ಅಂಗನವಾಡಿಯಲ್ಲೇ ನರ್ಸರಿ ಆರಂಭಿಸಿ
•ಚರ್ಚೆ ಇಲ್ಲದೆ ಏಕಾಏಕಿ ಸುತ್ತೋಲೆಗೆ ಖಂಡನೆ•ವಿವಿಧೆಡೆ ಅಂಗನವಾಡಿ ನೌಕರರ ಪ್ರತಿಭಟನೆ
Team Udayavani, Jun 19, 2019, 2:40 PM IST
ರಾಮದುರ್ಗ: ಅಂಗನವಾಡಿಯಲ್ಲೇ ಎಲ್ಕೆಜಿ, ಯುಕೆಜಿ ಪ್ರಾರಂಭಿಸಲು ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದ ತಾಲೂಕು ಸಮಿತಿ ವತಿಯಿಂದ ಸಿಡಿಪಿಒ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಮದುರ್ಗ: ಅಂಗನವಾಡಿಯಲ್ಲೇ ಎಲ್ಕೆಜಿ, ಯುಕೆಜಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು) ಸಂಯೋಜಿತ ತಾಲೂಕು ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಅಂಗನವಾಡಿ ನೌಕರರು ತಹಶೀಲ್ದಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಬಿಇಒ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಕಳೆದ 30-35 ವರ್ಷಗಳಿಂದ 3 ರಿಂದ 6 ವರ್ಷದ ಒಳಗಿನ ಮಕ್ಕಳಿಗೆ ಪೌಷ್ಠಿಕ ಆಹಾರ, ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವದರ ಮೂಲಕ ಅಂಗನವಾಡಿ ನೌಕರರು ಜನಪ್ರೀಯ ಐಸಿಡಿಎಸ್ ಯೋಜನೆಯಡಿ ಕಡಿಮೆ ವೇತನದಲ್ಲಿ ತಮ್ಮ ಜೀವನವನ್ನೆ ಕಳೆದಿದ್ದಾರೆ. ಇಂತಹ ಸಮಯದಲ್ಲಿ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾರ್ಥಮಿಕ ಶಾಲೆಗಳನ್ನು ತೆರೆದು 3.5 ವರ್ಷ ಮೇಲ್ಪಟ್ಟು ಮಕ್ಕಳಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 3:30ರ ತನಕ ಶಾಲೆ ನಡೆಸಬೇಕು. ಆದರೆ ಈ ಆದೇಶವನ್ನು ತರುವ ಪೂರ್ವದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಟ್ಟಿಗೆ ಮತ್ತು ಮಕ್ಕಳ, ಶಿಕ್ಷಣ ತಜ್ಞರೊಂದಿಗೆ, ಸಂಘಟನೆಗಳೊಂದಿಗೆ ಸಂವಾದ ನಡೆಸದೆ ಏಕಮುಖವಾಗಿ ಸುತ್ತೋಲೆ ತರಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಅಂಗನವಾಡಿ ನೌಕರರ ಸಂಘದ ತಾಲೂಕಾಧ್ಯಕ್ಷೆ ಸರಸ್ವತಿ ಮಾಳಶೆಟ್ಟಿ, ಕಾರ್ಯದರ್ಶಿ ಶಕುಂತಲಾ ನಾರಾಯಣಕರ, ಖಜಾಂಚಿ ತಾಹೀರಾ ಮಕನದಾರ, ಬೋರಮ್ಮ ತೆಕ್ಕಿ, ರುಕ್ಮಾಯಿ ಬಿಂಗೆ, ವಿಜಯಲಕ್ಷ್ತ್ರೀ ಸಿದ್ದಿಬಾಂವಿ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.