ತಂಬಾಕು ಉತ್ಪನ್ನ ಮಾರಾಟಕ್ಕೆ ನಿರ್ಬಂಧ
ಪ್ರತಿ 3 ತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ಹಾಗು ಪರಿಶೀಲನೆ ನಡೆಸುವಂತೆ ಸೂಚಿಸಿದರು.
Team Udayavani, May 19, 2022, 6:23 PM IST
ವಿಜಯಪುರ: ಕಳೆದ 14 ವರ್ಷಗಳ ಹಿಂದೆ ಜಾರಿಗೆ ಬಂದಿರುವ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸಬೇಕಿದೆ. ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮ ಹಾಗೂ ಕಾನೂನುಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ವಿ.ಬಿ. ದಾನಮ್ಮವರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ತಂಬಾಕು ನಿಯಂತ್ರಣ ಕೋಶದ ಎರಡನೇ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ತಂಬಾಕು ಉತ್ಪನ್ನಗಳ ಉತ್ಪಾದನೆ, ಶೇಖರಣೆ, ವಿತರಣೆ ಹಾಗೂ ಮಾರಾಟ ನಿಯಂತ್ರಿಸುವುದೇ ಮುಖ್ಯ ಉದ್ದೇಶ ಎಂದರು.
ತಂಬಾಕು ಪರಿಸರಕ್ಕೆ ಮಾರಕ ಧ್ಯೇಯ ವಾಕ್ಯದಡಿ ಪ್ರಸಕ್ತ ವರ್ಷ ಎಲ್ಲ ಇಲಾಖೆಗಳಲ್ಲಿ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಬೇಕು. ತಂಬಾಕು ನಿರ್ಬಂಧ ಕಾನೂನುಗಳನ್ನು ಜಾರಿಗಾಗಿ ತಂಬಾಕು ವ್ಯಸನ ಮುಕ್ತಗೊಳಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯ, ಪ್ರವಾಸಿ ತಾಣಗಳು ಎಲ್ಲವೂ ತಂಬಾಕು ಮುಕ್ತ ಎಂದು ಘೋಷಿಸಿ ಕ್ರಮ ವಹಿಸದ ಬಗ್ಗೆ ಮೇ 25ರೊಳಗೆ ಜಿಲ್ಲಾ ಧಿಕಾರಿಗಳ ಕಚೇರಿಗೆ ವರದಿ ಸಲ್ಲಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಗಡುವು ವಿದಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ 150 ತಂಬಾಕು ಮುಕ್ತ ಕಚೇರಿ ನಾಮಫಲಕ ಬೋರ್ಡ್‌ಗಳನ್ನು ಮುದ್ರಿಸಿದ್ದು, ಇದುವರೆಗೆ ಜಿಲ್ಲೆಯಲ್ಲಿ 65 ಇಲಾಖೆಗಳಿಗೆ ನಾಮಫಲಕ ಅಳವಡಿಸಿ ತಂಬಾಕು ಮುಕ್ತ ಕಚೇರಿ ಎಂದು ಘೋಷಿಸಲಾಗಿದೆ. ಕೆಲವು ಇಲಾಖೆಗಳಲ್ಲಿ ತಂಬಾಕು ಮುಕ್ತ ಕಚೇರಿ ನಾಮಫಲಕ ಅಳವಡಿಸಿದ ಮಾಹಿತಿ ಲಭ್ಯವಾಗಿಲ್ಲ ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಅಧಿಕಾರಿ ಡಾ| ಕವಿತಾ ಅವರು ಸಭೆಗೆ ತಿಳಿಸಿದರು.
