ಶಿವು ಉಪ್ಪಾರ ಸಾವಿನ ತನಿಖೆಗೆ ಹೆಚ್ಚಿದ ಆಗ್ರಹ
|ವಿವಿಧೆಡೆ ಪ್ರತಿಭಟನಾ ರ್ಯಾಲಿ |ಪ್ರಕರಣದ ನಿಷ್ಪಕ್ಷ ತನಿಖೆ ನಡೆಯಲಿ |ಪಾಲಕರ ಮೇಲೆ ಪ್ರಭಾವಿಗಳ ಒತ್ತಡ
Team Udayavani, Jun 4, 2019, 9:22 AM IST
ಬೆಳಗಾವಿ: ಗೋರಕ್ಷಕ ಶಿವು ಉಪ್ಪಾರ ಸಾವು ಅನುಮಾನಕ್ಕೆ ಎಡೆಮಾಡಿದ್ದು ಇದರ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ ಶ್ರೀರಾಮಸೇನಾ ಹಿಂದೂಸ್ಥಾನ ಸಂಘಟನೆಯ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಬೆಳಗಾವಿ: ಗೋರಕ್ಷಕ ಶಿವು ಉಪ್ಪಾರ ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಶ್ರೀರಾಮಸೇನಾ ಹಿಂದೂಸ್ಥಾನ ಸಂಘಟನೆಯ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು ಶಿವು ಉಪ್ಪಾರ ಆತ್ಮಹತ್ಯೆ ಮಾಡಿಕೊಳ್ಳುವಂಥ ಹೇಡಿಯಾಗಿರಲಿಲ್ಲ. ಆದರೆ ಆತನ ಸಾವು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ತನ್ನ ಮನೆಯನ್ನು ಬಿಟ್ಟು ಎಪಿಎಂಸಿ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಸಂಶಯ ಹುಟ್ಟುಹಾಕಿದೆ. ಕಾರಣ ಇದರ ಬಗ್ಗೆ ತನಿಖೆ ನಡೆಸುವದು ಅಗತ್ಯ ಎಂದರು.
ಶಿವು ಉಪ್ಪಾರ ಕೊಲೆಯಾಗಿದೆ. ಅವರ ಕುಟುಂಬ ಬಡತನದಲ್ಲಿದೆ. ಮಗನ ಸಾವಿನಿಂದ ತಂದೆ ತಾಯಿ ನೊಂದಿದ್ದಾರೆ. ಅವರ ಮೇಲೆ ಯಾರೋ ಪ್ರಭಾವಿಗಳ ಒತ್ತಡವಿದೆ ಎಂದು ಮೇಲ್ನೊಟಕ್ಕೆ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಶಿವು ಉಪ್ಪಾರನ ಮೊಬೈಲ್ ಕರೆಗಳ ತನಿಖೆ ಮಾಡಬೇಕು. ಫೇಸ್‌ಬುಕ್‌ನಲ್ಲಿ ಅವನು ಉಲ್ಲೇಖೀಸಿರುವ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು.
ಸಾವು ಸಂಭವಿಸಿ ವಾರದ ಮೇಲಾಗಿದ್ದರೂ ಇದುವರೆಗೆ ತನಿಖೆಯಲ್ಲಿ ಯಾವುದೇ ಪ್ರಗತಿ ಆಗಿಲ್ಲ. ರಾಜಕಾರಣಿಗಳು ಹಾಗೂ ಅಧಿಕಾರಿಗಳು ಈ ಕೊಲೆಯನ್ನು ಮುಚ್ಚಿಹಾಕುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಗೋ ಹತ್ಯೆಯನ್ನು ಯಾರು ಮಾಡುತ್ತಿದ್ದಾರೆ ಎಂದು ಶಿವು ಉಪ್ಪಾರ ಹೇಳಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದರೂ ಪೊಲೀಸರು ಈ ಆರೋಪಿಯನ್ನು ಯಾವ ಕಾರಣಕ್ಕೆ ಬಂಧಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡ ರಮಾಕಾಂತ ಕೊಂಡುಸ್ಕರ್, ರಾಜು ಜಾಧವ, ಭರತ ಪಾಟೀಲ ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.