ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್‌ಫೋನ್‌


Team Udayavani, Jan 24, 2020, 3:22 PM IST

bg-tdy-1

ಚಿಕ್ಕೋಡಿ: ಅಂಗನವಾಡಿ ಕೇಂದ್ರಗಳ ಮಕ್ಕಳ ದಾಖಲಾತಿ, ಹಾಜರಾತಿ, ವಿವರಗಳನ್ನು ದಾಖಲಿಸಲು ಫೆಬ್ರುವರಿ ಮೊದಲ ವಾರದಲ್ಲಿ ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್‌ ಫೋನ್‌ ವಿತರಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ತಾಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ದೇವಸ್ಥಾನದ ಆವರಣದಲ್ಲಿ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ ಅಭಿಯಾನಕ್ಕೆ‌ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿ ಮನೆಗೆ ಇಲಾಖೆಯ ಯೋಜನೆಗಳನ್ನು ಮುಟ್ಟಿಸುವ ಕಾರ್ಯಗಳನ್ನು ಮಾಡಲಾಗುತ್ತಿದ್ದು, ನನ್ನ ಜವಾಬ್ದಾರಿ ನನ್ನ ಮನೆ ಅಷ್ಟೇ ಅಲ್ಲದೇ ಇಡೀ ರಾಜ್ಯದಲ್ಲಿರುವ ಪ್ರತಿ ಮನೆಯೂ ನನ್ನ ಕುಟುಂಬವೆಂದು ತಿಳಿದುಕೊಂಡು ಎಲ್ಲರೂ ಸುಖ-ಸಮಾಧಾನದಿಂದ ಇರಬೇಕೆಂದು ಬಯಸುತ್ತೇವೆ.

ಸರ್ಕಾರದ ಯೋಜನೆಗಳನ್ನು ನಿಮ್ಮ ಮನೆಗೆ ಮುಟ್ಟಿಸುವ ಕಾರ್ಯವನ್ನು ಎಲ್ಲರೂ ಕೂಡಿ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಮೇಲ್ವಿಚಾರಕಿಯರು ಧೈರ್ಯದಿಂದ ಕೆಲಸ ಮಾಡಬೇಕು ಎಂದರು. ತಾಯಿ ಎರಡು ಪಟ್ಟು ಆಹಾರ ಸೇವಿಸಿದರೆ ಹೊಟ್ಟೆಯಲ್ಲಿ ಮಗುವಿಗೂ ಅದರ ಅಂಶ ದೊರೆಯುತ್ತದೆ. ತರಕಾರಿ ಸೊಪ್ಪು, ಹಣ್ಣು, ಮೊಳಕೆ ಕಾಳುಗಳನ್ನು ತಿನ್ನಬೇಕು. ಇದರಿಂದ ಪೌಷ್ಟಿಕ ಆಹಾರ ದೇಹಕ್ಕೆ ದೊರೆಯುತ್ತದೆ. ಮಗು ಆರೋಗ್ಯವಾಗಿಬೆಳೆಯುತ್ತದೆ. ಪೌಷ್ಟಿಕಾಂಶದ ಕೊರತೆಯಿಂದ ಮಗು ಜನಿಸುವ ಸಮಯದಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಇದನ್ನು ನಿವಾರಿಸುವ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರು ಇದರ ಸದುಪಯೋಗಪಡೆದುಕೊಳ್ಳಬೇಕು. ಮಾತೃವಂದನಾ ಯೋಜನೆಯಡಿ ಗರ್ಭಿಣಿಯರಿಗೆ 6000 ರೂ ನೀಡುವ ಕೆಲಸ ರಾಜ್ಯ ಸರ್ಕಾರ ಮಾಡಿದೆ ಎಂದರು.

ನಂತರ ಶಿವಮೊಗ್ಗ ಸಮನ್ವಯ ಟ್ರಸ್ಟ್‌ ಕಲಾತಂಡದಿಂದ ಪೋಷಣ ಅಭಿಯಾನ,ಬಾಲ್ಯವಿವಾಹ ಬೇಟಿ ಬಚಾವೋ ಬೇಟಿ ಪಢಾವೋ ಹಾಗೂ ಮಾತೃವಂದನಾ ಯೋಜನೆ ಬಗ್ಗೆ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿ ಉಪನಿರ್ದೇಶಕರಾದ ಬಸವರಾಜ ವರವಟ್ಟಿ, ಜ್ಯೋತಿ ಸಂಸ್ಥೆಯ ನಿರ್ದೇಶಕರಾದ ಕಲ್ಲಪ್ಪ ಜಾಧವ, ಆಶಾಜ್ಯೋತಿ ವಿಶೇಷ ಶಾಲೆಯ ಅಧ್ಯಕ್ಷ ಜ್ಯೋತಿಪ್ರಸಾದ ಜೊಲ್ಲೆ, ಸಾವಿತ್ರಿ ಗುಗ್ಗರಿ, ಮಂಜುಶ್ರೀ ಕಟ್ಟಿಕರ, ಶಿವಮೊಗ್ಗ ಬೀದಿನಾಟಕ ಮುಖ್ಯಸ್ಥರಾದ ಮಂಜುಳಾ ಹಿರೇಮಠ, ಹಾಗೂ ಚಿಕ್ಕೋಡಿ ನಿಪ್ಪಾಣಿ ವಲಯದ ಎಲ್ಲಾ ಅಂಗನವಾಡಿ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತರು, ಸಹಾ‌ಯಕಿಯರು, ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.