ಸರ್ಕಾರದ ಎಲ್ಲ ಕಚೇರಿ ಕಟ್ಟಡಗಳಲ್ಲಿ ಕಡ್ಡಾಯ ತಂಬಾಕು ಮುಕ್ತ ಕಚೇರಿ ಎನ್ನುವ ನಾಮಫಲಕ ಅಳವಿಡಿಸಲು ಕ್ರಮ ವಹಿಸಿ ಅದರ ಮಾಹಿತಿಯನ್ನು ಜಿಲ್ಲಾ ಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಡಿಡಿಪಿಐಗೆ ಸೂಚನೆ: ಜಿಲ್ಲೆಯಲ್ಲಿ ವಿವಿಧ ತಾಲೂಕುಗಳಲ್ಲಿನ 221ರಲ್ಲಿ 52 ಶೈಕ್ಷಣಿಕ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾತ್ರ ತಂಬಾಕು ಮುಕ್ತ ಸಂಸ್ಥೆ ಎಂದು ಘೋಷಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳನ್ನಾಗಿ ಘೋಷಿಸುವ ಪ್ರಕ್ರಿಯೆ ಮೇ 25ರೊಳಗೆ ಮುಕ್ತಾಯಗೊಳ್ಳಬೇಕು. ಈ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಎಂದು ಡಿಡಿಪಿಐ ಅವರಿಗೆ ಸೂಚಿಸಿದರು.
ತನಿಖಾದಳಕ್ಕೆ ಸೂಚನೆ: ಜಿಲ್ಲೆಯಲ್ಲಿ ಕೋಟಾ³-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರತಿ 3 ತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ಹಾಗು ಪರಿಶೀಲನೆ ನಡೆಸುವಂತೆ ಸೂಚಿಸಿದರು.
ತಹಶೀಲ್ದಾರ್‌ರಿಗೆ ಸೂಚನೆ: ಶೈಕ್ಷಣಿಕ ಸಂಸ್ಥೆಗಳು 100 ಅಡಿ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ವಿರುದ್ಧ ತನಿಖಾ ದಳದ ಸದಸ್ಯರು ದಾಳಿ ಮಾಡಿ, ತಂಬಾಕು ಉತ್ಪನ್ನ ಮಾರಾಟ ನಿಲ್ಲಿಸಬೇಕು. ತಾಲೂಕು ಮಟ್ಟದ ದಾಳಿಗೆ ದಿನಾಂಕ ನಿಗದಿ ಮಾಡಿಕೊಂಡು ತಹಶೀಲ್ದಾರ್‌ರ ಮೇಲ್ವಿಚಾರಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಅಬಕಾರಿ ಇಲಾಖೆಗೆ ಸೂಚನೆ: ಅಬಕಾರಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ಮದ್ಯದ ಅಂಗಡಿ, ಬಾರಗಳಲ್ಲಿ ಸೆಕ್ಷನ್ 4ರ ನಾಮಫಲಕ ಅಳವಡಿಸಿ, ಕೊಟಾ³ ನಿಯಮಗಳು ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಅಗತ್ಯ ಎನಿಸಿದಲ್ಲಿ ತನಿಖಾ ದಳದೊಂದಿಗೆ ದಾಳಿ ನಡೆಸುವಂತೆ ಸೂಚಿಸಿದರು.
ಅಧಿಕಾರಿಗಳಿಗೆ ನಿರ್ದೇಶನ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವಂತಹ ಎಲ್ಲ ವಸತಿ ನಿಲಯಗಳು ಮತ್ತು ಸಂಸ್ಥೆಗಳನ್ನು ಸರ್ಕಾರದ ಮಾರ್ಗಸೂಚಿಯಂತೆ ತಂಬಾಕು ಮುಕ್ತ ಸಂಸ್ಥೆಗಳನ್ನಾಗಿ ಘೋಷಣೆ ಮಾಡಲು ಕ್ರಮ ವಹಿಸಬೇಕು. ಪ್ರವಾಸೋದ್ಯಮ ಇಲಾಖೆಯಡಿ ವಿವಿಧ ಪ್ರಮುಖ ಪ್ರವಾಸಿ ಸ್ಥಳಗಳನ್ನು ತಂಬಾಕು ಮುಕ್ತವನ್ನಾಗಿ ಘೋಷಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಸಭೆಯಲ್ಲಿ ಸಹಾಯಕ ಆಯುಕ್ತ ಬಲರಾಮ ಲಮಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ರಾಜಕುಮಾರ ಯರಗಲ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಜೈಬುನ್ನಿಸಾ ಬೀಳಗಿ, ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ್ವರಿ ಗೋಲಗೇರಿ, ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ| ಸಂಪತ್ ಗುಣಾರಿ, ಜಿಲ್ಲಾ ತಂಬಾಕು ಸಲಹೆಗಾರ ಡಾ| ಪ್ರಕಾಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.