ಸಿದ್ದು-ಡಿಕೆಶಿ ಕಾಂಗ್ರೆಸನ್ನೇ ವಿನಾಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಶೆಟ್ಟರ್

ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆ

Team Udayavani, May 23, 2022, 8:00 PM IST

1-sadsad

ಮೂಡಲಗಿ : ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ ಅಸ್ತಿತ್ವವನ್ನು ಕಳೆದುಕೊಂಡಿರುವ ಈ ಪಕ್ಷವನ್ನು ಅದರ ನಾಯಕರುಗಳೇ ಕೂಡಿಕೊಂಡು ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧು-ಡಿಕೆಶಿ ಸೇರಿಕೊಂಡು ಕಾಂಗ್ರೆಸನ್ನು ನಾಶ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ಗೋಕಾಕ ಸಪ್ಲಾರ‍್ಸ ಸಭಾ ಭವನದಲ್ಲಿ ಸೋಮವಾರ ನಡೆದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಗೊತ್ತು-ಗುರಿಗಳಿಲ್ಲ. ಕೇವಲ ಸುಳ್ಳು ಪ್ರಚಾರ ಡಂಬಾಚಾರ ನಡೆಸುವುದೇ ಅದರ ಗುರಿಯಾಗಿದೆ ಎಂದರು.

ಇದುವರೆಗೂ ವಿಧಾನ ಪರಿಷತ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿಕ್ಕೆ ಆ ಪಕ್ಷಕ್ಕೆ ಸಾಧ್ಯವಾಗಿಲ್ಲ. ಸಿದ್ಧು-ಡಿಕೆಶಿ ಸೇರಿಕೊಂಡು ಪಕ್ಷವನ್ನು ಅವರೇ ನಿರ್ಣಾಮ ಮಾಡುತ್ತಾರೆ. ಈಗಾಗಲೇ ಪಂಜಾಬ್‌ನ ಸಿದ್ಧು ಜೈಲು ಸೇರಿದ್ದಾರೆ. ಇಲ್ಲಿ ಸಿದ್ಧು ಕಾಂಗ್ರೆಸನ್ನು ಸಂಪೂರ್ಣ ನೆಲಕ್ಕುರುಳಿಸುತ್ತಾರೆಂದರು.

ಮುಂಬರುವ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಸುಮಾರು 150 ಸ್ಥಾನಗಳನ್ನು ಬಿಜೆಪಿ ಪಡೆದು ಅಧಿಕಾರಕ್ಕೆ ಮತ್ತೊಮ್ಮೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ವಿಧಾನ ಪರಿಷತ್ : ಜಬ್ಬಾರ್,ಯಾದವ್ ಕಾಂಗ್ರೆಸ್ ಅಭ್ಯರ್ಥಿಗಳು

ಜೂನ್ 13  ರಂದು ನಡೆಯುವ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳು ಜಯಶಾಲಿಯಾಗಲಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸ್ಪಷ್ಟ ಬಹುಮತವಿಲ್ಲ. ಈ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಈಗಾಗಲೇ ಶಿಕ್ಷಕರ ಪ್ರತಿನಿಧಿಯಾಗಿ ಅರುಣ ಶಹಾಪೂರ ಹಾಗೂ ಪದವೀಧರ ಮತಕ್ಷೇತ್ರದಿಂದ ಹಣಮಂತ ನಿರಾಣಿ ಅವರು ಉತ್ತಮವಾಗಿ ವಿಧಾನ ಪರಿಷತ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿಕ್ಷಕರ ಹಾಗೂ ಪದವೀಧರರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಈ ಚುನಾವಣೆಯಲ್ಲಿ ಇಬ್ಬರನ್ನು ಪ್ರಥಮ ಪ್ರಾಶಸ್ತ್ಯ ದ ಮೂಲಕ ಆಯ್ಕೆ ಮಾಡಿ ಮತ್ತೊಮ್ಮೆ ನಿಮ್ಮೆಲ್ಲರ ಸೇವೆಗೆ ಅನುವು ಮಾಡಿಕೊಡುವಂತೆ ಶೆಟ್ಟರ್ ಮನವಿ ಮಾಡಿಕೊಂಡರು.

