ಇಂದಿನಿಂದ ವಿಶೇಷ ರೈಲು ಸಂಚಾರ: ಅಂಗಡಿ
Team Udayavani, May 12, 2020, 4:59 AM IST
ಬೆಳಗಾವಿ: ದೇಶದಲ್ಲಿ ನಾಳೆ ಮೇ 12 ರಿಂದ ವಿಶೇಷ ರೈಲು ಸಂಚಾರ ಆರಂಭವಾಗಲಿದ್ದು ದೇಶದ ವಿವಿಧ ಕಡೆಗಳಿಗೆ 15 ರೈಲುಗಳು ಸಂಚಾರ ಆರಂಭಿಸಲಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲಾಕ್ ಡೌನ್ ಬಳಿಕ ವಲಸೆ ಹೋಗಿರುವ ಜನರ ಹಿತದೃಷ್ಟಿಯಿಂದ ರೈಲ್ವೆ ಸೇವೆ ಆರಂಭಿಸಲಾಗುತ್ತಿದೆ. ಆನ್ ಲೈನ್ ಮೂಲಕವೇ ಐಆರ್‌ಸಿಟಿಸಿಯಲ್ಲಿ ಬುಕಿಂಗ್ ಮಾಡಬೇಕು ಎಂದರು. ಕೋವಿಡ್ ನಿಯಂತ್ರಣ ಹಾಗೂ ಸುರಕ್ಷತಾ ಕ್ರಮ ಅನುಸರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಾಜಧಾನಿ ದೆಹಲಿಯಿಂದ 15 ರಾಜ್ಯಗಳಿಗೆ ರೈಲು ಸಂಚಾರ ನಡೆಸಲಿವೆ. ಪ್ರಯಾಣ ಬೆಳೆಸಿದವರು ತಪಾಸಣೆಗೆ ಒಳಗಾಗಬೇಕು. ಈ ರೈಲುಗಳಲ್ಲಿ ಸಾಮಾನ್ಯ ಬೋಗಿ ಇರುವುದಿಲ್ಲ ಎಂದರು.
ಸ್ಥಳೀಯ ರೈಲು ಸಂಚಾರವನ್ನು ಆಯಾ ರಾಜ್ಯ ಸರಕಾರಗಳು ನಿರ್ಧಾರ ಮಾಡುತ್ತವೆ. ಇದಲ್ಲದೆ ಮೃಟ್ರೋ ರೈಲು ಸಂಚಾರ ಸಹ ಆಯಾ ರಾಜ್ಯ ಸರಕಾರಗಳ ವ್ಯಾಪ್ತಿಗೆ ಬರುತ್ತಿದ್ದು ಅಲ್ಲಿನ ಪರಿಸ್ಥಿತಿ ನೋಡಿಕೊಂಡು ಸರಕಾರಗಳು ಮೆಟ್ರೋ ರೈಲು ಸಂಚಾರ ಆರಂಭ ಮಾಡುತ್ತವೆ ಎಂದರು. ಲಾಕ್‌ಡೌನ್ ಸಡಿಲಿಕೆಯಿಂದ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ. ಹಸಿರು ವಲಯಗಳಲ್ಲೂ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. ಇನ್ನೊಂದು ಕಡೆ ಈಗ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಮತ್ತೆ ಕೆಂಪು ವಲಯಕ್ಕೆ ಬದಲಾಗುವದ ಅತಂಕವಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.