ಕುರಿ ಸಂತೆಯೋ? ರಾಯಬಾಗ ಬಸ್ ನಿಲ್ದಾಣವೋ?
Team Udayavani, Jun 23, 2022, 2:51 PM IST
ರಾಯಬಾಗ: ಪಟ್ಟಣದಲ್ಲಿ ಸೋಮವಾರ ನಡೆಯುವ ಕುರಿ ಆಡುಗಳ ಸಂತೆ ಈಗ ಮತ್ತೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆಯುತ್ತಿದ್ದು, ಇದು ಬಸ್ ನಿಲ್ದಾಣವೋ? ಇಲ್ಲಾ ಕುರಿ ಆಡುಗಳ ಸಂತೆ ಮಾರುಕಟ್ಟೆಯೋ ಎನ್ನುವ ಪ್ರಶ್ನೆ ಜನರನ್ನು ಕಾಡುತ್ತಿದೆ.
ಪಟ್ಟಣದಲ್ಲಿ ಪ್ರತಿ ಸೋಮವಾರ ಕುರಿ-ಆಡುಗಳ ಸಂತೆ ಜರುಗುತ್ತಿದ್ದು, ಪ್ರಸಿದ್ಧಿ ಪಡೆದ ಈ ಸಂತೆಗೆ ಹಬ್ಬಗಳು ಸಮೀಪಿಸುತ್ತಿದ್ದಂತೆ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ ಮತ್ತು ಆಂಧ್ರ ಪ್ರದೇಶಗಳಿಂದಲೂ ವ್ಯಾಪಾರಸ್ಥರು ಬರುತ್ತಾರೆ.
ಬಸ್ ನಿಲ್ದಾಣದ ಆವರಣದಲ್ಲಿ ನಡೆಯುತ್ತಿದ್ದ ಕುರಿ-ಆಡುಗಳ ಸಂತೆಯಿಂದ ಪ್ರಯಾಣಿಕರಿಗೆ ಆಗುವ ತೊಂದರೆ ಗಮನಿಸಿ ಇತ್ತೀಚಿನ ಕೆಲವು ತಿಂಗಳ ಹಿಂದೆ ಬೇರೆ ಕಡೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಈ ವಾರ ಮತ್ತೆ ಬಸ್ ನಿಲ್ದಾಣದಲ್ಲಿ ಸಂತೆ ಜಮಾಯಿಸಿದ್ದು, ಪ್ರಯಾಣಿಕರು ಮತ್ತೆ ಕಿರಿ ಕಿರಿ ಅನುಭವಿಸುವಂತಾಯಿತು. ಕುರಿ ಆಡುಗಳನ್ನು ತುಂಬಲು ಬಂದ ಖಾಸಗಿ ವಾಹನಗಳು ಬಸ್ ನಿಲ್ದಾಣದಲ್ಲಿ ನಿಂತಿದ್ದರಿಂದ ಸಾರಿಗೆ ವಾಹನಗಳು ನಿಲ್ದಾಣಕ್ಕೆ ಬಂದು ಹೋಗಲು ಹರಸಾಹಸ ಪಡುವಂತಾಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಸಂತೆ ನಡೆದರೂ ನಂತರ ಬಸ್ ನಿಲ್ದಾಣ ಆವರಣ ಕುರಿ, ಆಡುಗಳ ಹಿಕ್ಕೆ, ಮೂತ್ರ, ಕಸಕಡ್ಡಿಗಳಿಂದ ಗಲೀಜುಗೊಂಡು ಗಬ್ಬೆದ್ದು ನಾರುತ್ತದೆ. ಇದರಿಂದ ಪ್ರಯಾಣಿಕರು ವಾರವಿಡಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಉಂಟಾಗುತ್ತದೆ. ಕೂಡಲೇ ಜಾನುವಾರು ಸಂತೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂಬುದು ಪಟ್ಟಣದ ನಾಗರಿಕರ ಒತ್ತಾಯವಾಗಿದೆ.
ರಾಯಬಾಗ ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ ಕುರಿ ಆಡುಗಳ ಸಂತೆ ಈಗ ಮತ್ತೆ ಕೂಡಿರುವುದು ತಮಗೂ ಕಂಡು ಬಂದಿದೆ. ಕುರಿ ಆಡುಗಳ ಸಂತೆ ಮಾರುಕಟ್ಟೆಯನ್ನು ಬೇರೆಡೆ ಸ್ಥಳಾಂತರಿಸುವಂತೆ ತಹಶೀಲ್ದಾರ್ ಅವರಿಗೆ ದೂರು ನೀಡಿದ್ದೇನೆ. ಮುಂದಿನ ವಾರ ಬೇರೆಡೆ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ. –ಎಸ್.ಬಿ. ಹಂಚಿನಾಳಕರ, ವ್ಯವಸ್ಥಾಪಕರು, ಸಾರಿಗೆ ಘಟಕ-ರಾಯಬಾಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.