ಕೋವಿಡ್ ಆತಂಕದ ನಡುವೆ ಬೆಳಗಾವಿ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭ
Team Udayavani, Jun 25, 2020, 10:59 AM IST
ಬೆಳಗಾವಿ: ಕೋವಿಡ್-19 ಆತಂಕ, ಪಾಲಕರ ಪರ-ವಿರೋಧ ಅಭಿಪ್ರಾಯದ ಮಧ್ಯೆಯೂ ಬೆಳಗಾವಿ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭಗೊಂಡಿದೆ.
ಅಗತ್ಯ ಸುರಕ್ಷತಾ ಕ್ರಮ ಕೈಗೊಂಡು, ಸುಗಮವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಜ್ಜಾಗಿದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೆಚ್ಚಿನ ಗಮನಹರಿಸಲಾಗಿದೆ.
ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಏಳು ವಲಯಗಳಲ್ಲಿ 124 ಪರೀಕ್ಷಾ ಕೇಂದ್ರಗಳಿವೆ. 33,590 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 147 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ಒಟ್ಟು 40781 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ನಕಲು ತಡೆಯುವ ದೃಷ್ಟಿಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.
124 ಸ್ಥಾನಿಕ ಜಾಗೃತ ದಳಗಳು ಪರೀಕ್ಷಾ ಚಟುವಟಿಕೆ ಮೇಲೆ ನಿಗಾವಹಿಸಲಿವೆ. 104 ಮುಖ್ಯ ಅಧೀಕ್ಷಕರು, 30 ಉಪ ಮುಖ್ಯ ಅಧೀಕ್ಷಕರು, 1,923 ಕೊಠಡಿ ಮೇಲ್ವಿಚಾರಕರು, 44 ಮಾರ್ಗಾಧಿಕಾರಿಗಳು ಹಾಗೂ 65 ಜಿಲ್ಲಾಮಟ್ಟದ ವೀಕ್ಷಕರು ಕಾರ್ಯ ನಿರ್ವಹಿಸಲಿದ್ದಾರೆ.
ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಿ ಒಳಬಿಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.