ಕನ್ನಡದ ಕಾರ್ಯ ಮಾಡುವ ಶ್ರೀ ದೊರೆತಿದ್ದು ಸೌಭಾಗ್ಯ
ಕನ್ನಡದ ಅನೇಕ ಗ್ರಂಥಗಳನ್ನು ಶ್ರೀಮಠದಿಂದ ಹೊರ ತಂದಿದ್ದಾರೆ
Team Udayavani, Nov 30, 2021, 2:25 PM IST
ಬೆಳಗಾವಿ: ಭಗವತ್ ಗೀತೆ, ಸಿದ್ಧಾಂತ ಶಿಖಾಮಣಿ ಹೀಗೆ ಅನೇಕ ಸಂಸ್ಕೃತ ಗ್ರಂಥಗಳ ಸಿಡಿ ಮಾಡಿ ಜಗತ್ತಿಗೆ ಸಮರ್ಪಿಸುವ ಮಹನಿಯರನ್ನು ನಾವು ನೋಡಿದ್ದೇವೆ. ಆದರೆ ಚಿದಾನಂದ ಅವಧೂತರು ರಚಿಸಿದ 18 ಅಧ್ಯಾಯಗಳ ಕನ್ನಡದ ದೇವಿ ಪಾರಾಯಣವನ್ನು ಸುಮಾರು 14 ಲಕ್ಷ ರೂ. ವೆಚ್ಚ ಮಾಡಿ ನುರಿತ ಗಾಯಕರಿಂದ ಹಾಡಿಸಿ, ಕನ್ನಡದ ಪುರಾಣವನ್ನು ಲೋಕಕ್ಕೆ ಪರಿಚಯಿಸಿದ ಕೀರ್ತಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಸಲ್ಲುತ್ತದೆ ಎಂದು ಉಜ್ಜಯಿನಿ ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ಹೇಳಿದರು.
ನಗರದ ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ 49ನೇ ಸುವಿಚಾರ ಕಾರ್ಯಕ್ರಮದ ಸಾನ್ನಿದ್ಯ ವಹಿಸಿ ಮಾತನಾಡಿದ ಅವರು, ಕನ್ನಡದ ಬಗ್ಗೆ ಮಾತನಾಡುವುದು ಅಷ್ಟೇ ಅಲ್ಲ. ಗಡಿ ಭಾಗವಾಗಿರುವ ಬೆಳಗಾವಿಯಲ್ಲಿ ಕನ್ನಡದ ಕಾರ್ಯ ಮಾಡಿರುವ ಶ್ರೀಗಳು ಸಿಕ್ಕಿರುವುದು ಜಿಲ್ಲೆಯ ಜನರ ಭಾಗ್ಯ ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ಸರ್ವಧರ್ಮಿಯರ ಹಿತ ಕಾಪಾಡುವುದರ ಜತೆಗೆ ಸಮಾಜಮುಖೀ ಕೆಲಸ ಮಾಡಿಕೊಂಡು ಬರುತ್ತಿರುವ ಹುಕ್ಕೇರಿ ಹಿರೇಮಠ, ರಾಜ್ಯದಲ್ಲಿರುವ ಯಾವುದೇ ಮಠಗಳು ಮಾಡದ ಕಾರ್ಯವನ್ನು ಮಾಡಿದೆ. ಅನೇಕ ಸಂಸ್ಕೃತದ ಗ್ರಂಥಗಳನ್ನು ಆಧುನಿಕ ದಿನಮಾಗಳಲ್ಲಿ ಭಕ್ತರಿಗೆ ಅನುಕೂಲವಾಗುವ, ಅಭಿರುಚಿಗೆ ತಕ್ಕಂತೆ ಸಮಾಜಕ್ಕೆ ಮನವರಿಕೆಯಾಗುವ ಹಾಗೆ ಸಿಡಿ ರೂಪದಲ್ಲಿ ಮಾಡಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ನಿಜಕ್ಕೂ ಸಂತಸದ ಸಂಗತಿ ಎಂದು ಹೇಳಿದರು.
ಆರ್‌ಎಸ್‌ಎಸ್ ಪ್ರಮುಖ ಮನೋಹರ ಮಠದ ಮಾತನಾಡಿ, ದೇಶದಲ್ಲಿ ಅಧಿಕೃತವಾಗಿ 1ಲಕ್ಷ 30 ಸಾವಿರ ಮಠಗಳಿವೆ. ಈ ಮಠಗಳು ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುತ್ತಿವೆ. ಭಾರತ ಎಂದರೆ ಅದು ಧರ್ಮಭೂಮಿ ಎಂದರು. ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ ಮಾತನಾಡಿ, ಹುಕ್ಕೇರಿ ಹಿರೇಮಠದ ಶ್ರೀಗಳು ಕನ್ನಡ ಕಾರ್ಯಕ್ಕೆ ಬೆಂಗಾವಲಾಗಿ ನಿಂತಿದ್ದಾರೆ. ಕನ್ನಡಿಗರಿಗೆ ರಾಜ್ಯೋತ್ಸವದ ಸಂದರ್ಭದಲ್ಲಿ ಸಿಹಿ ಹೋಳಿಗೆ ಊಣಬಡಿಸಿದ್ದು, ಅಷ್ಟೆ ಅಲ್ಲ, ಎಲ್ಲಾ ಕನ್ನಡದ ಕಾರ್ಯಗಳಿಗೆ ಸ್ಪಂದಿಸುತ್ತಾರೆ. ಕನ್ನಡದ ಅನೇಕ ಗ್ರಂಥಗಳನ್ನು ಶ್ರೀಮಠದಿಂದ ಹೊರ ತಂದಿದ್ದಾರೆ ಎಂದು ಹೇಳಿದರು.
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನಾವು ಇಂದು ಕಿತ್ತೂರು ಕರ್ನಾಟಕದ ವಿಜಯೋತ್ಸವದ ಸಂದರ್ಭದಲ್ಲಿದ್ದೇವೆ. 49ನೇ ಸುವಿಚಾರ ಕಾರ್ಯಕ್ರಮಕ್ಕೆ ಆಗಮಿಸಿರುವ ಉಜ್ಜಯಿನಿ ಜಗದ್ಗುರುಗಳ ಆಶೀರ್ವಾದದಲ್ಲಿ ನಾವೆಲ್ಲರೂ ದೇಶಕ್ಕಾಗಿ, ನಾಡಿಗಾಗಿ ನಮ್ಮನ್ನು ನಾವು ಸಮರ್ಪಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಸತ್ಯಗಿರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವಿಜಯ ಶಾಸ್ತ್ರೀ, ಮಹಾಂತೇಶ ಶಾಸ್ತ್ರೀ, ವಿರುಪಾಕ್ಷಯ್ಯ ನೀರಲಗಿಮಠ, ವಿದ್ವಾನ್ ಚಂದ್ರಶೇಖರ ಸ್ವಾಮೀಜಿ ಉಪಸ್ಥಿತರಿದ್ದರು. ಬಸವರಾಜ ಹಳಂಗಳಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಎರಡನೇ ಬಾರಿ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾದ ಮಂಗಲಾ ಮೆಟಗುಡ್ಡ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.