ರೈತ ಸಂಪರ್ಕ ಕೇಂದ್ರ ಕಟ್ಟಡ ಕಾಮಗಾರಿಗೆ ಚಾಲನೆ
Team Udayavani, Nov 11, 2019, 12:38 PM IST
ಅಥಣಿ: ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ 52 ಲಕ್ಷ ರೂ.ಗಳ ವಿಶೇಷ ಅನುದಾನದಲ್ಲಿ ರೈತ ಸಂಪರ್ಕ ಕೇಂದ್ರದ ಕಟ್ಟಡ ಕಾಮಗಾರಿಗೆ ಡಿಸಿಎಂ, ಕೃಷಿ ಸಚಿವ ಲಕ್ಷ್ಮಣ ಸವದಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಅಥಣಿ ತಾಲೂಕಿನ ರೈತರಿಗೆ ವಿಶೇಷ ಅನುದಾನದಲ್ಲಿ ಹನಿ ನೀರಾವರಿಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಸರಕಾರ 9 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ನಮ್ಮ ಭಾಗದ ರೈತರು ತಮ್ಮ ಜಮೀನುಗಳಲ್ಲಿ ನೀರು ಪೋಲಾಗದಂತೆ ಕ್ರಮ ವಹಿಸಬೇಕು. ರೈತರು ತಮ್ಮ ಜಮೀನುಗಳಲ್ಲಿ ಅತೀ ನೀರಾವರಿ ಮಾಡಿದ್ದರಿಂದ ಸವಳು-ಜವಳು ಆಗಿ ತಮ್ಮ ಭೂಮಿಯ ಫಲವತ್ತತೆ ಕಳೆದುಕೊಂಡಿದ್ದು, ಸರಕಾರ ನೀರು ಪೋಲಾಗದಂತೆ ಹನಿ ನೀರಾವರಿಗಾಗಿ 9 ಕೋಟಿ ರೂ.ಗಳಷ್ಟು ಹಣವನ್ನು ಮಂಜೂರು ಮಾಡಿದೆ. ಅರ್ಹ ರೈತರು ಅಥಣಿ ಕೃಷಿ ಇಲಾಖೆಗೆ ಅರ್ಜಿಗಳನ್ನು ಸಲ್ಲಿಸಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಚಿಕ್ಕೋಡಿ ಜಿಲ್ಲಾ ಉಪನಿರ್ದೇಶಕ ಎಲ್.ಐ. ರೂಢಗಿ, ಅಥಣಿ ಸಹಾಯಕ ನಿರ್ದೇಶಕಿ ಜಯಶ್ರೀ ಹಿರೇಮಠ, ಮುಖಂಡರಾದ ವಿಶ್ವನಾಥ ಗಣಿ, ವಿಜಯ ಮಂಗಸೂಳಿ, ಸಿಬ್ಬಂದಿ ರಮೇಶ ಚೌಗಲಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.