Belagavi: ಹೊಸ ವಂಟಮುರಿ ಘಟನೆ: ಸಂತ್ರಸ್ತ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು
Team Udayavani, Dec 16, 2023, 7:14 PM IST
ಬೆಳಗಾವಿ: ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ವಂಟಮುರಿ ಗ್ರಾಮದ ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು ಮಾಡಿ ಆದೇಶಿಸಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವರಾದ ಬಿ.ನಾಗೇಂದ್ರ ಅವರು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ಜಮೀನು ಮಂಜೂರಾತಿಗೆ ನಿರ್ದೇಶನ ನೀಡಿದ್ದರು.
ಈ ಹಿನ್ನೆಲೆಯಲ್ಲಿ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಜಮೀನು ಮಂಜೂರು ಮಾಡಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅನುಮೋದನೆ ನೀಡಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
2.03 ಎಕರೆ ಜಮೀನು ಮಂಜೂರಾತಿ ಜತೆಗೆ ಸರಕಾರವು ಈಗಾಗಲೇ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೂಡ ಘೋಷಿಸಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Protest: ಮಹಿಳೆಯರ ರಕ್ಷಣೆಗೆ ಗ್ಯಾರಂಟಿ ಇಲ್ಲ; ಬಿಜೆಪಿ ಮಹಿಳಾ ಮೋರ್ಚಾ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.