ಸಿದ್ದರಾಮಯ್ಯ- ಡಿಕೆಶಿಯಿಂದ ಕೊಳಕು ರಾಜಕಾರಣ: ಸಚಿವ ಸುರೇಶ ಅಂಗಡಿ
Team Udayavani, Jul 24, 2020, 4:10 PM IST
ಬೆಳಗಾವಿ: ದೇಶದಲ್ಲಿ ಭ್ರಷ್ಟಾಚಾರದ ಜನಕ ಹಾಗೂ ಅಧಿಪತಿ ಕಾಂಗ್ರೆಸ್ ಆಗಿದೆ. ಅಂಥದರಲ್ಲಿ ಆ ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಸುಳ್ಳು ಆರೋಪ ಮಾಡುವ ಮೂಲಕ ಕೊಳಕು ರಾಜಕಾರಣ ಮಾಡುತ್ತಿದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ವಾಗ್ದಾಳಿ ನಡೆಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಹುರುಳಿಲ್ಲದೇ ಆರೋಪ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದರಲ್ಲಿ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಶೋಭೆ ತರುವುದಿಲ್ಲ. ಅವರಿಬ್ಬರೂ ಆತ್ಮಾವಲೋಕನ ಮಾಡಿಕೊಳ್ಳಲಿ. ಕಾಂಗ್ರೆಸ್ ನಾಯಕರು ಕೊಳಕು ರಾಜಕಾರಣ ಮಾಡುವುದನ್ನು ಬಿಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ದೇಶ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಕೋವಿಡ್-19 ಸೋಂಕು ಬಂದಾಗುನಿಂದ ದೇಶದಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಂಕಿನ ವಿರುದ್ಧ ಎಲ್ಲರೂ ಹೋರಾಡಬೇಕು. ಕೋವಿಡ್ ಮುಕ್ತ ದೇಶ ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕು. ಎಲ್ಲ ರಾಜಕಾರಣಿಗಳು ಪಕ್ಷಾತೀತವಾಗಿ ಕೆಲಸ ಮಾಡಬೇಕಿದೆ. ಇಂಥ ಸ್ಥಿತಿಯಲ್ಲಿ ಕಾಂಗ್ರೆಸ್‌ನವರು ಚಿಲ್ಲರೆ ರಾಜಕಾರಣ ಮಾಡಿ ಜಮರ ದಿಕ್ಕು ತಪ್ಪಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದರು.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಉತ್ತಮ ಕೆಲಸ ಮಾಡುತ್ತಿವೆ. ಜನರ ಕಣ್ಣೀರು ಒರೆಸುವ ಕೆಲಸ ಮಾಡಲಾಗುತ್ತಿದೆ. ಬೇರೆ ವಿಷಯಗಳ ಬಗ್ಗೆ ಟೀಕಿಸಲು ಅವಕಾಶ ಇಲ್ಲವಾಗಿದೆ. ಹೀಗಾಗಿ ಇಂಥ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ಬಿಮ್ಸ್ ಆಸ್ಪತ್ರೆಯಲ್ಲಿ ನಡೆದ ಗಲಾಟೆ ಪೂರ್ವಯೋಜಿತ ಇದ್ದಂತಡ ಎನಿಸುತ್ತಿದೆ. ಸೋಂಕಿತರ ಬಗ್ಗೆ ವಿಶೇಷ ಕಾಳಜಿ ಇಟ್ಟುಕೊಂಡು ಹಗಲಿರುಳು ಶ್ರಮಿಸುತ್ತಿರುವ ವೈದ್ಯರ ಸೇವೆ ನಿಜಕ್ಕೂ ಶ್ಲಾಘನೀಯ. ಆದರೆ ವೈದ್ಯರ ಮೇಲೆ ಇಂಥ ದಾಳಿ ನಡೆದಿರುವುದು ಅಮಾನವೀಯ ಕೃತ್ಯವಾಗಿದೆ. ರೋಗಿ ಮೃತಪಟ್ಟ ಅರ್ಧ ಗಂಟೆಯಲ್ಲಿ ಅಷ್ಟೊಂದು ಜನರು ಹೇಗೆ ಬಂದರು. ಕಲ್ಲು ತೂರಾಟ ನಡೆಸಿ ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿದ್ದಾರೆ. ಘಟನೆಯ ಹಿಂದಿರುವ ಶಕ್ತಿಗಳನ್ನು ಪೊಲೀಸರು ಪತ್ತೆ ಹಚ್ಚಬೇಕು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ಗಲಾಟೆ ಮಾಡಿದವರು ದೇಹದ್ರೋಹಿಗಳು ಎಂದು ಗಂಭೀರ ಆರೋಪ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.