶುದ್ದೀನ ದೇಶನೂರ, ಶೆಟ್ಟೆಪ್ಪ ಕೆಳಗೇರಿ, ರಾಘವೇಂದ್ರ ಕಬ್ಬಲಗಿ, ಅಣ್ಣಪ್ಪ ಗಾಣಿಗೇರ, ಮಹೇಶ ಭರಮನ್ನವರ, , ಸುನೀಲ ಮ್ಯಾಗೇರಿ, ಶಿವಾನಂದ ಅಕ್ಕಿ, ಅಜಯ ಪೂಜೇರಿ, ಶಿವಾನಂದ ಶಿರವಂತಿ ಹಾಗೂ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.