ರಸ್ತೆ ಅಪಘಾತದಲ್ಲಿ ಮಾಜಿ ಶಾಸಕ ಹಕ್ಯಾಗೋಳ ಸಾವು
Team Udayavani, Dec 29, 2018, 12:30 AM IST
ಚಿಕ್ಕೋಡಿ: ಸರಳ ಸಜ್ಜನ ರಾಜಕಾರಣಿ, ಚಿಕ್ಕೋಡಿ ವಿಧಾನಸಭೆ ಮತಕ್ಷೇತ್ರದ ಮಾಜಿ ಶಾಸಕ ದತ್ತು ಹಕ್ಯಾಗೋಳ(78) ಹುಕ್ಕೇರಿ ತಾಲೂಕಿನ ಕಣಗಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಮತ್ತು ಲಾರಿ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಕೇರೂರ ಗ್ರಾಮದವರಾದ ದತ್ತು ಹಕ್ಯಾಗೋಳ ಶುಕ್ರವಾರ ಬೆಳಗ್ಗೆ 11.30ರ ಸುಮಾರಿಗೆ ಸ್ವಗ್ರಾಮದಿಂದ ಹಿಟ್ನಿಗೆ ತೆರಳುವಾಗ ಅವರ
ಬೈಕ್‌ಗೆ ಲಾರಿ ಹಾಯ್ದು ಬೈಕ್ ಸವಾರ ಸುರೇಶ ಗಾಡಿಕರ ಮತ್ತು ದತ್ತು ಹಕ್ಯಾಗೋಳ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ದತ್ತು ಹಕ್ಯಾಗೋಳ 2004ರಲ್ಲಿ ಚಿಕ್ಕೋಡಿ ಮೀಸಲು ಕ್ಷೇತ್ರದಿಂದ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಬಿಜೆಪಿಯ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಅವರು, ಇತ್ತೀಚೆಗೆ ಚಿಕ್ಕೋಡಿ ಜಿಲ್ಲಾ ಹೋರಾಟದಲ್ಲಿ ಗುರುತಿಸಿಕೊಂಡು ಜಿಲ್ಲಾ ಹೋರಾಟ ಸಮಿತಿ ಮುಖಂಡ ಬಿ.ಆರ್.ಸಂಗಪ್ಪಗೋಳ ಜತೆಗೂಡಿ ಚಿಕ್ಕೋಡಿ ಜಿಲ್ಲೆ ರಚನೆಗೆ ಅಥಣಿ, ಕಾಗವಾಡ, ನಿಪ್ಪಾಣಿ,
ರಾಯಬಾಗ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದರು. ಅವರ ನಿಧನದಿಂದ ಕೇರೂರ ಗ್ರಾಮದಲ್ಲಿ ಮೌನ ಆವರಿಸಿದೆ.
ಗುಡಿಸಲಿನಿಂದ ವಿಧಾನಸಭೆಗೆ: ಬಡ ಕುಟುಂಬದಿಂದ ಬಂದ ದತ್ತು ಹಕ್ಯಾಗೋಳ ಎಲ್ಲರ ಜತೆ ಆತ್ಮೀಯವಾಗಿ ಬೆರೆತು ಪ್ರೀತಿ
ವಾತ್ಸಲ್ಯದಿಂದ ಕಾಣುತ್ತಿದ್ದರು. ಕೇಂದ್ರ ಸಚಿವ ರಮೇಶ ಜಿಗಜಿಣಗಿ ಗರಡಿಯಲ್ಲಿ ಬೆಳೆದ ಅವರು, 1998ರಲ್ಲಿ ಕೇರೂರ ಜಿಪಂ ಸದಸ್ಯರಾಗಿ ಆಯ್ಕೆಯಾಗಿದ್ದರು. ರಮೇಶ ಜಿಗಜಿಣಗಿ ಬಿಜೆಪಿ ಸೇರಿದ ನಂತರ 2004ರಲ್ಲಿ ಚಿಕ್ಕೋಡಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಜಿಪಂ ಸದಸ್ಯರಾಗಿ, ಶಾಸಕರಾಗಿ ಕಾರ್ಯ ನಿರ್ವಹಿಸಿದ್ದರೂ ಗುಡಿಸಲಿನಲ್ಲೇ ವಾಸವಾಗಿದ್ದ ಸರಳ ವ್ಯಕ್ತಿ ಅವರು.
ಶಾಸಕರಾದ ಎರಡು ವರ್ಷದ ನಂತರ ಕೇರೂರ ಗ್ರಾಮದಲ್ಲಿ ಸಣ್ಣ ಮನೆ ಕಟ್ಟಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.