ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಉಗರಗೋಳ ಪೈಲ್ವಾನರು
Team Udayavani, Sep 25, 2021, 8:30 PM IST
ಸವದತ್ತಿ: ಗ್ರಾಮೀಣ ಪ್ರದೇಶದ ಯುವಕರಿಗೆ ಅವಕಾಶ ನೀಡಿ ಪ್ರೋತ್ಸಾಹಿಸಿದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿ ಸಾಧನೆ ಮಾಡಬಲ್ಲರೆಂಬುದಕ್ಕೆ ತಾಲೂಕಿನ ಉಗರಗೋಳ ಗ್ರಾಮದ ಯುವ ಕುಸ್ತಿಪಟುಗಳೇ ಸಾಕ್ಷಿ.
ನೇಪಾಳದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಮಟ್ಟದ ಇಂಡೋ-ನೇಪಾಳ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ ತಾಲೂಕಿನ ಒಟ್ಟು ಆರು ಕ್ರೀಡಾಪಟುಗಳು ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.
ಉಗರಗೋಳ ಗ್ರಾಮದ ಮೀರಾಸಾಬ ರಾಜೇಸಾಬ ಬೇವಿನಗಿಡದ ಹಿರಿಯರ 92 ಕೆ.ಜಿ, ಮುಷ್ಪಿಕ್ ಬೇವಿನಗಿಡದ ಕಿರಿಯರ 92 ಕೆ.ಜಿ, ಮಕ್ತುಮ್ ಹುಸೇನ್ ಮತ್ತು ಮಾರುತಿ ಕುಂಟೋಜಿ 61 ಕೆ.ಜಿ, ಗಣೇಶಗೌಡ ಚನ್ನಪ್ಪಗೌಡರ 57 ಕೆ.ಜಿ. ಹಾಗೂ ಕೆಂಚಪ್ಪ ಗೌಡಪ್ಪನವರ 55 ಕೆ.ಜಿ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಇದನ್ನೂ ಓದಿ:ಬಿಜೆಪಿ ಸೇರಲು ಕಾಂಗ್ರೆಸ್ಸಿಗರು ತುದಿಗಾಲಿನಲ್ಲಿ ನಿಂತಿದ್ದಾರೆ : ಶಾಸಕ ರೇಣುಕಾಚಾರ್ಯ
ಜೊತೆಗೆ ಅದೇ ಕ್ರೀಡಾ ಕೂಟದಲ್ಲಿ ಸ್ಥಳೀಯ ಪೋಲಿಸ್ ಠಾಣೆಯ ಪೇದೆ ಪ್ರಕಾಶ ಅಣ್ಣಪ್ಪ ಗಾಡಿವಡ್ಡರ ಹಿರಿಯರ 70 ಕೆ.ಜಿ ಮಿಶ್ರ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಂಗಾರದ ಪದಕವನ್ನು ಬಾಚಿಕೊಂಡಿದ್ದಾರೆ.
ಇತ್ತಿಚೇಗೆ ಗೋವಾದ ಮಡಗಾವ್‌ನಲ್ಲಿ ರಾಷ್ಟ್ರೀಯ ಯುವ ಕ್ರೀಡಾ ಮತ್ತು ಶಿಕ್ಷಣ ಫೆಡರೇಷನ್ ವತಿಯಿಂದ ಜರುಗಿದ 3ನೇ ರಾಷ್ಟ್ರೀಯ ಯುಥ್ ಗೇಮ್ಸ್ ಚಾಂಪಿಯನ್ಸ್ಶಿಫ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನದೊಂದಿಗೆ ಅಂತರಾಷ್ಟ್ರೀಯ ಮಟ್ಟದ ಇಂಡೋ-ನೇಪಾಳ ಕ್ರೀಡಾಕೂಟಕ್ಕೆ ದೇಶವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದರು. ಇದೀಗ ಆ ಕ್ರೀಡಾಕೂಟದಲ್ಲಿಯೂ ಸಹ ಚಿನ್ನದ ಪದಕದೊಂಗಿದೆ ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದಾರೆ.
ಗ್ರಾಮೀಣ ಕ್ರೀಡೆ ಎನಿಸಿಕೊಂಡಿರುವ ಕುಸ್ತಿ ಸ್ಪರ್ಧೆಗೆ ಕಡು ಬಡತನದ ನಡುವೆಯೂ ತಮ್ಮನ್ನು ತಾವು ಸಜ್ಜುಗೊಳಿಸಿಕೊಂಡು ಸ್ವಂತ ಪ್ರತಿಭೆಯ ಮೇಲೆಯೇ ಅಂತರಾಷ್ಟ್ರೀಯ ಮಟ್ಟದಲ್ಲಿ ಸುವರ್ಣ ಪದಕ ತಮ್ಮದಾಗಿಸಿಕೊಂಡಿದ್ದು, ಗ್ರಾಮ ಸೇರಿದಂತೆ ಇಡೀ ದೇಶದ ಗೌರವವನ್ನು ಇಮ್ಮಡಿಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.