ಹೆಣ್ಣುಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್
ನಿರ್ಭಯ ಯೋಜನೆಯನ್ನು 700 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದೆ.
Team Udayavani, Dec 24, 2022, 6:15 PM IST
ಬೆಳಗಾವಿ: ಸಮಾಜ ಕಲ್ಯಾಣ, ಹಿಂದುಳಿದ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಕ್ರೈಸ್ತ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಂದ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಓಬವ್ವ ಆತ್ಮರಕ್ಷಣಾ ಕಲೆ-ಕರಾಟೆ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಕರಾಟೆ ಪ್ರದರ್ಶನ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್‌ಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ. ಎಲ್ಲಾ ಶಿಕ್ಷಣ ಸಂಸ್ಥೆಗಳು ಅಲ್ಪಾವಧಿ ಕೋರ್ಸ್‌ಗಳನ್ನು ಕಲಿಸುವ ಅವಶ್ಯಕತೆ ಇದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ಹಂತದಿಂದ ತರಬೇತಿ ನೀಡುವುದು ಸೂಕ್ತ ಎಂದರು.
ಆತ್ಮರಕ್ಷಣಾ ಕಲೆ ಕಲಿತವರು ಇತರ ಹೆಣ್ಣುಮಕ್ಕಳಿಗೆ ಈ ತರಬೇತಿ ನೀಡಬೇಕು. ಗ್ರಾಮೀಣ ಮಹಿಳೆಯರು, ದುಡಿಯುವ ಮಹಿಳೆಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಈ ವಿದ್ಯೆ ಕಲಿಸಿದರೆ ದೊಡ್ಡ ಪ್ರಮಾಣದಲ್ಲಿ ಇದನ್ನು ವಿಸ್ತರಿಸಬಹುದು.
ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಕಲೆ ತಿಳಿದಿದ್ದರೆ ಸುರಕ್ಷಿತ ಸಮಾಜ ನಿರ್ಮಾಣವಾಗಲು ಸಾಧ್ಯ. ಸರ್ಕಾರ ಈ ಕಾರ್ಯಕ್ರಮ ವಿಸ್ತರಿಸಿ ಹೆಣ್ಣುಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿದೆ. ನಿರ್ಭಯ ಯೋಜನೆಯನ್ನು 700 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಇದನ್ನು ಎಲ್ಲಾ ನಗರಗಳಲ್ಲಿ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮದೇ ಆದ ಕೊಡುಗೆಗಳನ್ನು ನೀಡುತ್ತಾ ಬರುತ್ತಿದ್ದಾರೆ.
ಭವ್ಯ ಭಾರತದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಈ ಕರಾಟೆ ಕಲೆಯ ಮಕ್ಕಳನ್ನು ನೋಡುತ್ತಿದ್ದರೆ ಕಿತ್ತೂರು ಚನ್ನಮ್ಮ, ಬೆಳವಡಿ ಮಲ್ಲಮ್ಮ, ಕೆಳದಿಯ ಚನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರಂತೆ ದೇಶಕ್ಕೆ ಒಳ್ಳೆಯ ಸಂದೇಶಗಳ ಮೂಲಕ ಕೊಡುಗೆಗಳನ್ನು ನೀಡುವುದರಲ್ಲಿ ಯಾವ ಸಂಶಯವಿಲ್ಲ ಎಂದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಮಾಧುಸ್ವಾಮಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.