ಎಸ್ಸಿ, ಎಸ್ಟಿ ಜ್ಯೇಷ್ಠತಾ ಕಾಯ್ದೆ ಜಾರಿಗೆ ಭರವಸೆ
Team Udayavani, Dec 19, 2018, 9:36 AM IST
ಬೆಳಗಾವಿ: ಪರಿಶಿಷ್ಟ ಜಾತಿ, ಪಂಗಡದ ನೌಕರರ ಹಿತ ಕಾಪಾಡಲು ಜ್ಯೇಷ್ಠತಾ ಆಧಾರದಲ್ಲಿ ಮೀಸಲಾತಿ ಕಲ್ಪಿಸುವ ಕಾನೂನಿಗೆ ಸಂಬಂಧಪಟ್ಟಂತೆ ಎರಡು ದಿನದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪರಿಶಿಷ್ಟ
ಜಾತಿ, ಪಂಗಡದ ಶಾಸಕರಿಗೆ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
ರಾಷ್ಟ್ರಪತಿ ಅಂಕಿತ ಹಾಕಿರುವ ಕಾಯ್ದೆ ಜಾರಿ ಕುರಿತಂತೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಮಂಗಳವಾರ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನೂ ಆಹ್ವಾನಿಸಿ, ಬೆಳಗಾವಿ ಅಧಿವೇಶನ ಮುಕ್ತಾಯವಾಗುವ ಮುನ್ನ ಕಾಯ್ದೆ ಜಾರಿಗೊಳಿಸವಂತೆ ಒತ್ತಾಯ ಮಾಡಿದ್ದಾರೆ.
ಈ ಕುರಿತಂತೆ ರಾಜ್ಯ ಸರ್ಕಾರದ ಪರ ಸುಪ್ರೀಂ ಕೊರ್ಟ್‌ನಲ್ಲಿ ವಾದ ಮಾಡುತ್ತಿರುವ ಹಿರಿಯ ನ್ಯಾಯವಾದಿ ಮುಕುಲ್ ರೋಹಟಗಿ ಅವರ ಅಭಿಪ್ರಾಯ ಪಡೆದು ಅಧಿವೇಶನ ಮುಗಿಯುವ ಮೊದಲೇ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಎಂದು ಗೊತ್ತಾಗಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ತಿದ್ದುಪಡಿ ತಂದಿರುವ ಕಾಯ್ದೆಗೆ ರಾಷ್ಟ್ರಪತಿ ಅಂಕಿತವಾಗಿದ್ದರೂ ಜಾರಿಗೊಳಿಸಲು ಹಿಂದೇಟು ಹಾಕುತ್ತಿರುವ ಬಗ್ಗೆ ಸದನದಲ್ಲಿ ಚರ್ಚಿಸಲು ಬಿಜೆಪಿ ಸದಸ್ಯರು ಬುಧವಾರ
ನಿಲುವಳಿ ಸೂಚನೆ ಮಂಡನೆಗೆ ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಮಂಡಿಸುವ ನಿಲುವಳಿ ಸೂಚನೆಗೆ ಪರಿಶಿಷ್ಟ ಜಾತಿ, ಪಂಗಡದ ಶಾಸಕರು ಪಕ್ಷಾತೀತವಾಗಿ ಬೆಂಬಲಿಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.