ಕ್ರೀಡಾಂಗಣ-ವಸತಿ ನಿಲಯ ಲೋಕಾರ್ಪಣೆ
75 ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗುತ್ತಿದೆ
Team Udayavani, Dec 22, 2021, 6:08 PM IST
ಬೆಳಗಾವಿ: ನಗರದಲ್ಲಿ ಸುಮಾರು 16.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕ್ರೀಡಾ ಸಮುಚ್ಚಯಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಮಂಗಳವಾರ ಚಾಲನೆ ನೀಡಿದರು.
ಒಟ್ಟು 2 ಎಕರೆ 14 ಗುಂಟೆ ಜಾಗದಲ್ಲಿ 16.50 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ಮತ್ತು ಮಹಿಳಾ ಕ್ರೀಡಾ ವಸತಿ ನಿಲಯ ನಿರ್ಮಿಸಲಾಗಿದೆ. ಬೆಳಗಾವಿ ಕ್ರೀಡಾ ವಸತಿ ನಿಲಯದಲ್ಲಿ ಕುಸ್ತಿ, ಜ್ಯೂಡೊ, ವಾಲಿಬಾಲ್, ಅಥ್ಲೆಟಿಕ್ ಮತ್ತು ಸೆ„ಕ್ಲಿಂಗ್‌ಗೆ ತರಬೇತಿ ನೀಡಲಾಗುತ್ತಿದೆ. ಒಳಾಂಗಣ ಕ್ರೀಡಾಂಗಣದ ಕಟ್ಟಡದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಉಪಕರಣಗಳುಳ್ಳ ಜಿಮ್ ಹಾಲ್, ಜ್ಯೂಡೊ ಹಾಲ್, ಕುಸ್ತಿ ಅಂಕಣಗಳನ್ನು ನಿರ್ಮಿಸಲಾಗಿದ್ದು ಅತ್ಯಾಧುನಿಕ ವ್ಯವಸ್ಥೆ ಒದಗಿಸಲಾಗಿದೆ.
ಸುಮಾರು 2.19 ಕೋಟಿ ವೆಚ್ಚದಲ್ಲಿ ಮಹಿಳಾ ಕ್ರೀಡಾಪಟುಗಳಿಗೆ ವಸತಿ ನಿಲಯ ನಿರ್ಮಾಣ ಮಾಡಲಾಗಿದೆ. ಇದಲ್ಲದೆ ಬೆ„ಲಹೊಂಗಲದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ 2 ಕೋಟಿ ಅನುದಾನ ನೀಡಲಾಗಿದ್ದು, 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಸವದತ್ತಿ ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ 1 ಕೋಟಿ ಹಣ ನೀಡಲಾಗಿದೆ. ಇದಲ್ಲದೇ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಗರಡಿ ಮನೆಗಳ ನಿರ್ಮಾಣ ಹಾಗೂ ವ್ಯಾಯಾಮ ಸಾಮಾಗ್ರಿಗಳ ಪೂರೈಕೆಗಾಗಿ 5 ಕೋಟಿ
ಅನುದಾನ ನೀಡಲಾಗಿದ್ದು, ಇದರಲ್ಲಿ ಮೂರೂವರೆ ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ| ನಾರಾಯಣಗೌಡ ಮಾಹಿತಿ ನೀಡಿದರು.
ಬೆಳಗಾವಿ ಕ್ರೀಡಾ ವಸತಿ ನಿಲಯದಲ್ಲಿ ತರಬೇತಿ ಪಡೆಯುತ್ತಿರುವ ಹಲವರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಈ ಭಾಗದ ಪ್ರತಿಭಾನ್ವಿತ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಬೇಕೆಂಬ ಸದುದ್ದೇಶದಿಂದ ಅತ್ಯಾಧುನಿಕ ವ್ಯವಸ್ಥೆಯುಳ್ಳ ಕ್ರೀಡಾ ಸಮುಚ್ಚಯ ನಿರ್ಮಿಸಲಾಗಿದ್ದು, ಇದರಿಂದ ಕ್ರೀಡಾಪಟುಗಳಿಗೆ ಅನುಕೂಲವಾಗಲಿದೆ.
ಮುಂದಿನ ಒಲಿಂಪಿಕ್‌ನಲ್ಲಿ ಕರ್ನಾಟಕದಿಂದ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಿ, ಪದಕಗಳನ್ನು ಗೆಲ್ಲಬೇಕು. ಈ ನಿಟ್ಟಿನಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ 75 ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಈ ಒಳಾಂಗಣ ಕ್ರೀಡಾಂಗಣ ಮತ್ತು ಮಹಿಳಾ ಕ್ರೀಡಾಪಟುಗಳ ವಸತಿ ನಿರ್ಮಾಣದ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿಸುವಲ್ಲಿ ಕೇಂದ್ರ ಸಚಿವರಾಗಿದ್ದ ದಿ| ಸುರೇಶ ಅಂಗಡಿಯವರ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಸ್ಮರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಶಾಸಕ ಅನಿಲ ಬೆನಕೆ ಮೊದಲಾದವರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾನಗರಪಾಲಿಕೆಯ ಆವರಣದಲ್ಲಿ ಎರಡು ಕೋಟಿ ರೂ ವೆಚ್ಚದಲ್ಲಿ ಸಂಸದೀಯ ಭವನದ ಮಾದರಿಯಲ್ಲಿ ನಿರ್ಮಾಣ ಮಾಡಿರುವ ಅನೆಕ್ಸ್ ಕಟ್ಟಡವನ್ನು ಉದ್ಘಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.