ಸಂಕೇಶ್ವರ: ವೈದ್ಯರ ನಿರ್ಲಕ್ಷ; ಠಾಣೆ ಎದುರು ಬಾಣಂತಿ ಶವ ಇಟ್ಟು ಪ್ರತಿಭಟನೆ
Team Udayavani, Aug 4, 2023, 9:56 PM IST
ಸಂಕೇಶ್ವರ : ಮಹಿಳೆಯೊಬ್ಬರು ಸರಕಾರಿ ವೈದ್ಯರ ನಿರ್ಲಕ್ಷ್ಯ ದಿಂದ ಮೃತಪಟ್ಟಿದ್ದಾರೆಂದು ಆರೋಪಿಸಿ ವೈದ್ಯರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಮೃತ ಮಹಿಳೆಯ ಸಂಬಂಧಿಕರು ಮೃತದೇಹವನ್ನು ಪೊಲೀಸ್ ಠಾಣೆಯ ಎದುರು ಇಟ್ಟು ಪ್ರತಿಭಟನೆಗೆ ಮುಂದಾದ ಘಟನೆ ಸಂಕೇಶ್ವರ ಪಟ್ಟಣದಲ್ಲಿ ವರದಿಯಾಗಿದೆ.
ಕಿರಣ ಟಿಕ್ಕೆ (24) ಎಂಬುವ ಬಾಣಂತಿ ಮೃತಪಟ್ಟ ದುರ್ಧೈವಿಯಾಗಿದ್ದಾಳೆ. ಈ ಬಾಣಂತಿಯ ಸಾವಿನಿಂದ 10 ದಿನದ ಗಂಡು ಮಗು ಅನಾಥವಾಗಿದ್ದು, ತಾಯಿ ಶವ ಇರುವ ಅಂಬ್ಯುಲನ್ಸ್ ನಲ್ಲಿ ಪುಟ್ಟ ಕಂದಮ್ಮನ ಅಳುವ ಸ್ಥಳದಲ್ಲಿದ್ದ ನಾಗರಿಕರ ಕಣ್ಣಲ್ಲಿ ನೀರು ಬರುವಂತೆ ಮಾಡತೊಡಗಿದೆ.
ಮೃತ ಬಾಣಂತಿಯ ಪಾಲಕರು ಹೇಳುವ ಪ್ರಕಾರ ಹುಕ್ಕೇರಿ ತಾಲೂಕಿನ ಕೋಣಕೇರಿ ಗ್ರಾಮದ ಮಹಿಳೆಯೊಬ್ಬರಿಗೆ ಕಳೆದ ಕೆಲವು ದಿನಗಳ ಹಿಂದೆ ಹೆರಿಗೆ ಮಾಡಲಾಗಿತ್ತು. ಆದರೆ ಅವಳಿಗೆ ಹುಕ್ಕೇರಿ ತಾಲೂಕಿನ ನಿಡಸೋಸಿ ಸರಕಾರಿ ಆಸ್ಪತ್ರೆಯಲ್ಲಿ ಕುಟುಂಬ ಯೋಜನೆಯ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.
ಅದರ ಬಳಿಕ ಮಹಿಳೆ ಕಳೆದ ನಾಲ್ಕು ದಿನಗಳ ಹಿಂದಷ್ಟೇ ಸರಕಾರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಅದರ ಬಳಿಕ ಹೊಟ್ಟೆನೋವು ಉಂಟಾಗಿ ಬೇರೆ ಆಸ್ಪತ್ರೆಗೆ ದಾಖಲಾಗಿದ್ದರು.
ಅಲ್ಲಿ ಮೃತ ಮಹಿಳೆಯ ಹೊಟ್ಟೆಯನ್ನು ಸ್ಕ್ಯಾನ್ ಮಾಡಲಾಗಿದ್ದು, ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗಿ ಮಹಿಳೆ ಮೃತಪಟ್ಟಿರುವುದಾಗಿ ಅಲ್ಲಿನ ವೈದ್ಯರು ದೃಢಪಡಿಸಿದ್ದಾರೆ ಎಂದು ಬಾಣಂತಿಯ ಪಾಲಕರು ಹೇಳುತ್ತಿದ್ದಾರೆ.
ಆದರೆ ಬಾಣಂತಿಯ ಪಾಲಕರು ಅಂಬ್ಯುಲನ್ಸ್ ನಲ್ಲಿ ಶವ ತಂದು ಸಂಕೇಶ್ವರ ಪೊಲೀಸ್ ಠಾಣೆಯ ಎದುರು ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ನಮ್ಮ ಬಾಣಂತಿಯ ಸಾವಿಗೆ ನಿಡಸೋಸಿ ವೈದ್ಯರ ನಿರ್ಲಕ್ಷ್ಯವೇ ಕಾರಣವಾಗಿದ್ದು, ಅವರ ವಿರುದ್ದ ಕ್ರಮಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಅಲ್ಲದೆ ಮೃತ ಮಹಿಳೆಯ ಶವವನ್ನು ಪೊಲೀಸರು ಶವ ಪರೀಕ್ಷೆಗೆ ಕಳಿಸುತ್ತಿದ್ದು, ಮರಣೋತ್ತರ ವರದಿಯ ನಂತರ ಬಾಣಂತಿಯ ಸಾವಿನ ಚಿತ್ರಣ ಹೊರಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.