ಬಿಜೆಪಿ ಸರ್ಕಾರದಿಂದ ವಿಷಬೀಜ ಬಿತ್ತುವ ಕೆಲಸ: ಸತೀಶ್ ಜಾರಕಿಹೊಳಿ
Team Udayavani, Apr 24, 2022, 4:45 PM IST
ಬೆಳಗಾವಿ: ಬಿಜೆಪಿ ಸರ್ಕಾರಕ್ಕೆ ಯಾವುದೇ ಜನಹಿತ ಹಾಗೂ ಜನಪರ ಕಾರ್ಯಗಳ ಕಡೆಗೆ ಗಮನ ಇಲ್ಲ. ಕೇವಲ ಜಾತಿಯ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು.
ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಕ್ಕೆ ಕೇವಲ ಚುನಾವಣೆ ಗೆದ್ದು, ರಾಜ್ಯವನ್ನು ಲೂಟಿ ಹೊಡೆಯುವುದೇ ಕೆಲಸವಾಗಿದೆ. ಈಗಿರುವ ಅವರ ಪರ್ಸೆಂಟೇಜ್ ಪ್ರಮಾಣದಲ್ಲಿ ಮುಂದೆ ಶೇಕಡಾ 50 ರಷ್ಟು ಜಾಸ್ತಿಯಾಗಬಹುದು ಎಂದು ಲೇವಡಿ ಮಾಡಿದರು.
ಜನಸಾಮಾನ್ಯರಿಂದ ಹಿಡಿದು ವಿವಿಧೆಡೆ ಪರ್ಸಂಟೇಜ್ ಆರೋಪಗಳು ಸರ್ಕಾರ ಮೇಲೆ ಬರುತ್ತಿವೆ. ಕೇವಲ ವಿರೋಧ ಪಕ್ಷವಾಗಿ ಹೇಳುತ್ತಿಲ್ಲ. ಪರ್ಸೆಂಟೇಜ್ ಕಾಟಕ್ಕೆ ಜನಸಾಮಾನ್ಯರು ರೋಸಿ ಹೋಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಇದನ್ನೂ ಓದಿ:ಸಾಲ ವಾಪಸ್ ಕೇಳಲು ಹೋದವನಿಗೆ ಮದ್ಯ ಕುಡಿಸಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಮಹಿಳೆಯರು!
ಪಿಎಸ್‍ಐ ನೇಮಕಾತಿಯಲ್ಲಿ ನಡೆದ ಹಗರಣದ ತನಿಖೆ ಪಾರದರ್ಶಕವಾಗಿ ಆಗಬೇಕು. ಯಾರೇ ಇರಲಿ ತಪ್ಪಿತಸ್ಥರಿಗೆ ಶಿಕ್ಷೆಯಾಬೇಕು ಎಂದು ಸತೀಶ ಜಾರಕಿಹೊಳಿ ಒತ್ತಾಯಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಆರು ತಿಂಗಳ ಮೊದಲೇ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.