ಲಾಕ್‌ಡೌನ್‌ನಲ್ಲಿ ಖಾಲಿ ಕೂರದೇ ರೈತರೇ ನಿರ್ಮಿಸಿದ್ರು ರಸ್ತೆ!

ಕಿವಿ ಇಲ್ಲದ ಸರ್ಕಾರಕ್ಕೆ ರಸ್ತೆ ನಿರ್ಮಿಸಿ ತೊಡೆ ತಟ್ಟಿದ ಅನ್ನದಾತ

Team Udayavani, May 5, 2020, 3:28 PM IST

ಲಾಕ್‌ಡೌನ್‌ನಲ್ಲಿ  ಖಾಲಿ ಕೂರದೇ ರೈತರೇ ನಿರ್ಮಿಸಿದ್ರು ರಸ್ತೆ!

ಬೆಳಗಾವಿ: ಲಾಕ್‌ಡೌನ್‌ ಮಧ್ಯೆ ಖಾಲಿ ಕುಳಿತು ಸಮಯ ವ್ಯರ್ಥ ಮಾಡದೇ ತಮ್ಮ ಹೊಲಗಳಿಗೆ ಹೋಗುವ 2.5 ಕಿ.ಮೀ. ರಸ್ತೆಗಾಗಿ ರೈತರೇ ತಮ್ಮ ಕೈಯಿಂದ ಹಣ ವೆಚ್ಚ ಮಾಡಿ, ಅವರೇ ಕಲ್ಲು-ಮಣ್ಣು ಹೊತ್ತು ಸುಸಜ್ಜಿತ ರಸ್ತೆ ನಿರ್ಮಿಸುವ ಮೂಲಕ ಸರ್ಕಾರಕ್ಕೆ ತೊಡೆ ತಟ್ಟಿದ್ದಾರೆ.

ಬೆಳಗಾವಿ ತಾಲೂಕಿನ ಮಾರೀಹಾಳ ಗ್ರಾಮದ ರೈತರು ತಮ್ಮ ಹೊಲಗಳಿಗೆ ಹೋಗಲು ನಿತ್ಯ ಪರದಾಡುತ್ತಿದ್ದರು. ಕಳೆದ ಸಲ ಅಪ್ಪಳಿಸಿದ್ದ ಪ್ರವಾಹದಲ್ಲಿ ಇಡೀ ಮಣ್ಣಿನ ರಸ್ತೆ ಕಿತ್ತು ನಡೆದಾಡುವುದೇ ದುಸ್ತರವಾಗಿತ್ತು. ಇಂಥದರಲ್ಲಿ ಮುಂಬರುವ ಮಳೆಗಾಲದಲ್ಲಿ ಕಷ್ಟ ಪಡಬಾರದೆಂಬ ಉದ್ದೇಶದಿಂದ ರೈತರೇ ಬೆಳಗ್ಗೆಯಿಂದ ಸಂಜೆವರೆಗೆ ಬೆವರು ಸುರಿಸಿ ದುಡಿದು ರಸ್ತೆ ನಿರ್ಮಿಸಿ ಮಾದರಿಯಾಗಿದ್ದಾರೆ.

ಮಾರೀಹಾಳ ಗ್ರಾಮದ ಶ್ರೀ ಪತ್ರಿ ಬಸವಣ್ಣ ದೇವಸ್ಥಾನದಿಂದ ಮೋದಗಾ ಗ್ರಾಮದ ಹೊಲಗಳಿಗೆ ಸಂಪರ್ಕಿಸುವ ರಸ್ತೆ ಹದಗೆಟ್ಟಿತ್ತು. ಕಳೆದ 15 ವರ್ಷಗಳಿಂದ ರೈತರು ನಿತ್ಯ ಸಂಕಟ ಪಡುತ್ತಿದ್ದರು. ರಸ್ತೆ ನಿರ್ಮಿಸುವಂತೆ ಸಂಸದರು, ಶಾಸಕರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಬಳಿ ಕೈ ಮುಗಿದು ಬೇಡಿಕೊಂಡಿದ್ದರೂ ಪ್ರಯೋಜನವಾಗಿರಲಿಲ್ಲ.

ಶಿಫ್ಟ್‌ ಪ್ರಕಾರ ದುಡಿದ ರೈತರು: ಈ ರಸ್ತೆಗೆ ಹೊಂದಿಕೊಂಡು 250ಕ್ಕೂ ಹೆಚ್ಚು ರೈತರ ಗದ್ದೆಗಳು ಇವೆ. ಪ್ರತಿಯೊಬ್ಬ ರೈತರಿಂದ 2-3 ಸಾವಿರ ರೂ. ಸಂಗ್ರಹಿಸಿಕೊಂಡು 400 ಟ್ರಿಪ್‌ ಕಲ್ಲು ಹಾಗೂ 400 ಟ್ರಿಪ್‌ ಟ್ರ್ಯಾಕ್ಟರ್‌ ಕೆಂಪು ಮಣ್ಣು ತಂದಿದ್ದಾರೆ. ಕಳೆದ ಆರೇಳು ದಿನಗಳಿಂದ 40 ಜನ ರೈತರ ತಂಡ ಶಿಫ್ಟ್‌ ಪ್ರಕಾರ ಕೆಲಸ ಮಾಡಿ ಬಹುತೇಕ ರಸ್ತೆ ಕೆಲಸ ಮುಗಿಸಿದೆ. 15 ಅಡಿ ಅಗಲ ಹಾಗೂ ಆರು ಅಡಿ ಎತ್ತರದಲ್ಲಿ ರಸ್ತೆಯನ್ನು ನಿರ್ಮಿಸಿಕೊಂಡು ಮುಂಬರುವ ಮಳೆಯಿಂದ ಎದುರಾಗುವ ಸಮಸ್ಯೆಯಿಂದ ಮುಕ್ತಿ ಪಡೆದಿದ್ದಾರೆ.

