ಹಿರಿಯ ಪತ್ರಕರ್ತ, ಕಾಂಗ್ರೆಸ್ ಮುಖಂಡ ಪ್ರಕಾಶ ದೇಶಪಾಂಡೆ ಇನ್ನಿಲ್ಲ!
Team Udayavani, May 12, 2021, 2:49 PM IST
ಬೆಳಗಾವಿ: ಜಿಲ್ಲೆಯ ಹಿರಿಯ ಪತ್ರಕರ್ತ, ಲೇಖಕ, ಹುಕ್ಕೇರಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಕಾಶ ದೇಶಪಾಂಡೆ ಇಂದು ಬುಧವಾರ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಕೋವಿಡ್ ಸೋಂಕಿನಿಂದಾಗಿ ಅಸ್ವಸ್ಥರಾಗಿದ್ದ ಅವರನ್ನು ಹುಕ್ಕೇರಿಯ ಆಸ್ಪತ್ರೆಗೆ ಸೇರಿಸಲಾಗಿತ್ತು.
ಹುಕ್ಕೇರಿ ತಾಲೂಕಾ ಕ.ಸಾ.ಪ.ಘಟಕದ ಅಧ್ಯಕ್ಷರಾಗಿದ್ದ ಅವರು ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದರು.
ಇದನ್ನೂ ಓದಿ:ಬೆಡ್ ಕೊರತೆ ನೀಗಿಸಲು 3200 ಸ್ಟೆಪ್ ಡೌನ್ ಆಸ್ಪತ್ರೆ ನಿರ್ಮಾಣ: ಬಸವರಾಜ ಬೊಮ್ಮಾಯಿ
ಕಳೆದ 40 ವರ್ಷಗಳಿಂದ ನಾಡಿನ ವಿವಿಧ ದಿನಪತ್ರಿಕೆಗಳ ವರದಿಗಾರರಾಗಿ ಕಾರ್ಯ ನಿರ್ವಹಿಸಿದ ಅವರು ಕಾಂಗ್ರೆಸ್ ಸೇವಾದಳದಲ್ಲಿ ಅಪಾರ ಸೇವೆ ಸಲ್ಲಿಸಿದ್ದರು.
ಕನ್ನಡ ನಾಡು ನುಡಿ ಹಾಗೂ ಗಡಿಯ ಸಂಬಂಧದ ಅನೇಕ ಹೋರಾಟಗಳಲ್ಲಿ ಭಾಗವಹಿಸಿದ್ದ ಅವರು ತಮ್ಮ ಹುಕ್ಕೇರಿ ತಾಲೂಕಿನಲ್ಲಿ ಅನೇಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ದಿವಂಗತರು ತಮ್ಮ ಹಿಂದೆ ಪತ್ನಿ,ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.