ಉತ್ತರಕ್ಕೆ ಅನ್ಯಾಯವಾದ್ರೆ ಹೋರಾಟ: ಸತೀಶ ಜಾರಕಿಹೊಳಿ
Team Udayavani, Jul 28, 2018, 7:00 AM IST
ಬೆಳಗಾವಿ: ಉತ್ತರ ಕರ್ನಾಟಕಕ್ಕೆ ಅನ್ಯಾಯವಾದರೆ ನಾವೂ ಹೋರಾಟಕ್ಕೆ ಇಳಿಯುತ್ತೇವೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಬಸವರಾಜ ಹೊರಟ್ಟಿ ಹಾಗೂ ನಡಹಳ್ಳಿ ಹೋರಾಟದ ಮುಂಚೂಣಿಯಲ್ಲಿದ್ದಾರೆ. ನಾವೂ ಈ ಹೋರಾಟದಲ್ಲಿ ಭಾಗಿಯಾಗುತ್ತೇವೆ ಎಂದು ಹೇಳಿದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ನಮ್ಮ ಬೆಂಬಲವಿಲ್ಲ. ಆದರೆ ಅನ್ಯಾಯವಾದರೆ ನಾವು ಸುಮ್ಮನಿರುವುದಿಲ್ಲ. ಈ ಭಾಗದ ಶಾಸಕರು ಸೇರಿದಂತೆ ಎಲ್ಲರೂ ಧ್ವನಿ ಎತ್ತುತ್ತೇವೆ. ಸಿದ್ದರಾಮಯ್ಯ ಸರಕಾರವಿದ್ದಾಗ ಬಜೆಟ್‌ನಲ್ಲಿ ಸಾಕಷ್ಟು ಅನುದಾನ ಸಿಕ್ಕಿದೆ. ಈಗ ಕುಮಾರಸ್ವಾಮಿ ಅವಧಿಯಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷಿಸಲಾಗಿದೆ ಎಂದು ಹೇಳಲಾಗುವುದಿಲ್ಲ. ಹಾಗೇನಾದರೂ ಆಗಿದ್ದರೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದುಳಿದಿದೆ ಎಂಬುದರಲ್ಲಿ ಅತಿಶಯೋಕ್ತಿ ಇಲ್ಲ. ಪ್ರಾದೇಶಿಕ ಅಸಮಾನತೆಗೆ ಹೋರಾಟ ಮಾಡಿ ಸರ್ಕಾರದ ಮೇಲೆ ಒತ್ತಡ ಹಾಕಲಾಗುತ್ತದೆ. ಈ ಭಾಗಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ. ಹಾಗಂತ ಪ್ರತ್ಯೇಕ ರಾಜ್ಯಕ್ಕೆ ನಮ್ಮ ಬೆಂಬಲ ಇಲ್ಲ.
– ಎಂ.ಬಿ. ಪಾಟೀಲ ಶಾಸಕ