ಖಾಲಿ ಕೂರದೇ ಕೆಲಸ ಮಾಡಿದ್ರು: ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಬಹುತೇಕ ರೈತರಿಗೆ ಕೃಷಿ ಚಟುವಟಿಕೆ ಅಷ್ಟಕ್ಕಷ್ಟೇ ಇತ್ತು. ಜತೆಗೆ ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಶ್ರೀ ಬಸವೇಶ್ವರರ ಜಾತ್ರೆ ಇತ್ತು. ಜಾತ್ರೆ ವೇಳೆ ಗ್ರಾಮದ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ವಾರ ಬಿಡಲಾಗುತ್ತದೆ. ಈ ಸಲದ ಜಾತ್ರೆ ಲಾಕ್‌ಡೌನ್‌ ದಿಂದಾಗಿ ರದ್ದು ಮಾಡಲಾಗಿತ್ತು. ಇಂಥದರಲ್ಲಿ ರೈತರಿಗೆ ಖಾಲಿ ಕೂರುವುದಕ್ಕಿಂತ ತಾವೇ ಸ್ವತಃ ರಸ್ತೆ ನಿರ್ಮಿಸಬೇಕೆಂಬ ಯೋಚನೆ ಹೊಳೆದಿದೆ. ಸರ್ಕಾರದವರು ಗ್ರಾಮ, ಪಟ್ಟಣವನ್ನೇ ಕೇಂದ್ರೀಕರಿಸಿಕೊಂಡು ಕೆಲಸ ಮಾಡುತ್ತಾರೆ ಹೊರತು ಹೊಲದಲ್ಲಿರುವ ರಸ್ತೆ ಮಾಡೋದಿಲ್ಲ. ಹೀಗಾಗಿ ನಾವೆಲ್ಲ ಸೇರಿಕೊಂಡು ರಸ್ತೆ ನಿರ್ಮಿಸುವ ಮೂಲಕ ನಿರಾಳರಾಗಿದ್ದೇವೆ ಎನ್ನುತ್ತಾರೆ ರೈತರಾದ ಈರಣ್ಣ ಮತ್ತು ಉದಯ ಮಲ್ಲನ್ನವರ.

ಹೊಲದ ಮಧ್ಯ ಭಾಗದಲ್ಲಿರುವ ಈ ರಸ್ತೆ ನಿರ್ಮಾಣಕ್ಕಾಗಿ ಅನೆಕ ಜನಪ್ರತಿನಿಧಿ  ಗಳ ಗಮನಕ್ಕೆ ತರಲಾಗಿದೆ. 15 ವರ್ಷಗಳಿಂದ ಅಲೆದಾಡಿದರೂ ರಸ್ತೆ ಮಾತ್ರ ನಿರ್ಮಾಣವಾಗಿರಲಿಲ್ಲ. ಕಳೆದ ವರ್ಷದ ಭಾರೀ ಮಳೆಯಿಂದ ಮಣ್ಣೆಲ್ಲ ಕಿತ್ತು ಹೋಗಿತ್ತು. ಈಗ ಲಾಕ್‌ಡೌನ್‌ನಲ್ಲಿ ನಾವೆಲ್ಲ ಸೇರಿಕೊಂಡು ಕೈಯಿಂದ ಹಣ ಕೂಡಿಸಿ ಲಕ್ಷಾಂತರ ರೂ. ಖರ್ಚು ಮಾಡಿ ರಸ್ತೆ ನಿರ್ಮಿಸಿದ್ದೇವೆ. -ಮಲ್ಲಿಕಾರ್ಜುನ ಮಾದಮ್ಮನವರ, ರೈತ ಮುಖಂಡರು

ಖಾಲಿ ಕುಂತ ಟೈಮ್‌ ವೇಸ್ಟ್‌ ಮಾಡೋದಕ್ಕಿಂತ ನಾವ ಎಲ್ಲಾರೂ ಕೈಯಿಂದ ರೊಕ್ಕಾ ಹಾಕಿ ರಸ್ತಾ ಮಾಡ್ಕೊಳ್ಳಾಕತೇವ. ಮುಂದ ಮಳಿ ಬಂತಂದ್ರ ನಮ್ಮ ಹೊಲಾ ಅತ್ತ, ನಾವ ಇತ್ತ ಆಗತಿದ್ರು. ಹೆಂಗರೇ ಮಾಡಿ ರಸ್ತಾ ಮಾಡೋಣು ಅಂತ ಎಲ್ಲಾರೂ ಒಂದಾಗಿ ದುಡದ ರಸ್ತಾ ಮಾಡಕೊಂಡ ಪಾರ ಆಗೇವ. -ಸಿದ್ದಯ್ಯ ಪೂಜೇರಿ, ರೈತರು

 

­-ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.