![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 12, 2023, 12:07 PM IST
ಬೆಳಗಾವಿ: ಇಲ್ಲಿಯ ಶಾಹುನಗರದಲ್ಲಿ ವಿದ್ಯುತ್ ದುರಂತದಲ್ಲಿ ಮೂವರು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೆ ಸರಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದರು. ಇದಲ್ಲದೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಸಹ ಆರ್ಥಿಕ ಸಹಾಯ ಮಾಡಿದರು.
ವಿದ್ಯುತ್ ಶಾಕ್ ನಿಂದ ಶಾಹುನಗರದ ಮನೆಯಲ್ಲಿ ಶನಿವಾರ ಬೆಳಗ್ಗೆ ಅವಘಡ ನಡೆದಿದ್ದು ಅಜ್ಜ, ಅಜ್ಜಿ, ಮೊಮ್ಮಗಳು ಸೇರಿ ಮೂವರು ಮೃತಪಟ್ಟಿದ್ದಾರೆ. ವಾಚಮನ್ ಕೆಲಸ ಮಾಡುತ್ತಿದ್ದ ಈರಪ್ಪಾ ಲಮಾಣಿ (50), ಶಾಂತವ್ವ ಲಮಾಣಿ (45) ಹಾಗೂ ಅವರ ಮೊಮ್ಮಗಳು ಅನ್ನಪೂರ್ಣ ಲಮಾಣಿ (8) ಮೃತಪಟ್ಟಿದ್ದಾರೆ.
ಇದನ್ನೂ ಓದಿ:Instagram ಪೋಸ್ಟ್ ನಿಂದ ವಿರಾಟ್ ಕೊಹ್ಲಿ 11.45 ಕೋಟಿ ರೂ ಪಡೆಯುವುದು ನಿಜವೇ? ಅಸಲೀಯತ್ತೇನು
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಲಕ್ಷ್ಮೀ ಹೆಬ್ಬಾಳಕರ್, ಮೃತ ಕುಟುಂಬದವರಿಗೆ ಸಾಂತ್ವನ ಹೇಳಿ, ಧೈರ್ಯವನ್ನು ತುಂಬಿದರು. ಮುಖ್ಯಮಂತ್ರಿಗಳಿಗೆ ಸ್ಥಳದಿಂದಲೇ ಕರೆ ಮಾಡಿ ಘಟನೆಯ ಬಗ್ಗೆ ವಿವರಿಸಿ, ಪ್ರತಿ ವ್ಯಕ್ತಿಗೆ ತಲಾ 2 ಲಕ್ಷ ರೂ,ಗಳನ್ನು ಮಂಜೂರು ಮಾಡಿ ಕೊಡುವಂತೆ ಕೋರಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ತ್ವರಿತಗತಿಯಲ್ಲಿ ಪರಿಹಾರದ ಹಣ ಬಿಡುಗಡೆಗೊಳಿಸಲು ಆದೇಶ ಹೊರಡಿಸಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.