ಸಂತ್ರಸ್ತರಿಗೆ ಶೀಘ್ರ ಪೂರ್ಣ ಪರಿಹಾರ
Team Udayavani, Jan 26, 2020, 2:34 PM IST
ಚಿಕ್ಕೋಡಿ: ನೆರೆ ಸಂದರ್ಭದಲ್ಲಾದ ಹಾನಿ ಪರಿಹಾರವನ್ನು ರಾಜ್ಯ ಸರ್ಕಾರ ಈಗಾಗಲೇ ಒದಗಿಸಿದೆ. ಇನ್ನೂ ಕೆಲ ಹಂತಗಳಲ್ಲಿ ಪೂರ್ಣ ಪ್ರಮಾಣದ ಪರಿಹಾರ ಸಿಗಲಿದೆ. ಕೆಲವೆಡೆ ಉಂಟಾದ ತಾಂತ್ರಿಕ ತೊಂದರೆ ನಿವಾರಿಸಿ ಕೂಡಲೇ ಮತ್ತಷ್ಟು ವೇಗವಾಗಿ ಸರ್ಕಾರ ಪರಿಹಾರ ಕಾರ್ಯ ನಡೆಸಲಿದೆ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ನೆರೆ ಸಂತ್ರಸ್ತರಿಗೆ ಅಭಯ ನೀಡಿದರು.
ತಾಲೂಕಿನ ಯಡೂರ ವೀರಭದ್ರೇಶ್ವರ ವಿಶಾಳಿ ಜಾತ್ರೆ ಅಂಗವಾಗಿ ಶನಿವಾರ ಹಮ್ಮಿಕೊಂಡ ನೆರೆ ಸಂತ್ರಸ್ತರ ಗೃಹ ನಿರ್ಮಾಣ ಕಾಮಗಾರಿಗೆ ಚಾಲನೆ, ಗೋಕೈಲಾಸ ಉದ್ಘಾಟನೆ, ನೂತನ ಯಾತ್ರಿ ನಿವಾಸ ಅಡಿಗಲ್ಲು ಹಾಗೂ ವಿಶ್ವಚೇತನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದೆಲ್ಲೆಡೆ ನಿರಂತರ ಪ್ರವಾಸ ಮಾಡಿ, ರೈತರು, ಸಂತ್ರಸ್ತರು ಹಾಗೂ ಬಡವರ ಸಮಸ್ಯೆ ಪರಿಹರಿಸಿದ್ದಾರೆ. ಪರಿಹಾರ ಒದಗಿಸಲು ಸರ್ಕಾರವನ್ನೇ ಅರ್ಹರ ಮನೆ ಬಾಗಿಲಿಗೆ ತಂದು ನಡೆದಾಡುವ ಸರ್ಕಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಧಾರ್ಮಿಕ ಆಚರಣೆ ಜತೆಗೆ ಸಾಂಸ್ಕೃತಿಕ ಆಚಾರ-ವಿಚಾರಗಳನ್ನು ಅನೇಕ ದಶಕಗಳಿಂದಲೂ ಪಸರಿಸುತ್ತಲೇ ಬಂದಿದ್ದಾರೆ. ಈ ಯಡೂರು ಮಠದ ಕಾರ್ಯ ಇತರ ಎಲ್ಲ ಮಠಮಾನ್ಯಗಳಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀಶೈಲ-ಯಡೂರ ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ವಿಆರ್‌ಎಲ್ ಸಮೂಹ ಸಂಸ್ಥೆಯ ಚೇರಮನ್ ವಿಜಯ ಸಂಕೇಶ್ವರ ದಂಪತಿಗೆ ಪ್ರಸಕ್ತ ಸಾಲಿನ ವಿಶ್ವಚೇತನ ಪ್ರಶಸ್ತಿ ನೀಡಿದರು. ರಾಜ್ಯಸಭೆ ಸದಸ್ಯ ಡಾ| ಪ್ರಭಾಕರ ಕೋರೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.