ಕೋವಿಡ್‌ನ್ನು ಸಮರ್ಥವಾಗಿ ನಿಭಾಯಿಸಿದ ಕೀರ್ತಿ ಪ್ರಧಾನಿಗಳಿಗೆ ಸಲ್ಲುತ್ತದೆ. ಇಡೀ ದೇಶದ ಜನತೆಗೆ ಉಚಿತವಾಗಿ ಲಸಿಕೆಗಳನ್ನು ನೀಡುವ ಮೂಲಕ ಭಾರತದಲ್ಲಿ ಕೋವಿಡ್ ನಿರ್ಮೂಲನೆಗೆ ಶ್ರಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಗಳನ್ನು ಇಡೀ ಜಗತ್ತೇ ಮೆಚ್ಚಿದೆ. ದೂರ ದೃಷ್ಟಿಯ ನಾಯಕತ್ವದಿಂದಾಗಿ ಇಡೀ ಪ್ರಪಂಚವೇ ಭಾರತದತ್ತ ನೋಡುತ್ತಿದೆ. ಮೋದಿ ಅವರು ಜಗತ್ತಿನ ಬಲಾಢ್ಯ ನಾಯಕರಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಬಿಜೆಪಿ ಬಲಾಢ್ಯವಾಗಿದ್ದು ಈ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಅಭ್ಯರ್ಥಿಗಳ ಪರ ದುಡಿಯಲಿದ್ದಾರೆ ಎಂದು ಹೇಳಿದ ಅವರು, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕೋರಿಕೆಯ ಮೇರೆಗೆ ಗೋಕಾಕದಿಂದ ಪ್ರಚಾರ ಸಭೆಯನ್ನು ಆರಂಭಿಸಿರುವುದಾಗಿ ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರು ತಲಾ 10  ಮತಗಳನ್ನು ಅಭ್ಯರ್ಥಿಗಳಿಗೆ ಹಾಕಿಸುವ ಮೂಲಕ ಕಾರ್ಯಕರ್ತರು ಈ ಚುನಾವಣೆಯಲ್ಲಿ ದುಡಿಯಬೇಕು. ಚುನಾವಣೆ ಬಂದಾಗ ಮಾತ್ರ ಕಾಂಗ್ರೆಸ್ ಪಕ್ಷ ಇಲ್ಲಸಲ್ಲದ ಆಪಾದನೆಗಳನ್ನು ಮಾಡುತ್ತಿದೆ. ಅವರಿಗೆ ಅಭಿವೃದ್ಧಿ ಬೇಕಾಗಿಲ್ಲ ಎಂದು ಅವರು ಹೇಳಿದರು.

ಅರಣ್ಯ ಹಾಗೂ ಆಹಾರ ಸಚಿವ ಉಮೇಶ ಕತ್ತಿ ಮಾತನಾಡಿ, ಪ್ರಕಾಶ ಹುಕ್ಕೇರಿ ಶಿಕ್ಷಕರೂ ಅಲ್ಲ. ಪದವೀಧರರೂ ಅಲ್ಲ. ಕೇವಲ ಅಧಿಕಾರದ ದಾಹಕ್ಕಾಗಿ ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಪ್ರತಿ ಚುನಾವಣೆಯನ್ನು ಪ್ರಕಾಶ ಹುಕ್ಕೇರಿ ಎದುರಿಸುತ್ತಿದ್ದು, ಈಗಾಗಲೇ ಸಾಕಷ್ಟು ಬಾರಿ ಚುನಾವಣೆಯನ್ನು ಎದುರಿಸಿದ್ದಾರೆ. ಅಧಿಕಾರವೇ ಅವರಿಗೆ ಮುಖ್ಯವಾಗಿದೆ ಹೊರತು, ಶಿಕ್ಷಕರ ಧ್ವನಿಯಲ್ಲ. ಅರುಣ ಶಹಾಪೂರ ಹಾಗೂ ಹನಮಂತ ನಿರಾಣಿ ಅವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಇವರನ್ನು ಮೇಲ್ಮನೆಗೆ ಕಳುಹಿಸುವ ಜವಾಬ್ದಾರಿ ನಿಮ್ಮದಾಗಿದೆ. ನಾನು, ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಈಗಲೂ ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ವೈಮನಸ್ಸುಗಳಿಲ್ಲ. ಅಭ್ಯರ್ಥಿಗಳ ಆಯ್ಕೆಗೆ ಜಿಲ್ಲೆಯ ಎಲ್ಲ ಬಿಜೆಪಿ ನಾಯಕರುಗಳು ಒಂದಾಗಿ ದುಡಿಯುತ್ತೇವೆ ಎಂದು ಅವರು ಹೇಳಿದರು.

ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ವಿಧಾನ ಪರಿಷತ್ ಅಭ್ಯರ್ಥಿಗಳಾದ ಅರುಣ ಶಹಾಪೂರ ಮತ್ತು ಹಣಮಂತ ನಿರಾಣಿ ಅವರಿಗೆ ಅತ್ಯಧಿಕ ಮತಗಳನ್ನು ನೀಡಿ ಅವರನ್ನು ಗೆಲ್ಲಿಸುತ್ತೇವೆ. ನಾಳೆಯಿಂದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರ ಪಡೆಯನ್ನು ರಚಿಸಲಾಗುವುದು. ಶಿಕ್ಷಣ ಕ್ಷೇತ್ರಕ್ಕೆ ಬಿಜೆಪಿ ಕೊಡುಗೆ ಅಪಾರವಾಗಿದೆ. ಈಗಾಗಲೇ ಕಳೆದ 18 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದೇನೆ. ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಹಾದಿಯಲ್ಲಿ ನಾವು ಮುನ್ನಡೆಯುತ್ತಿದ್ದೇವೆ. ಎಲ್ಲರೂ ಒಗ್ಗಟ್ಟಿನಿಂದ ಒಂದಾಗಿ ಈ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇವೆ ಎಂದು ಅವರು ತಿಳಿಸಿದರು

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಪ ಸದಸ್ಯ ರವಿಕುಮಾರ ಮಾತನಾಡಿ, ಚುನಾವಣಾಧಿಕಾರಿಗಳು ನೀಡುವ ಪೆನ್ನಿನಿಂದಲೇ 1  ನ್ನು ಬರೆಯುವ ಮೂಲಕ ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಅಭ್ಯರ್ಥಿಗಳಿಗೆ ನೀಡಬೇಕು. ಬಿಜೆಪಿಗೆ ಶಿಕ್ಷಣ ಮತ್ತು ಪದವೀಧರರ ಜೊತೆ ಅವಿನಾಭಾವ ಸಂಬಂಧವಿದೆ. ಶಿಕ್ಷಣ ಕ್ಷೇತ್ರದ ಸಮಗ್ರ ಪ್ರಗತಿಗೆ ಬಿಜೆಪಿ ದುಡಿಯುತ್ತಿದೆ. ಕಾಂಗ್ರೇಸ್ ಪಕ್ಷಕ್ಕೆ ಹಾಗೂ ಶಿಕ್ಷಕರಿಗೆ ಯಾವುದೇ ರೀತಿಯ ಸಂಬಂಧವಿಲ್ಲ. ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಕೀರ್ತಿ ನಮ್ಮ ಸರ್ಕಾರಕ್ಕೆ ಸಲ್ಲುತ್ತದೆ. ಅದರಲ್ಲೂ ದೇಶದಲ್ಲಿಯೇ ಜಾರಿಗ ತಂದ ಕೀರ್ತಿ ಕರ್ನಾಟಕವೇ ಮೊದಲಾಗಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಸಂಸದರಾದ ಮಂಗಲ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಗೋಕಾಕ ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳಿ, ನಗರ ಘಟಕ ಬಿಜೆಪಿ ಅಧ್ಯಕ್ಷ ಭೀಮಶಿ ಭರಮನ್ನವರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವಾಯವ್ಯ ಶಿಕ್ಷಕರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪೂರ, ವಾಯವ್ಯ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ಅವರು ಇದೇ ಸಂದರ್ಭದಲ್ಲಿ ಮತಯಾಚಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಸ್ವಾಗತಿಸಿದರು. ಪರಸಪ್ಪ ಬಬಲಿ ನಿರೂಪಿಸಿದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.