ಉತ್ತಮ ಆರೋಗ್ಯಕ್ಕೆ ಕ್ರೀಡೆ ಅಗತ್ಯ
Team Udayavani, Nov 30, 2019, 5:31 PM IST
ಬೈಲಹೊಂಗಲ: ದೈಹಿಕ ಶಿಕ್ಷಣ ಎಲ್ಲರಿಗೂ ಅವಶ್ಯವಾಗಿದ್ದು, ಕ್ರೀಡೆಯಿಂದ ಉತ್ತಮ ಆರೋಗ್ಯ ಹಾಗೂ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಪ್ರತಿಯೊಬ್ಬರು ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಆರೋಗ್ಯ ಹೊಂದಬೇಕು ಎಂದು ಶಿಕ್ಷಣ ಇಲಾಖೆ ದೈಹಿಕ ಶಿಕ್ಷಣ ಪರಿವಿಕ್ಷಕ ಆರ್.ಬಿ. ಗೋಕಾಕ ಹೇಳಿದರು.
ಪಟ್ಟಣದ ಬೈಲವಾಡ ರಸ್ತೆಯಲ್ಲಿರುವ ಖಾಸ್ಗತೇಶ್ವರ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಮಾನವನ ಸರ್ವಾಂಗೀಣ ಬೆಳವಣಿಗೆ ಕ್ರೀಡೆ ಅವಶ್ಯವಾಗಿದ್ದು, ಕ್ರೀಡೆಯಿಂದ ಸದೃಢ ದೇಹ, ಸದೃಢ ಮನಸ್ಸು ಹಾಗೂ ಶಿಸ್ತು ನೀಡುತ್ತದೆ . ಎಲ್ಲರೂ ಕ್ರೀಡಾಮನೋಭಾವನೆ ಹೊಂದಿ, ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಕ್ರೀಡಾಪಟುಗಳಾಗಬೇಕು ಎಂದರು.
ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅದ್ಯಕ್ಷ ಎಸ್.ಎಂ. ಕರೀಕಟ್ಟಿ ಮಾತನಾಡಿ, ಉತ್ತಮ ಕ್ರೀಡಾ ಪಟುಗಳಿಗೆ ಜಿಲ್ಲಾ ಸಂಘದಿಂದ ಪ್ರೋತ್ಸಾಹ ನೀಡಿ ಅವರನ್ನು ರಾಷ್ಟ್ರಮಟ್ಟದ ಕ್ರೀಡಾ ಪಟುಗಳನ್ನಾಗಿ ಮಾಡಲುಸಂಪೂರ್ಣ ಸಹಾಯ ಸಹಕಾರ ನೀಡುತ್ತವೆ. ಆದ್ದರಿಂದ ಎಲ್ಲರೂ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಕಾಶೀನಾಥ ಬಿರಾದಾರ ಮಾತನಾಡಿ, ಜೀವನದಲ್ಲಿ ಸಾಧನೆ ಮಾಡಬೇಕಾದರೆ ಛಲ ಹಾಗೂ ಗುರು ಅವಶ್ಯವಾಗಿದ್ದು, ಕ್ರೀಡೆಯಿಂದ ಸಹಕಾರ ಮನೋಭಾವನೆ ಬಂದು ಸಮಾಜದಲ್ಲಿ ಉತ್ತಮವಾಗಿ ಬಾಳಬೇಕಾದರೆ ಕ್ರೀಡೆ ಅವಶ್ಯವಾಗಿದೆ ಎಂದರು. ಈ ವೇಳೆ ಉಪಾಧ್ಯಕ್ಷ ಯೋಗೀಶ ಬಿರಾದಾರ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಮಮತಾ ಹಿರೇಮಠ, ಮಹಾಂತೇಶ ರೇಶ್ಮಿ, ಬಿ.ಎಸ್.ರಾಗಿ, ಶಿಕ್ಷಕರಾದ ವಿ.ಎಸ್.ಕುದರಿ, ರಮೇಶ ರೋಟ್ಟಿ, ದೀಪಕ ಪಾಟೀಲ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.