ಕಾಂಗ್ರೆಸ್ ಎಲ್ಲಾ ಸಮುದಾಯಗಳನ್ನು ಒಳಗೊಂಡಿರುವ ಪಕ್ಷ : ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಪಕ್ಷ ಅಹಿಂದ ಪರವಾಗಿಯೇ ಇದೆ
Team Udayavani, Feb 12, 2021, 4:01 PM IST
ಬೆಳಗಾವಿ : ಕಾಂಗ್ರೆಸ್ ಪಕ್ಷ ಅಹಿಂದ ಪರವಾಗಿಯೇ ಇದೆ. ಮತ್ತೆ ಅಹಿಂದ ಹೋರಾಟ ಮಾಡುವ ಅಗತ್ಯ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯಗಳನ್ನು ಒಳಗೊಂಡಿರುವ ಪಕ್ಷವಾಗಿದೆ. ಹೀಗಾಗಿ, ಅಹಿಂದ ಹೋರಾಟವನ್ನು ಮತ್ತೆ ಸಂಘಟಿಸುವ ಅವಶ್ಯಕತೆ ಇಲ್ಲ ಎಂದು ಶುಕ್ರವಾರ(ಫೆ. 12)ದಂದು ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದ್ದಾರೆ.
ಓದಿ : ಜಿಲ್ಲಾಡಳಿತಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ|ಸಂಜೀವ ಕುಮಾರ ಸೂಚನೆ
ಮೀಸಲಾತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಸಮುದಾಯಗಳ ಮೀಸಲಾತಿ ಹೋರಾಟದಲ್ಲಿ ರಾಜಕೀಯವೂ ನಡೆಯುತ್ತಿದೆ ಹಾಗೂ ಷಡ್ಯಂತ್ರವೂ ಇದೆ. ಅರ್ಹವಾಗಿ ಮೀಸಲಾತಿ ಸಿಗಬೇಕಾದ ಸಮುದಾಯಗಳಿಗೆ ತೊಂದರೆಯನ್ನು ನೀಡಲಾಗುತ್ತಿದೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.
ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಮುಖ್ಯಮಂತ್ರಿಗಳು ಸಮಯ ಕೇಳಿದ್ದಾರೆ. ಅವರ ನಿರ್ಣಯಕ್ಕಾಗಿ ಕಾಯುತ್ತೇವೆ. ಮುಂದೇನು ಕಾರ್ಯನಡೆ ಏನು ಎಂಬುದನ್ನು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇನ್ನು, ಘಟಪ್ರಭಾದಲ್ಲಿರುವ ನಾ.ಸು. ಹರ್ಡೀಕರ್ ಸೇವಾದಳ ಕೇಂದ್ರದಲ್ಲಿ ವಿವಿಧ ರೀತಿಯ ತರಬೇತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಕೇಂದ್ರದ ಸಾಂಕೇತಿಕ ಉದ್ಘಾಟನೆಗೆ ರಾಷ್ಟ್ರೀಯ ನಾಯಕರನ್ನು ಕರೆಸಬೇಕೆಂಬ ಯೋಚನೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಸದ್ಯಕ್ಕೆ ಅಲ್ಲಿ ಯಥಾಪ್ರಕಾರವಾಗಿ ಕಾರ್ಯಕ್ರಮಗಳು ನಡೆದಿವೆ ಎಂದು ಅವರು ಹೇಳಿದರು.
ಓದಿ : ಶೀಘ್ರದಲ್ಲೆ ಹಳಿಗಿಳಿಯಲಿವೆ ಎಲ್ಲಾ ಪ್ಯಾಸೆಂಜರ್ ರೈಲುಗಳು : ರೈಲ್ವೇ ಸಚಿವಾಲಯ
ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿದ ಜಾರಕಿಹೊಳಿ, “ಬೆಳಗಾವಿ ಲೋಕಸಭೆ ಉಪಚುನಾವಣೆಯ ಅಭ್ಯರ್ಥಿಯ ಆಯ್ಕೆಯ ಕುರಿತು ಈಗಾಗಲೇ ಸ್ಥಳೀಯ ಮಟ್ಟದ ನಾಯಕರು ಹಾಗೂ ರಾಜ್ಯಮಟ್ಟದ ನಾಯಕರೊಂದಿಗೆ ಸಭೆಗಳನ್ನು ನಡೆಸಿ ಚರ್ಚಿಸಿದ್ದೇವೆ. ಅಂತಿಮವಾಗಿ ಕೆಲವು ಹೆಸರುಗಳನ್ನು ಹೈಕಮಾಂಡ್ ಗೆ ಕಳುಹಿಸಲಾಗಿದೆ. ಹೈಕಮಾಂಡ್ ಸೂಕ್ತ ಅಭ್ಯರ್ಥಿಯ ಹೆಸರನ್ನು ಘೋಷಿಸಲಿದೆ ಎಂದು ತಿಳಿಸಿದರು.
“ಸಿ.ಎಂ. ಇಬ್ರಾಹಿಂ ಹಾಗೂ ಪಕ್ಷದ ನಡುವೆ ಭಿನ್ನಮತ ಉಂಟಾಗಿರುವ ವಿಚಾರಕ್ಕೆ ಸ್ಪಂದಿಸಿದ ಅವರು, ಪಕ್ಷದ ವರಿಷ್ಠರಾದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ ಅವರು ಚರ್ಚಿಸಿ ಬಗೆಹರಿಸಲಿದ್ದಾರೆ” ಎಂದು ಹೇಳಿದ್ದಾರೆ.
ಓದಿ : ಕಿಚ್ಚ ಸುದೀಪ್ ಅವರ 25 ವರ್ಷದ ಸಿನಿ ಪಯಣಕ್ಕೆ ಆತ್ಮೀಯ ಅಭಿನಂದನೆ | Udayavani
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.