ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಸಿದ್ದರಾಮಯ್ಯ ವಾಗ್ದಾಳಿ

Team Udayavani, Jul 27, 2021, 7:29 PM IST

ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಸಿದ್ದರಾಮಯ್ಯ ವಾಗ್ದಾಳಿ

ಸಂಕೇಶ್ವರ : ಬಿಜೆಪಿಯವರಿಗೆ ಜನಹಿತ ಮುಖ್ಯವಲ್ಲ. ಅಭಿವೃದ್ದಿಪರ ಕಾಳಜಿ ಇಲ್ಲ. ಪ್ರವಾಹ ನಿರಾಶ್ರಿತರಿಗೆ ಕಣ್ಣಿರು ಒರೆಸುವ ಕಾಳಜಿ ಕೂಡಾ ಅವರಿಗಿಲ್ಲ. ರಾಜಕೀಯ ಮುಖ್ಯವಾಗಿರುವ ಅವರಿಗೆ ಕೇವಲ ಕೋಮವಾದ ಮಾಡುವದು, ಸುಳ್ಳು ಹೇಳುವದನ್ನು ಬಿಟ್ಟರೆ ಅವರಿಗೆ ಬೇರೆ ಎನೂ ಗೊತ್ತಿಲ್ಲ ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು

ಹಿರಣ್ಯಕೇಶಿ ನದಿಯಲ್ಲಿ ಉಂಟಾಗಿದ್ದ ಪ್ರವಾಹಪೀಡಿತ ಹುಕ್ಕೇರಿ ತಾಲೂಕಿನ ಸ್ಥಳಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 25 ತಾರೀಖು ಆದ ಬಳಿಕ ಒಂದು ಗಂಟೆ ಕೂಡಾ ಅಧಿಕಾರದಲ್ಲಿ ಇರಬಾರದು ಅಂತ ಯಡಿಯೂರಪ್ಪ ಅವರಿಗೆ ಸೂಚನೆ ನೀಡಲಾಗಿತ್ತು. ಅದಕ್ಕೆ ಯಡಿಯೂರಪ್ಪ ಅವರಿಗೆ 26ರಂದು ತಾವು ಸಿಎಂ ಸ್ಥಾನದಿಂದ ಕೆಳಗೆ ಇಳಿಯುವ ಬಗ್ಗೆ ಮೊದಲೆ ಗೊತ್ತಿತ್ತು. ಆದರೆ ಈ ಭಾಗದ ನಿರಾಶ್ರಿತರ ಮುಂದೆ ಸುಳ್ಳು ಹೇಳಲು ಯುಡಿಯೂರಪ್ಪ ಇಲ್ಲಿಗೆ ಬಂದಿದ್ದರು. ಯಾಕೆ ಇಲ್ಲಿ ಬಂದು ನಿರಾಶ್ರಿತರಿಗೆ ಸುಳ್ಳು ಹೇಳುಬೇಕಾಗಿತ್ತು ಎಂದು ಕುಟುಕಿದರು.

ಬಿಜೆಪಿಯವರು ಸುಳ್ಳು ಹೇಳುವದರಲ್ಲಿ ಬಹಳ ನಿಸ್ಸೀಮರು. ರಾಜ್ಯದ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಪರಿಹಾರ ನೀಡುವಲ್ಲಿ ಕೇಂದ್ರ ಮಲತಾಯಿ ಧೋರಣೆ ತೋರುತ್ತಿದೆ. ಈ ಕುರಿತು ಸದನದಲ್ಲಿ ಪ್ರಸ್ತಾಪ ಮಾಡುವದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಹೇಗಾದರು ಮಾಡಿ ಅಧಿಕಾರಕ್ಕೆ ಬರುವ ದಾರಿ ನೋಡುತ್ತಾರೆ ಅವರು, 2018ರಲ್ಲಿ ಜನಾ ಅವರಿಗೆ ಜನಬೆಂಬಲ ನೀಡಿದ್ದರಾ.? 17 ಜನಾ ಶಾಸಕರನ್ನು ಖರೀದಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ. 2009ರಲ್ಲಿ ಹಾಗೂ 2019ರಲ್ಲಿ ಆಗಲೂ ಬಿಎಸ್.ಯಡಿಯೂರಪ್ಪ ಅವರೆ ಮುಖ್ಯಮಂತ್ರಿ ಆಗಿದ್ದರು. ಆದರೆ ಆ ಸಂದರ್ಭದಲ್ಲಿ ಪ್ರವಾಹ ಪೀಡಿತರನ್ನು ಸರಿಯಾದ ರೀತಿಯಲ್ಲಿ ಸ್ಥಳಾಂತರ ಕಾರ್ಯ ಮಾಡಲಿಲ್ಲ. ಮನೆಗಳಿಗೆ ಪರಿಹಾರ ಕೊಡಲಿಲ್ಲ. ಕೇಂದ್ರ ಸರಕಾರದಿಂದು ಪರಿಹಾರ ತರುವ ಪ್ರಯತ್ನ ಮಾಡಲಿಲ್ಲ. ನಿರಾಶ್ರಿತರಿಗೆ ಪರಿಹಾರ ಕೊಡಿಸಲಿಲ್ಲ ಎಂದು ಬಿಜೆಪಿ ಸರಕಾರದ ಮೇಲೆ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು; ಮತ್ತೊರ್ವನಿಗೆ ಗಾಯ: ಗ್ರಾಮಸ್ಥರ ಆಕ್ರೋಶ

ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಅದರಲ್ಲಿ ಈ ಭಾಗದಲ್ಲಿ ನೂರು ವರ್ಷಗಳಲ್ಲಿ ಹಿಂದೆಂದೂ ಕಂಡರಿಯದ ರೀತಿ ಪ್ರವಾಹ ಉಂಟಾಗಿದೆ. ಆದರೆ ಎಲ್ಲ ರಾಜ್ಯಗಳಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರಿಗೆ ರಾಜ್ಯಕ್ಕೆ ಭೆಟಿ ನೀಡಿಲ್ಲ. ಬೇರೆ ರಾಜ್ಯಗಳಿಗೆ ಭೇಟಿ ನೀಡಿದರು. ರಾಜ್ಯದ ಬಗ್ಗೆ ಮಲತಾಯಿ ಕೇಂದ್ರದಿಂದ ಪರಿಹಾರ ಕೊಡಿಸುವಲ್ಲಿ ರಾಜ್ಯ ನಾಯಕರಿಗೆ ಸಾಧ್ಗವಾಗಿಲ್ಲ. ರಾಜ್ಯತ ಬಿಜೆಪಿ ಸರಕಾರ ಕೇಂದ್ರದ ಮೇಲೆ ಒತ್ತಡ ಹಾಕಿ ಪ್ರವಾಹಕ್ಕೆ ದುಡ್ಡು ತರಲೇ ಇಲ್ಲ ಇವೆಲ್ಲದರ ಕುರಿತು ಸದನಲ್ಲಿ ಪ್ರಸ್ತಾಪ ಮಾಡುತ್ತೇನೆ. ನಾವು ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಅವಲೋಕಿಸಲು ನಾಲ್ಕು ತಂಡಗಳನ್ನು ರಚನೆ ಮಾಡಿದ್ದೇವೆ. ಆ ತಂಡವು ಎಲ್ಲ ಕಡೆಗಳಲ್ಲಿ ಸಂಚರಿಸಿ ವರದಿ ನೀಡುತ್ತಾರೆ. ಆ ವರದಿ ಆದರಿಸಿ ಸರಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ನುಡಿದರು.

ಕಳೆದ ಎರಡು ವಾರ ಸುರಿದ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಲ್ಲಿ ಸುಮಾರು ಎಕರೆ 300 ಬೆಳೆ ಬೆಳೆ ನಾಶವಾಗಿದೆ. ಅದರಂತೆ ಪ್ರವಾಹ ಪೀಡಿದ ಸ್ಥಳಗಳಿಂದ ನಾಗರಿಕರಿಗೆ ಬೇರೆಡೆಗೆ ಸ್ಥಳಾಂತರ ಮಾಡುವ ಮೂಲಕ ಪರ್ಯಾಯ ಸೌಕರ್ಯ ಮಾಡಿಕೊಡುವಂತೆ ಮತ್ತು ಶೀಘ್ರವಾಗಿ ಪ್ರವಾಹಕ್ಕೆ ಮುಳುಗಡೆಯಾಗುವ ಸೇತುವೆಗಳನ್ನು ಎತ್ತರಿಸುವಂತೆ ಸರಕಾರಕ್ಕೆ ಪತ್ರ ಬರೆಯುವ ಮೂಲಕ ಒತ್ತಡ ಹಾಕುವದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿವರಿಸಿದರು. ಈ ಮೊದಲು ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ ಹಾಗೂ ಕೆಲವು ಗ್ರಾಮಗಳಿಗೆ ಬೇಟ್ಟಿ ನೀಡಿದ ಸಿದ್ದರಾಮಯ್ಯನವರು ಪ್ರವಾಹ ಪೀಡಿತರ ಅಹ್ವಾಲು ಆಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕಿ ಅಂಜಲಿ ನಿಂಬಾಳಕರ್, ಲಕ್ಷ್ಮೀ ಹೆಬ್ಬಾಳಕರ್, ಮಾಜಿ ಶಾಸಕರಾದ ಅಶೋಕ ಪಟ್ಟಣ, ಎ.ಬಿ.ಪಾಟೀಲ, ವಿನಯ ನಾವಲಗಟ್ಟಿ, ಲಕ್ಷ್ಮಣರಾವ ಚಿಂಗಳೆ ಸೇರಿದಂತೆ ಅನೇಕ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ಆಗಮಿಸುತ್ತಿದ್ದ ರಸ್ತೆಯಲ್ಲಿ ಲಾರಿ ಪಲ್ಟಿ :

ಹುಕ್ಕೇರಿ ತಾಲೂಕಿನಲ್ಲಿ ಹಿರಣ್ಯಕೇಶಿ ನದಿಯಿಂದ ಉಂಟಾಗಿದ್ದ ಪ್ರವಾಹ ಅವಲೋಕಿಸಲು ಆಗಮಿಸುತ್ತಿದ್ದ ಸಿದ್ದರಾಮಯ್ಯ ವಾಹನ ಆಗಮಿಸುವ 2 ನಿಮಿಷ ಮೊದಲು ಚಿಕ್ಕಾಲಗುಡ್ಡ ಗ್ರಾಮದ ಬಳಿ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಘಾತ ಸಂಭವಿಸಿದೆ. ಸಿದ್ದರಾಮಯ್ಯ ಆಗಮಿಸುತ್ತಿದ್ದ ರಸ್ತೆಯಲ್ಲೆ ಲಾರಿಯೊಂದು ಪಲ್ಟಿಯಾಗಿ ಬಿದ್ದ ಹಿನ್ನೆಲೆಯಲ್ಲಿ ಅಔಘಡ ಸಂಭವಿಸಿತ್ತು. ಸಿದ್ದರಾಮಯ್ಯ ಆಗಮನ ಸಂದರ್ಭದಲ್ಲಿ ಭಾರಿ ಅನಾಹುತ ತಪ್ಪಿದಂತಾಗಿದೆ.

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.