ಶ್ರೀ ಪಂಚಲಿಂಗೇಶ್ವರಮಹಾರಥೋತ್ಸವ
Team Udayavani, Feb 24, 2020, 1:02 PM IST
ಮುನವಳ್ಳಿ: ಪಟ್ಟಣದ ಆರಾಧ್ಯ ದೈವ ಶ್ರೀ ಪಂಚಲಿಂಗೇಶ್ವರ ಮಹಾರಥೋತ್ಸವ ರವಿವಾರ ಸಂಜೆ ಸಂಭ್ರಮದಿಂದ ನಡೆಯಿತು. ಶ್ರೀ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು ರಥಕ್ಕೆ ಪೂಜೆ ಸಲ್ಲಿಸಿ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.
ಭಕ್ತರು ಬಾಳೆಹಣ್ಣು, ಉತ್ತತ್ತಿ ರಥಕ್ಕೆ ಹಾರಿಸಿ ಭಕ್ತಿಭಾವ ಸಮರ್ಪಿಸಿದರು. ಹರಹರ ಮಹಾದೇವ, ಓಂ ನಮಃ ಶಿವಾಯ, ಪಂಚಲಿಂಗೇಶ್ವರ ಮಹಾರಾಜ್ ಕೀ ಜೈ ಎಂಬ ಘೋಷಣೆ ಕೂಗಿದರು. ವಿವಿಧ ಮಂಗಲ ವಾದ್ಯ ವೈಭವಗಳು, ವೀರ ಪುರವಂತರ ಒಡಪುಗಳು ಹಾಗೂ ನೂರಾರು ಮೀಟರ್ ಉದ್ದದ ದಾರದೊಂದಿಗೆ ಪುರವಂತರು ಹಾಗೂ ಭಕ್ತರು ನಾಲಿಗೆಗೆ ಹಾಗೂ ಕೆನ್ನೆಗೆ ಶಸ್ತ್ರ ಚುಚ್ಚಿಕೊಳ್ಳುವ ದೃಶ್ಯಗಳು ಗಮನ ಸೆಳೆದವು.
ರಥೋತ್ಸವಕ್ಕೂ ಮೊದಲು ಬಣಗಾರ ಓಣಿಯಿಂದ ನಂದಿಕೋಲುಗಳು ಪೂಜೆಗೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಪಂಚಲಿಂಗೇಶ್ವರ ದೇವಸ್ಥಾನ ತಲುಪಿದವು. ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ, ಜಾತ್ರಾ ಉತ್ಸವ ಕಮಿಟಿ ಸದಸ್ಯರು, ಭಕ್ತರು ಪಾಲ್ಗೊಂಡಿದ್ದರು. ದೇವಸ್ಥಾನದ ಸಮುತ್ಛಯದಲ್ಲಿರುವ ಮೂರು ಲಿಂಗ ದೇವರಿಗೆ ಬುತ್ತಿಪೂಜೆ ಕಟ್ಟಲಾಗಿತ್ತು. ಶ್ರೀ ಮಲ್ಲಿಕಾರ್ಜುನ, ಶ್ರೀ ಬೊರಮ್ಮ, ಶ್ರೀ ತ್ರಂಬಕೇಶ್ವರ, ಶ್ರೀ ಬನಶಂಕರಿ, ನಾಗದೇವತೆ, ರುದ್ರಮುನೀಶ್ವರ, ಶ್ರೀ ರೇಣುಕಾ, ಶ್ರೀ ಕಾಲಭೈರವ ದೇವರಿಗೆ ರುದ್ರಾಭಿಷೇಕ, ಅಲಂಕಾರ ಪೂಜೆ ನೆರವೇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.