ಮೂಡಲಗಿಯ ಶ್ರೀಪಾದಬೋಧ ಸ್ವಾಮೀಜಿ ಇನ್ನಿಲ್ಲ
Team Udayavani, Apr 20, 2020, 1:15 AM IST
ಬೆಳಗಾವಿ: ಮೂಡಲಗಿ ಶ್ರೀ ಶಿವಬೋಧರಂಗ ಸಿದ್ಧ ಸಂಸ್ಥಾನ ಮಠದ 12ನೇ ಪೀಠಾಧಿಪತಿ ಶ್ರೀಪಾದಬೋಧ ಸ್ವಾಮೀಜಿ (66) ಅವರು ರವಿವಾರ ರಾತ್ರಿ ನಿಧನರಾದರು.
ಮೂಡಲಗಿ ಹಾಗೂ ಗೋಕಾಕ ಭಾಗದಲ್ಲಿ ಹೆಚ್ಚು ಪ್ರಸಿದ್ಧರಾಗಿದ್ದ ಶ್ರೀಗಳ ಅಗಲಿಕೆಯಿಂದ ತಾಲೂಕಿನಲ್ಲಿ ನೀರವ ಮೌನ ಆವರಿಸಿದೆ. ಈ ಭಾಗದಲ್ಲಿ ನಡೆದಾಡುವ ದೇವರು ಎಂದೇ ಕರೆಯಲ್ಪಡುತ್ತಿದ್ದ ಸ್ವಾಮೀಜಿಯವರ ಅಂತ್ಯಕ್ರಿಯೆ ಕೆಲವೇ ಜನರ ಸಮ್ಮುಖದಲ್ಲಿ ರವಿವಾರ ರಾತ್ರಿಯೇ ನೆರವೇರಿಸಲಾಯಿತು.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ನರಸಿಂಹವಾಡಿಯಲ್ಲಿ 30 ಮಾರ್ಚ್ 1954ರಂದು ಜನಿಸಿದ ಶ್ರೀಗಳು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ನರಸಿಂಹವಾಡಿಯಲ್ಲಿ ಪೂರೈಸಿದರು. ಸಾಂಗಲಿಯ ಕಸ್ತೂರ ಬಾ ಕಾಲೇಜಿನಲ್ಲಿ ಬಿಎಸ್ ಪದವಿ ಮಾಡಿದರು.
1971ರಲ್ಲಿ ಮೂಡಲಗಿ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿಗಳಾಗಿ ಪೀಠ ಅಲಂಕರಿಸಿದ್ದರು. ತಾಲೂಕಿನಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಮಕ್ಕಳಿಗೆ ಶಿಕ್ಷಣಕ್ಕೆ ಆಸರೆಯಾಗಿದ್ದರು. ಶ್ರೀಗಳಿಗೆ ಪತ್ನಿ, ಇಬ್ನರು ಪುತ್ರರು ಇದ್ದಾರೆ.
ಸಚಿವ ರಮೇಶ ಜಾರಕಿಹೊಳಿ ಕಂಬನಿ:
ಶ್ರೀಪಾದ ಬೋಧ ಸ್ವಾಮೀಜಿ ನಿಧನದಿಂದ ನಾಡಿಗೆ ಹಾನಿ ಉಂಟಾಗಿದೆ. ಹಲವು ಪರಿಸ್ಥಿತಿಗಳಲ್ಲಿ ನನಗೆ ಮಾರ್ಗದರ್ಶನ ಮಾಡಿದ್ದರು. ಮೂಡಲಗಿ ತಾಲೂಕು ರಚನೆ ಸೇರಿದಂತೆ ಎಲ್ಲ ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಶ್ರೀಗಳು ಹಲವಾರು ವರ್ಷಗಳಿಂದ ಅಪಾರ ಭಕ್ತರಿಗೆ ಮಾರ್ಗದರ್ಶನ ಮಾಡಿದ್ದರು. ಶ್ರೀಗಳ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಸದ್ಭಕ್ತರಿಗೆಲ್ಲಾ ಅವರ ಆಶೀರ್ವಾದ ದೊರೆಯಲಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಬಾಲಚಂದ್ರ ಜಾರಕಿಹೊಳಿ ಶೋಕ: ಈ ಭಾಗದ ನಡೆದಾಡುವ ದೇವರು ಎಂದೇ ಭಕ್ತರ ಹೃದಯದಲ್ಲಿ ನೆಲೆಸಿದ್ದ ಶ್ರೀಪಾದ ಬೊಧ ಮಹಾಸ್ವಾಮಿಗಳು ಐಕ್ಯರಾದ ಸುದ್ದಿ ಕೇಳಿ ದಿಗ್ಭ್ರಮೆ ಉಂಟಾಯಿತು. ಪೂಜ್ಯರ ಪವಿತ್ರ ಆತ್ಮಕ್ಕೆ ಭಕ್ತಿಪೂರ್ವಕ ಗೌರವವನ್ನು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಲ್ಲಿಸಿದ್ದಾರೆ.
ಶ್ರೀ ಮಠದ ಏಳ್ಗೆ ಹಾಗೂ ಶ್ರೇಯೋಭಿವೃದ್ದಿಗಾಗಿ ಶ್ರಮಿಸಿದ್ದರು. ಜೊತೆಗೆ ಶ್ರೀ ಮಠದ ಭಾವೈಕ್ಯತೆ ಮತ್ತು ಪರಂಪರೆಯನ್ನು ಪೂಜ್ಯರು ಯಥಾವತ್ತಾಗಿ ನಡೆಸಿಕೊಂಡು ಬಂದಿದ್ದರು. ಎಲ್ಲ ಸಮುದಾಯದವರನ್ನು ಒಂದೇ ಭಾವದಿಂದ ನೋಡಿಕೊಳ್ಳುತ್ತಿದ್ದರು.
ಸರಳ, ಸಜ್ಜನದ ಸಾಕಾರಮೂರ್ತಿಗೆ ಹೆಸರಾಗಿದ್ದರು. ಪೂಜ್ಯರ ಐಕ್ಯಯಿಂದಾದ ದುಃಖವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ. ಪೂಜ್ಯರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪರಮಾತ್ಮನಲ್ಲಿ ಪ್ರಾರ್ಥಿಸುವುದಾಗಿ ಶಾಸಕ ಬಾಲಚಂದ್ರ ಅವರು ಶೋಕ ಸಂತಾಪದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.